ಮೈಸೂರಿನ ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ರಾಜೀನಾಮೆ

Date:

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ದೊಡ್ಡ ಬಹುಮತದೊಂದಿಗೆ ಜಯಭೇರಿ ಸಾಧಿಸಿದ ಬೆನ್ನಲ್ಲೇ ಮೈಸೂರಿನ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ತಮ್ಮ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ.

ಅಡ್ಡಂಡ ಕಾರ್ಯಪ್ಪ ಮೈಸೂರಿನ ರಂಗಾಯಣದ ನಿರ್ದೇಶಕರಾದ ಮೇಲೆ ಸದಾ ಒಂದಿಲ್ಲ ಒಂದು ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಲೇ ಬಂದಿದ್ದರು. ವಿಶೇಷವಾಗಿ ಕಾಂಗ್ರೆಸ್‌ ಮತ್ತು ಒಂದು ಕೋಮು ವಿರುದ್ಧ ವಿವಾದಗಳನ್ನು ಸೃಷ್ಟಿಸಿದ್ದರು.

‘ಟಿಪ್ಪು ನಿಜಕನಸುಗಳುʼ ನಾಟಕ ರಚಿಸಿ ಒಂದು ಕೋಮುವನ್ನು ಎತ್ತಿಕಟ್ಟುವ ಪ್ರಯತ್ನ ಮಾಡಿ ವಿವಾದ ಸೃಷ್ಟಿಸಿದ್ದರು. ನಂತರ ‘ಸಿದ್ದರಾಮಯ್ಯ ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಮುಂದಾದಾಗ ತೀವ್ರ ಟೀಕೆಗೆ ಗುರಿಯಾಗಿದ್ದರು. ಚುನಾವಣೆ ಮುನ್ನ ಉರಿಗೌಡ ಮತ್ತು ನಂಜೇಗೌಡ ಪಾತ್ರಗಳನ್ನು ಹರಿಯಬಿಟ್ಟು ಒಕ್ಕಲಿಗ ಮತ್ತು ಮುಸ್ಲಿಂರನ್ನು ಎತ್ತಿಕಟ್ಟುವ ಪ್ರಯತ್ನಕ್ಕೆ ಕೈಹಾಕಿರುವ ಆರೋಪ ಎದುರಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಒಕ್ಕಲಿಗ ಸಮುದಾಯದ ನಿರ್ಮಲಾನಂದನಾಥ ಸ್ವಾಮೀಜಿ ಸುದ್ದಿಗೋಷ್ಠಿ ನಡೆಸಿ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟ ಮೇಲೆ ಸ್ವಾಮೀಜಿ ಅವರ ಕ್ಷಮೆ ಕೋರಿದ್ದರು.

ಇತ್ತೀಚೆಗೆ ಮಡಿಕೇರಿಯಲ್ಲಿ ಚುನಾವಣಾ ಪ್ರಚಾರ ಭಾಷಣದಲ್ಲಿ ಪ್ರಚೋದನಾಕಾರಿಯಾಗಿ ಮಾತನಾಡಿದ ಆರೋಪದ ಮೇರೆಗೆ ಅಡ್ಡಂಡ ಕಾರ್ಯಪ್ಪ ವಿರುದ್ಧ ಪ್ರತ್ಯೇಕವಾಗಿ ಪ್ರಕರಣ ದಾಖಲಾಗಿತ್ತು.

ಅದಕ್ಕೂ ಮುನ್ನ ಟಿ ಶೆಟ್ಟಿಗೇರಿ ಗ್ರಾಮದಲ್ಲಿ ಮೇ 4ರಂದು ಬಿಜೆಪಿ ಪ್ರಚಾರ ಸಭೆಯಲ್ಲಿ ಕಾರ್ಯಪ್ಪ ಅವರು ಕೊಡವ ಮತ್ತು ಕನ್ನಡ ಭಾಷೆಯಲ್ಲಿ ಧರ್ಮ ಧರ್ಮಗಳ ನಡುವೆ ಸಾಮರಸ್ಯ ಕದಡಿ, ಶತ್ರುತ್ವ ಉಂಟು ಮಾಡುವ ಹಾಗೂ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟು ಮಾಡುವ ಮಾತುಗಳನ್ನಾಡಿದ್ದರು ಎಂದು ಆರೋಪಿಸಿ ಸ್ಥಳದಲ್ಲಿದ್ದ ಕ್ಷಿಪ್ರ ಪರಿಶೀಲನಾ ತಂಡದ ಅಧಿಕಾರಿ ಕುಮಾರಸ್ವಾಮಿ ದೂರು ನೀಡಿದ್ದರು.

ಹಾಗೆಯೇ ‘ಫೇಸ್‌ಬುಕ್ ಖಾತೆಯಲ್ಲಿ ಮತೀಯ ಸಂಘರ್ಷ ಉಂಟು ಮಾಡುವ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ’ ಎಂದು ಆರೋಪಿಸಿ ಏಪ್ರಿಲ್ 26ರಂದು ಪೊನ್ನಂಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಿ : ಸಚಿವ ಈಶ್ವರ ಖಂಡ್ರೆ

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ತೀವ್ರ ಹಿಂದುಳಿದಿದ್ದು, ಈ...

ದೇವದಾರಿ ಉಕ್ಕು ಗಣಿಗಾರಿಕೆ | ಆರು ವರ್ಷಗಳ ಹಿಂದೆ ವಿರೋಧ – ಇಂದು ಒಪ್ಪಿಗೆ; ಇದು ಕೇಂದ್ರ ಸಚಿವ ಎಚ್‌ಡಿಕೆ ವರಸೆ!

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿದ್ದು, ಮೋದಿ ನೇತೃತ್ವದ ಎನ್‌ಡಿಎ...

ಪೋಕ್ಸೋ ಪ್ರಕರಣ | ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್‌ ಮಧ್ಯಂತರ ಆದೇಶ

ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು...

ಬಿಎಸ್‌ವೈ ಪೋಕ್ಸೊ | ಕಾನೂನು ರಕ್ಷಕರಿಂದಲೇ ಕಾನೂನು ಉಲ್ಲಂಘನೆ: ವಕೀಲ ಎಸ್‌ ಬಾಲನ್ ಆರೋಪ

"ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧ ಗಂಭೀರವಾಗಿರುವ ಪೋಕ್ಸೊ ಪ್ರಕರಣ...