ದತ್ತು ಮಗು ಪ್ರಕರಣ | ಸೋನು ಶ್ರೀನಿವಾಸ್ ಗೌಡ 4 ದಿನ ಪೊಲೀಸ್​ ಕಸ್ಟಡಿಗೆ ಒಪ್ಪಿಸಿ ಸಿಜೆಎಂ ಕೋರ್ಟ್ ಆದೇಶ

Date:

ಸಾಮಾಜಿಕ ಜಾಲತಾಣದ ಮೂಲಕ ಜನಪ್ರಿಯತೆ ಗಳಿಸಿದ್ದ ಸೋನು ಶ್ರೀನಿವಾಸ್ ಗೌಡ ಕಾನೂನು ಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ಪಡೆದ ಆರೋಪದ ಮೇಲೆ ಅವರ ಬಂಧನವಾಗಿದೆ. ಬ್ಯಾಡರಹಳ್ಳಿ ಠಾಣೆಯ ಪೊಲೀಸರು ಸೋನು ಗೌಡ ಅವರನ್ನು ಮಾರ್ಚ್‌ 22ರಂದು ನ್ಯಾಯಾಧೀಶರ ಮುಂದೆ ಹಾಜರಿಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ 4 ದಿನಗಳ ಕಾಲ ಅವರನ್ನು ಪೊಲೀಸ್​ ಕಸ್ಟಡಿಗೆ ಒಪ್ಪಿಸಿ ಸಿಜೆಎಂ ಕೋರ್ಟ್ ಆದೇಶ ನೀಡಿದೆ.

- Advertisement -

ಕಾನೂನು ಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ಪಡೆದ ಆರೋಪದ ಮೇಲೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಅಪಾರ್ಟ್‌ಮೆಂಟ್ ಫ್ಲಾಟ್‌ನಲ್ಲಿಂದಲೇ ಪೊಲೀಸರು ಸೋನು ಗೌಡ ಅವರನ್ನು ಮಾರ್ಚ್‌ 22ರಂದು ಬೆಳಿಗ್ಗೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದೇ ದಿನ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಸಿಜೆಎಂ ಕೋರ್ಟ್ ಮಾರ್ಚ್ 25ರವರೆಗೆ ಸೋನುಗೌಡ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇಂದಿನಿಂದ ನಾಲ್ಕು ದಿನಗಳವರೆಗೂ ಸೋನು ಗೌಡ ಅವರನ್ನು ಬ್ಯಾಡರಹಳ್ಳಿ ಠಾಣೆಯ ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಬಾಲಕಿ ಪರಿಚಯವಾಗಿದ್ದ ಸ್ಥಳ, ಬಾಲಕಿಯ ನಿವಾಸ ಸೇರಿ ಹಲವು ಕಡೆಗಳಿಗೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ. ಅಲ್ಲದೇ, ರಾಯಚೂರಿಗೆ ಕರೆದೊಯ್ದು ಪೊಲೀಸರು ತನಿಖೆ ನಡೆಸಲಿದ್ದಾರೆ. ಮತ್ತೆ, ಮಾರ್ಚ್​ 25ರಂದು ಸೋನು ಶ್ರೀನಿವಾಸ್​ ಗೌಡ ಅವರನ್ನು ಬ್ಯಾಡರಹಳ್ಳಿ ಠಾಣೆಯ ಪೊಲೀಸರು ಕೋರ್ಟ್​ಗೆ ಹಾಜರುಪಡಿಸಬೇಕಿದೆ.

ಸದ್ಯ ಸೋನುಗೌಡ ವಿಚಾರಣೆ ನಡೆಸುತ್ತಿರುವ ಪೊಲೀಸರು, ರಾತ್ರಿ ಸಮಯ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಅವರನ್ನು ಇರಿಸಿ, ಮಾರ್ಚ್‌ 23 ರಂದು ಬೆಳಿಗ್ಗೆ ಠಾಣೆಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಐಪಿಎಲ್‌ ಪಂದ್ಯ: ರಾತ್ರಿ 11.30ರವರೆಗೆ ಮೆಟ್ರೋ ರೈಲು ಸಂಚಾರ ವಿಸ್ತರಣೆ

ಏನಿದು ಪ್ರಕರಣ?

ಸೋನು ಶ್ರೀನಿವಾಸ್ ಗೌಡ ಅಕ್ರಮವಾಗಿ 8 ವರ್ಷದ ಮಗುವನ್ನು ಇಟ್ಟುಕೊಂಡಿದ್ದಾರೆ. ಅಲ್ಲದೇ ಆ ಮಗುವನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾಳೆ. ಯಾವುದೇ ಕಾನೂನಿನ ನಿಯಮಗಳನ್ನು ಪಾಲಿಸದೇ ಈ ರೀತಿ ಮಾಡುವುದು ಅಪರಾಧ ಎಂದು ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ದಾಖಲಿಸಿದ್ದಾರೆ.

ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಸೋನು ಶ್ರೀನಿವಾಸ್ ಗೌಡ ಅವರನ್ನು ಮಾರ್ಚ್‌ 22ರಂದು ಬಂಧಿಸಿದ್ದಾರೆ.

ಸೋನು ಗೌಡ ಬಾಲಕಿಯ ಜೊತೆಗೆ ತೆಗೆದುಕೊಂಡ ಫೋಟೋ ಮತ್ತು ವಿಡಿಯೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...