ಪರಿಣಾಮಕಾರಿ ಬರ ನಿರ್ವಹಣೆಗೆ ಅಧಿಕಾರಿಗಳಿಗೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸೂಚನೆ

Date:

Advertisements

ಪರಿಣಾಮಕಾರಿ ಬರ ನಿರ್ವಹಣೆಗೆ ಕೃಷಿ ಹಾಗೂ ಜಲಾನಯನ ಇಲಾಖೆ ಅಧಿಕಾರಿಗಳು ಹೆಚ್ಚಿನ
ಕಾಳಜಿ ವಹಿಸಿ ಕೆಲಸ ನಿರ್ವಹಣೆ ಮಾಡಬೇಕು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಸೂಚಿಸಿದ್ದಾರೆ.

ವಿಕಾಸ ಸೌಧದ ಕೊಠಡಿ ಸಂಖ್ಯೆ 422ರಲ್ಲಿಂದು ಕೃಷಿ ಹಾಗೂ ಜಲಾನಯನ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು
ಅಧಿಕಾರಿಗಳಿಗೆ ‌ಹಲವು ಸಲಹೆ ಸೂಚನೆ ನೀಡಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಮುಂದುವರೆದಿದೆ. ಅಧಿಕಾರಿಗಳು ನಿರಂತರವಾಗಿ ರೈತರೊಂದಿಗೆ ಸಂಪರ್ಕದಲ್ಲಿದ್ದು ಆತ್ಮವಿಶ್ವಾಸ ತುಂಬಬೇಕು. ಸಲಹೆ, ಮಾರ್ಗದರ್ಶನ ನೀಡುತ್ತಾ, ಅರಿವು ಮೂಡಿಸಬೇಕು ಎಂದರು.

Advertisements

ಎಲ್ಲ ಗ್ರಾಮಗಳಲ್ಲಿ ನಿಖರ ಬೆಳೆ ಸಮೀಕ್ಷೆ ನಡೆಸಬೇಕು. ಸದ್ಯದ ಪರಿಸ್ಥಿತಿಯಲ್ಲಿ ಪರ್ಯಾಯ ಬೆಳೆ ಸಾಧ್ಯತೆ ಬಗ್ಗೆ ಅಧ್ಯಯನ ನಡೆಸಿ ರೈತರಿಗೆ ಮಾಹಿತಿ ನೀಡಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ರೈತರ ಹಿತ ಸಂರಕ್ಷಣೆ ಮೊದಲ ಆದ್ಯತೆಯಾಗಬೇಕು. ಅಧಿಕಾರಿಗಳು ಸುಲಭವಾಗಿ ರೈತರಿಗೆ ಸಿಗುವಂತಿರಬೇಕು ಎಂದು ಸಚಿವ ಎನ್. ಚಲುವರಾಯಸ್ವಾಮಿ ಸೂಚನೆ ನೀಡಿದರು.

ವಿಮೆ ಪರಿಹಾರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಮೇಲ್ವಿಚಾರಣೆ ನಡೆಸಿ, ಎಲ್ಲ ಅರ್ಹರಿಗೆ ಸೌಲಭ್ಯ ತಲುಪಬೇಕು ಎಂದ ಸಚಿವರು ಹಿಂಗಾರು ಬೆಳೆಗಳ ವಿಮೆ ನೋಂದಣಿ ಬಗ್ಗೆ ವ್ಯಾಪಕ‌ ಜಾಗೃತಿ ಮೂಡಿಸಿ ಹೆಚ್ಚಿನ ನೊಂದಣಿ ಮಾಡಿಸಲು ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮ್ಯಾಕ್ಸ್‌ವೆಲ್‌ ಬೌಲಿಂಗ್‌ ಮೋಡಿಗೆ ಶರಣಾದ ಭಾರತ; 2-1 ಗೆಲುವಿನೊಂದಿಗೆ ಟೀಂ ಇಂಡಿಯಾಗೆ ಸರಣಿ ಕೈವಶ

ಬಜೆಟ್ ನಲ್ಲಿ ಘೋಷಣೆಯಾದ ಎಲ್ಲಾ ಕಾರ್ಯಕ್ರಮ ,ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕು.
ಅನುದಾನ ಬಿಡುಗಡೆಗೆ ಅನುಗುಣವಾಗಿ ಎಲ್ಲಾ ‌ಜಿಲ್ಲೆಗಳಲ್ಲಿ ಶೇ 100% ಆರ್ಥಿಕ ಭೌತಿಕ ಗುರಿ ಸಾಧನೆಯಾಗಬೇಕು ಎಂದು ಸಚಿವರು ತಿಳಿಸಿದರು.

ಉದ್ಯೋಗ ಖಾತರಿ ಯೋಜನೆ ಸದ್ಬಳಕೆ ಮಾಡಿ ಜಲ‌ ಸಂರಕ್ಷಣೆ ಚಟುವಟಿಕೆಗಳಿಗೆ ಆಧ್ಯತೆ ನೀಡಿಕ ಎಂದು ಸಚಿವರು ತಿಳಿಸಿದರು.

ಹಿಂಗಾರಿನಲ್ಲಿ ಸಾಧ್ಯವಿರುವ ಒಣ ಬೇಸಾಯದ ಬಗ್ಗೆ ಕೃಷಿ ವಿಶ್ವ ವಿದ್ಯಾಲಯಗಳ ವಿಜ್ಞಾನಿಗಳಿಂದ ಮಾಹಿತಿ ಪಡೆದು ಅದನ್ನು ರೈತರಿಗೆ ವರ್ಗಾಯಿಸಿ, ಮುಂದಿನ ದಿನಗಳಲ್ಲಿ ಸಮಗ್ರ ಕೃಷಿ (ಮಿಶ್ರ ಬೇಸಾಯ) ಹಾಗೂ ಸಿರಿಧಾನ್ಯ ಬೆಳೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ರೈತರ ನಷ್ಟ ತಪ್ಪಿಸಿ ನಿಶ್ಚಿತ ಆದಾಯ ಖಾತರಿ ಮಾಡುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಿ ಎಂದು ಸಚಿವರು ಸಲಹೆ ನೀಡಿದರು.

ಕಳಪೆ‌ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ, ಕೃಷಿ ಯಾಂತ್ರೀಕರಣ, ಯಂತ್ರಧಾರೆ, ಸಬ್ಸಿಡಿ ಯೋಜನೆಯಲ್ಲಿ ಯಾವುದೇ ದುರ್ಬಳಕೆಯಾಗದಂತೆ ನಿಗಾವಹಿಸಬೇಕು. ನಿರ್ಲಕ್ಷ್ಯ ತೋರಿದಲ್ಲಿ ಅಯಾಯ ಜಿಲ್ಲೆಗಳ ಜಂಟಿ ನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.

ನವೋದ್ಯಮ ಪ್ರೋತ್ಸಾಹ ಯೋಜನೆ ಅನುಷ್ಠಾನ, ನಂದಿನಿ ಮಾದರಿಯಲ್ಲಿ ಕೃಷಿ ಉತ್ಪನ್ನಗಳ ಬ್ರಾಂಡಿಗ್,
ಕೇಂದ್ರ ಪುರಸ್ಕೃತ ಜಲಾನಯನ ಅಭಿವೃದ್ಧಿ ಮತ್ತು ಜಲ ಸಂರಕ್ಷಣಾ ಯೋಜನೆಗಳ ಪರಿಣಾಮಕಾರಿ ಬಳಕೆ ಕುರಿತು ಕೃಷಿ ಸಚಿವರು ಸೂಚನೆ ‌ನೀಡಿದರು.

ಕೃಷಿ ಇಲಾಖೆ ಆಯುಕ್ತರಾದ ವೈ ಎಸ್. ಪಾಟೀಲ್, ನಿರ್ದೇಶಕರಾದ ಜಿ ಟಿ ಪುತ್ರ, ಜಲಾನಯನ ಇಲಾಖೆ ಆಯುಕ್ತರಾದ ಗಿರೀಶ್, ನಿರ್ದೇಶಕರಾದ ಶ್ರೀನಿವಾಸ್ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಹಾಗೂ ವಿವಿಧ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X