ಈರುಳ್ಳಿ, ಟೊಮೆಟೊ ನಂತರ ಇದೀಗ ಬೆಳ್ಳುಳ್ಳಿ ಬೆಲೆ ಗಗನಕ್ಕೆ ಏರಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ ₹300 ರಿಂದ ₹400 ತಲುಪಿದೆ. ಒಂದು ತಿಂಗಳಲ್ಲಿ ಬೆಳ್ಳುಳ್ಳಿ ಬೆಲೆ ಸುಮಾರು ಎರಡು ಪಟ್ಟು ಹೆಚ್ಚಾಗಿದೆ.
ಒಂದು ತಿಂಗಳ ಹಿಂದೆ ಚಿಲ್ಲರೆ ಬೆಲೆ ಕೆಜಿಗೆ ₹200 ರಿಂದ ₹250 ಇತ್ತು. ಈ ವರ್ಷ ಹವಾಮಾನ ವೈಪರೀತ್ಯದಿಂದ ಬೆಳ್ಳುಳ್ಳಿ ಬೆಳೆ ಹಾಳಾಗಿದೆ. ಜತೆಗೆ ಕಡಿಮೆ ಉತ್ಪಾದನೆಯಿಂದಾಗಿ ಮಾರುಕಟ್ಟೆಗಳಲ್ಲಿ ಬೆಳ್ಳುಳ್ಳಿಯ ಪೂರೈಕೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಇದರಿಂದ ಬೆಳ್ಳುಳ್ಳಿ ಬೆಲೆಯಲ್ಲಿ ಏರಿಕೆ ಉಂಟಾಗಿದೆ.
ನಾಸಿಕ್ ಮತ್ತು ಪುಣೆಯಲ್ಲಿ ಬೆಳ್ಳುಳ್ಳಿ ಹೆಚ್ಚಾಗಿ ಬೆಳೆಯಲಾಗುತ್ತದೆ. ಹೊಸ ಬೆಳೆ ಮಾರುಕಟ್ಟೆಗೆ ಬರಲು ಇನ್ನೂ ಸಮಯ ಹಿಡಿಯುತ್ತದೆ. ಅಲ್ಲಿಯವರೆಗೂ ಬೆಳ್ಳುಳ್ಳಿ ಬೆಲೆ ಹೆಚ್ಚಾಗುವ ಸಾಧ್ಯತೆಯಿದೆ.
ಈ ಸುದ್ದಿ ಓದಿದ್ದೀರಾ? ಸೋಷಿಯಲ್ ಮೀಡಿಯಾ ಖಾತೆ ಖಾಸಗಿಯಾಗಿರಲಿ, ಗೊತ್ತಿರುವವರಿಗೆ ಮಾತ್ರ ಹಂಚಿ : ಆಯುಕ್ತ ದಯಾನಂದ
ಬೀದರ್‌ನಲ್ಲಿ ಬೆಳ್ಳುಳ್ಳಿ ಬೆಲೆ ₹400 ಇದ್ದು, ಬೆಂಗಳೂರಿನಲ್ಲಿ ₹300 ರಿಂದ ₹350 ಇದೆ.