ಭದ್ರತೆ ದೃಷ್ಟಿಯಿಂದ ನಟ ದರ್ಶನ್‌ ಬೇರೆ ಜೈಲಿಗೆ ವರ್ಗಾವಣೆ ಸಾಧ್ಯತೆ

Date:

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ ಅವರನ್ನು ಭದ್ರತೆ ದೃಷ್ಟಿಯಿಂದ ಬೇರೆ ಜೈಲಿಗೆ ವರ್ಗಾವಣೆ ಮಾಡುವ ಸಾಧ್ಯತೆ ಇದೆ.

- Advertisement -

ದರ್ಶನ್‌ ಅವರನ್ನು ಬೇರೆ ಜೈಲಿಗೆ ವರ್ಗಾವಣೆ ಮಾಡಲು ಅವಕಾಶ ಕೊಡುವಂತೆ ಎಸ್‌ಪಿಪಿ ನ್ಯಾಯಾಲಯದಲ್ಲಿ ಮನವಿ ಮಾಡಿದ್ದು, ಈ ಸಂಬಂಧಿಸಿದಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನ್ಯಾಯಾಲಯ ಅರ್ಜಿ ಪುರಸ್ಕರಿಸಿದರೆ ತುಮಕೂರು ಜೈಲಿಗೆ ಕಳಿಸಲಾಗುತ್ತದೆ. ಇಲ್ಲವಾದರೆ ಪರಪ್ಪನ ಅಗ್ರಹಾರದ ಭದ್ರತಾ ಸಿಬ್ಬಂದಿ ಕೊಠಡಿಯಲ್ಲೇ ನಟ ಕಾಲ ಕಳೆಯಬೇಕಾಗುತ್ತದೆ.

ಬೇರೆ ಜೈಲಿಗೆ ವರ್ಗಾವಣೆ ಮಾಡಲು ಮನವಿ ಮಾಡಿರುವ ಕಾರಣಗಳೆಂದರೆ, ಜನಪ್ರಿಯ ನಟನಾಗಿರುವುದರಿಂದ ಹಲವರು ಪರಿಚಯವಿದ್ದು ಕೈದಿಗಳ ನಡುವೆ ಗಲಾಟೆಯಾಗುವ ಸಾಧ್ಯತೆ ಇದೆ. ಸಹ ಕೈದಿಗಳು ದರ್ಶನ್ ಮೇಲೆ ಅಟ್ಯಾಕ್ ಮಾಡಬಹುದು.

ಪ್ರಕರಣದಲ್ಲಿರುವ ಹಲವು ಆರೋಪಿಗಳಿಗೆ ರೌಡಿ ಸಂಪರ್ಕ ಇರುವ ಹಿನ್ನೆಲೆಯಲ್ಲಿ, ರೌಡಿಗಳ ಮುಖಾಂತರ ಸಾಕ್ಷಿ ನಾಶ ಮಾಡುವಲ್ಲಿ ಯತ್ನಿಸುವ ಸಾಧ್ಯತೆ ಇದೆ. ಜೊತೆಗೆ ದರ್ಶನ್‌ನನ್ನು ನೋಡಲು ಕೈದಿಗಳಿಂದ ಜೈಲಿನೊಳಗೆ ಹಾಗೂ ಅಭಿಮಾನಿಗಳಿಂದ ಜೈಲಿನ ಹೊರಗೆ ದೊಂಬಿ ಆಗುವ ಸಾಧ್ಯತೆಯೂ ಇದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಬೇರೆ ಜೈಲಿಗೆ ಸ್ಥಳಾಂತರ ಮಾಡಲು ಎಸ್‌ಪಿಪಿ ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...