ಮಹಿಳೆಯರ, ಮಕ್ಕಳ ರಕ್ಷಣೆಗಾಗಿ ಅಕ್ಕ ಪಡೆ: ಏನಿದು, ಹೇಗೆ ಕಾರ್ಯನಿರ್ವಹಿಸಲಿದೆ?

Date:

ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ರಾಜ್ಯ ಸರ್ಕಾರವು ರಾಜ್ಯದಾದ್ಯಂತ 'ಅಕ್ಕ ಪಡೆ'ಯನ್ನು ನವೆಂಬರ್ 19ರಿಂದ ಆರಂಭಿಸುತ್ತಿದೆ. ಮಹಿಳೆಯರು ಮತ್ತು ಮಕ್ಕಳಿಗೆ ಆಗುವ ದೌರ್ಜನ್ಯ ತಡೆಗಟ್ಟಲು ಮತ್ತು ತುರ್ತು ಸಂದರ್ಭದಲ್ಲಿ ಬೆಂಬಲ ನೀಡುವ ನಿಟ್ಟಿನಲ್ಲಿ ಈ ಉಪಕ್ರಮವನ್ನು ಆರಂಭಿಸಲಾಗುತ್ತಿದೆ.

ಶಾಲಾ-ಕಾಲೇಜು, ಉದ್ಯೋಗ ಸ್ಥಳ, ರೈಲು, ಬಸ್, ವಿಮಾನ ಹೀಗೆ ಎಲ್ಲೇ ಹೋದರೂ ಮಹಿಳೆಯರ ಮೇಲಿನ ದೌರ್ಜನ್ಯ ತಪ್ಪಿದ್ದಲ್ಲ. ಸಾರ್ವಜನಿಕ ಸ್ಥಳ ಮಾತ್ರವಲ್ಲದೇ ಕೌಟುಂಬಿಕ ಹಿಂಸಾಚಾರಕ್ಕೂ ಬಲಿಯಾಗುವುದು ಹೆಚ್ಚಾಗಿ ಮಹಿಳೆಯರೇ. ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಮಹಿಳೆಯರ ಮೇಲಿನ ಹಿಂಸಾಚಾರ ಪ್ರಕರಣಗಳು ಅಧಿಕವಾಗುತ್ತಿದೆ. ಅದರಲ್ಲಿಯೂ ನಮ್ಮ ರಾಜ್ಯದಲ್ಲಿ ಕಳೆದ ಐದು ವರ್ಷಗಳಿಂದ ಮಹಿಳೆಯರ ವಿರುದ್ಧದ ದೌರ್ಜನ್ಯ ಪ್ರಕರಣಗಳು ಏರುಗತಿಯಲ್ಲೇ ಸಾಗುತ್ತಿದೆ.

- Advertisement -

ಇವೆಲ್ಲವುದರ ನಡುವೆ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ರಾಜ್ಯ ಸರ್ಕಾರವು ರಾಜ್ಯದಾದ್ಯಂತ ‘ಅಕ್ಕ ಪಡೆ’ಯನ್ನು ನವೆಂಬರ್ 19ರಿಂದ ಆರಂಭಿಸಿದೆ. ಮಹಿಳೆಯರು ಮತ್ತು ಮಕ್ಕಳಿಗೆ ಆಗುವ ದೌರ್ಜನ್ಯ ತಡೆಗಟ್ಟಲು ಮತ್ತು ತುರ್ತು ಸಂದರ್ಭದಲ್ಲಿ ಬೆಂಬಲ ನೀಡುವ ನಿಟ್ಟಿನಲ್ಲಿ ಈ ಉಪಕ್ರಮವನ್ನು ಆರಂಭಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ʼಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್ʼ ಕಾರ್ಯಾಗಾರ

ಎರಡು ವರ್ಷಗಳ ಹಿಂದೆ ಪ್ರಾಯೋಗಿಕವಾಗಿ ಬೀದರ್‌ನಲ್ಲಿ ಅಕ್ಕ ಪಡೆಯನ್ನು ಆರಂಭಿಸಲಾಗಿತ್ತು. 2023ರಲ್ಲಿ ಬೀದರ್ ಜಿಲ್ಲಾ ಪೊಲೀಸರು ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಅಕ್ಕ ಪಡೆ ಎಂಬ ಈ ವಿಶೇಷ ಮಹಿಳಾ ಪೊಲೀಸ್ ತಂಡವನ್ನು ರಚಿಸಿದ್ದರು. 12ನೇ ಶತಮಾನದ ಶರಣೆ, ಕನ್ನಡದ ಪ್ರಥಮ ಮಹಿಳಾ ಕವಿಯತ್ರಿ ಅಕ್ಕಮಹಾದೇವಿ ಹೆಸರಿನಲ್ಲಿ ಈ ಕಾರ್ಯಪಡೆಯನ್ನು ಬೀದರ್ ಪೊಲೀಸರು ಆರಂಭಿಸಿದ್ದರು.

ಬೀದರ್‌ನಲ್ಲಿ ಬೀದಿ ಕಾಮಣ್ಣರು ಮತ್ತು ದುಷ್ಕರ್ಮಿಗಳಿಂದ ಮಹಿಳೆಯರು ಮತ್ತು ಹೆಣ್ಣುಮಕ್ಕಳನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ಈ ಅಕ್ಕ ಪಡೆಗೆ ವಿಶೇಷ ತರಬೇತಿಯನ್ನು ನೀಡಲಾಗಿದೆ. ಈ ಪಡೆಯು ಸಾರ್ವಜನಿಕ ಸ್ಥಳಗಳಲ್ಲಿ, ಶಾಲೆ-ಕಾಲೇಜುಗಳ ಬಳಿ ಸಂಚರಿಸಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಾ ಬಂದಿದೆ.

ಬೀದರ್‌ನಲ್ಲಿ ಅಕ್ಕ ಪಡೆ ಯಶಸ್ವಿಯಾದ ಕಾರಣ ಭಾಲ್ಕಿ, ಹುಮನಾಬಾದ್ ಮತ್ತು ಔರಾದ್ ಸೇರಿದಂತೆ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೂ ವಿಸ್ತರಣೆ ಮಾಡಲಾಗಿತ್ತು. ಇದೀಗ ರಾಜ್ಯದಾದ್ಯಂತ ವಿಸ್ತರಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಮಾಡಿದೆ. ಬೆಂಗಳೂರು, ಮಂಗಳೂರು, ಉಡುಪಿ, ಮೈಸೂರು, ಬೆಳಗಾವಿ ಸೇರಿ ರಾಜ್ಯದ ಏಳು ಜಿಲ್ಲೆಗಳಿಗೆ ಮೊದಲ ಹಂತದಲ್ಲಿ ಯೋಜನೆಯನ್ನು ವಿಸ್ತರಣೆ ಮಾಡಲಾಗುತ್ತದೆ. ಬಳಿಕ ಕ್ರಮೇಣವಾಗಿ ಇತರೆ ಜಿಲ್ಲೆಗಳಿಗೂ ವಿಸ್ತರಣೆ ಮಾಡಲಾಗುತ್ತದೆ.

ಈಗಾಗಲೇ ಈ ಉಪಕ್ರಮಕ್ಕಾಗಿ ರಾಜ್ಯ ಸರ್ಕಾರದಿಂದ 110 ಕೋಟಿ ರೂ. ಅನುದಾನಕ್ಕೆ ಮನವಿ ಮಾಡಲಾಗಿದೆ. ಜತೆಗೆ ನಿರ್ಭಯ ಯೋಜನೆ ಅಡಿಯಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೂ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

ಏನಿದು ಅಕ್ಕ ಪಡೆ, ಉದ್ದೇಶಗಳೇನು?

ಮಹಿಳೆಯರು ಮತ್ತು ಮಕ್ಕಳ ಮೇಲಿನ ಹಿಂಸಾಚಾರವನ್ನು ತಡೆಗಟ್ಟಲು ರಾಜ್ಯ ಸರ್ಕಾರ ಆರಂಭಿಸಿರುವ ಸುರಕ್ಷತೆ ಮತ್ತು ರಕ್ಷಣಾ ಪಡೆಯೇ ‘ಅಕ್ಕ ಪಡೆ’ ಆಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇತೃತ್ವದಲ್ಲಿ ಈ ಪಡೆಯು ಕಾರ್ಯನಿರ್ವಹಿಸಲಿದೆ. ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ದೌರ್ಜನ್ಯವನ್ನು ತಡೆಗಟ್ಟುವುದು ಮಾತ್ರವಲ್ಲದೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವುದೂ ಈ ಅಕ್ಕಪಡೆಯ ಉದ್ದೇಶವಾಗಿದೆ. ಹಾಗೆಯೇ ದೌರ್ಜನ್ಯಕ್ಕೊಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ಬೆಂಬಲವನ್ನೂ ನೀಡಲಾಗುತ್ತದೆ.

ಇದನ್ನು ಓದಿದ್ದೀರಾ? ಪೊಲೀಸ್ ʼಅಕ್ಕ ಪಡೆ‌ʼ ಕಾರ್ಯ ಶ್ಲಾಘನೀಯ : ರಾಜ್ಯಾದ್ಯಂತ ವಿಸ್ತರಣೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಅಕ್ಕ ಪಡೆ ಎಂಬ ಮಹಿಳಾ ಕೆಡೆಟ್-ಪೊಲೀಸರ ತಂಡ

ಅಕ್ಕ ಪಡೆಯಲ್ಲಿ ಮಹಿಳಾ ಕೆಡೆಟ್‌ಗಳು, ಮಹಿಳಾ ಕಾನ್‌ಸ್ಟೆಬಲ್‌ಗಳು ಸೇರಿ ಒಟ್ಟು 6ರಿಂದ 10 ಮಂದಿ ಇರುತ್ತಾರೆ. ಕನಿಷ್ಠ ಇಬ್ಬರು ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್‌ ಮತ್ತು ತರಬೇತಿ ಪಡೆದ ಎನ್‌ಸಿಸಿ ಕೆಡೆಟ್‌ಗಳು ಇರುತ್ತಾರೆ. ಈ ಯೋಜನೆಯಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಮಹಿಳಾ ಎನ್‌ಸಿಸಿ ಕೆಡೆಟ್‌ಗಳನ್ನು ನೇಮಕಾತಿ ಮಾಡಲಾಗುತ್ತದೆ. ಒಟ್ಟು 11 ತಿಂಗಳುಗಳ ಕಾಲ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲಾಗುತ್ತದೆ. ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ಅಥವಾ ಯಾವುದೇ ಪದವಿ ಪಾಸಾಗಿರಬೇಕು. ಎನ್‌ಸಿಸಿ ‘ಸಿ’ ಪ್ರಮಾಣಪತ್ರ ಹೊಂದಿರಬೇಕು. 35ರಿಂದ 45 ವರ್ಷದೊಳಗಿರಬೇಕು. ದೈಹಿಕ ಸದೃಢತೆ, ಸಂವಹನ ಕಲೆಗಳನ್ನು ನೋಡಿ ಆಯ್ಕೆ ಮಾಡಲಾಗುತ್ತದೆ. ಹೆಚ್ಚಾಗಿ ಸ್ಥಳೀಯ ನಿವಾಸಿಗಳಿಗೆ ಆದ್ಯತೆ ನೀಡಲಾಗುತ್ತದೆ. ಹಾಗೆಯೇ ಅಭ್ಯರ್ಥಿಗಳು ಬೆಳಿಗ್ಗೆ 7ರಿಂದ ಮಧ್ಯಾಹ್ನ 2 ಮತ್ತು ಮಧ್ಯಾಹ್ನ 2ರಿಂದ ರಾತ್ರಿ 8ರ ಪಾಳಿಯಲ್ಲಿ ಕೆಲಸ ಮಾಡಲು ಸಿದ್ಧರಾಗಿರಬೇಕು. ಈ ಹುದ್ದೆಗೆ ಅರ್ಜಿ ಸಲ್ಲಿಸಲು ನವೆಂಬರ್ 10ರವರೆಗೆ ಕಾಲಾವಕಾಶ ನೀಡಲಾಗಿತ್ತು.

ಈ ಅಕ್ಕ ಪಡೆ ಹೇಗೆ, ಎಲ್ಲಿ ಕಾರ್ಯನಿರ್ವಹಿಸಲಿದೆ?

ಶಾಲಾ-ಕಾಲೇಜು, ಮಾಲ್‌ಗಳು, ದೇವಸ್ಥಾನ, ಉದ್ಯಾನ, ಬಸ್ ನಿಲ್ದಾಣ ಸೇರಿದಂತೆ ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಅಕ್ಕ ಪಡೆಯು ಗಸ್ತು ತಿರುಗುತ್ತದೆ. ಬೆಳಿಗ್ಗೆ 7ರಿಂದ ಮಧ್ಯಾಹ್ನ 2ರವರೆಗೆ ಮತ್ತು ಮಧ್ಯಾಹ್ನ 2ರಿಂದ ರಾತ್ರಿ 8 ಗಂಟೆವರೆಗೆ ಕಾರ್ಯನಿರ್ವಹಿಸಲಿದೆ. ಮಹಿಳೆಯರು, ಯುವತಿಯರು, ವಿದ್ಯಾರ್ಥಿಗಳ ಜತೆ ಅಸಭ್ಯವಾಗಿ ವರ್ತಿಸುವ, ಚುಡಾಯಿಸುವವರಿಗೆ ತಕ್ಕ ಪಾಠವನ್ನು ಕಲಿಸಲಿದೆ. ಹೊಯ್ಸಳ ವಾಹನಗಳ ಮಾದರಿಯಲ್ಲಿಯೇ ಅಕ್ಕ ಪಡೆ ಕಾರ್ಯನಿರ್ವಹಿಸಲಿದೆ. ಪೋಕ್ಸೋ, ಬಾಲ್ಯವಿವಾಹ, ಮಾನವ ಕಳ್ಳಸಾಗಣೆ, ಸೈಬರ್ ವಂಚನೆ ಬಗ್ಗೆ ಮಾರ್ಗದರ್ಶನ ನೀಡಲಾಗುತ್ತದೆ. ಹಾಗೆಯೇ ತರಬೇತಿ ಪಡೆದ ಅಕ್ಕ ಪಡೆದ ಸದಸ್ಯರನ್ನು ಬಸ್-ರೈಲು ನಿಲ್ದಾಣ, ಹೆಣ್ಣು ಮಕ್ಕಳ ಹಾಸ್ಟೆಲ್, ಇತರೆ ಸ್ಥಳಗಳಲ್ಲಿ ನಿಯೋಜಿಸಲಾಗುತ್ತದೆ.

ದೌರ್ಜನ್ಯದ ಬಗ್ಗೆ ಕರೆ ಬಂದಾಗ ಸ್ಥಳಕ್ಕೆ ಧಾವಿಸುವ ಅಕ್ಕ ಪಡೆಯು ಮೊದಲು ಬುದ್ಧಿವಾದ ಹೇಳಲಿದೆ. ಒಂದು ವೇಳೆ ಪ್ರಕರಣ ಗಂಭೀರವಾಗಿದ್ದರೆ ಆರೋಪಿಗಳನ್ನು ಠಾಣೆಗೆ ಕರೆದೊಯ್ದು ಪೊಲೀಸರಿಗೆ ಒಪ್ಪಿಸಲಿದೆ. ಹಾಗೆಯೇ ಶಾಲಾ-ಕಾಲೇಜು ಆವರಣಗಳಲ್ಲಿ ಮಾದಕ ವಸ್ತು ಮಾರಾಟದ ಬಗ್ಗೆಯೂ ಅಕ್ಕ ಪಡೆಯ ನಿಗಾ ಇರಲಿದೆ. ಮಹಿಳೆಯರ ಮತ್ತು ಮಕ್ಕಳ ಕಳ್ಳಸಾಗಣೆ, ಬಾಲ್ಯವಿವಾಹ, ಗುಡ್‌ ಟಚ್-ಬ್ಯಾಡ್ ಟಚ್, ಮಹಿಳೆಯರಿಗೆ ಇರುವ ಕಾನೂನು, ಲಿಂಗಸೂಕ್ಷ್ಮತೆ ಮೊದಲಾದವುಗಳು ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನೂ ಅಕ್ಕ ಪಡೆ ಮಾಡಲಿದೆ. ದೂರು ನೀಡಲು ಸಹಾಯವಾಣಿ ಸಂಖ್ಯೆ 1098, 112ಕ್ಕೆ ಕರೆ ಮಾಡಬಹುದಾಗಿದೆ. ಬೀದರ್‌ನಲ್ಲಿ ಯಶಸ್ವಿಯಾದಂತೆ ಇತರೆ ಜಿಲ್ಲೆಗಳಲ್ಲೂ ಈ ಯೋಜನೆ ಯಶಸ್ವಿಯಾಗುವ ನಿರೀಕ್ಷೆಯನ್ನು ಸರ್ಕಾರ ಹೊಂದಿದೆ.

ಮಂಗಳೂರು, ಉಡುಪಿಯಲ್ಲಿ ರಾಣಿ ಅಬ್ಬಕ್ಕ ಪೊಲೀಸ್ ಪಡೆ

ಮಂಗಳೂರು ಮತ್ತು ಉಡುಪಿ ಜಿಲ್ಲಾ ಪೊಲೀಸರು ಈಗಾಗಲೇ ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗಾಗಿ ವಿಶೇಷವಾಗಿ ರಾಣಿ ಅಬ್ಬಕ್ಕ ಪೊಲೀಸ್ ಪಡೆಯನ್ನು ಆರಂಭಿಸಿದ್ದಾರೆ. 16ನೇ ಶತಮಾನದಲ್ಲಿ ಪೋರ್ಚುಗೀಸರ ವಿರುದ್ಧ ಹೋರಾಡಿದ ಉಳ್ಳಾಲದ ವೀರ ರಾಣಿ ಅಬ್ಬಕ್ಕ ಅವರ ಹೆಸರಲ್ಲಿ ಈ ಪಡೆಯನ್ನು 2019ರಲ್ಲಿ ಆರಂಭಿಸಲಾಗಿದೆ. ಅಂದಿನ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ 2019ರ ಏಪ್ರಿಲ್ 2ರಂದು ಉಡುಪಿಯಲ್ಲಿ ಈ ಪಡೆಗೆ ಚಾಲನೆ ನೀಡಿದರೆ, ಅಂದಿನ ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ. ಸಂದೀಪ್ ಪಾಟೀಲ್ ಏಪ್ರಿಲ್ 30ರಂದು ಮಂಗಳೂರಿನಲ್ಲಿ ಈ ಪಡೆಯನ್ನು ಉದ್ಘಾಟಿಸಿದರು.

ಈ ಪಡೆಯು ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ಶಾಲೆಗಳು, ಕಾಲೇಜುಗಳು, ಉದ್ಯಾನವನಗಳು, ಮಾಲ್‌ಗಳು, ಕಡಲತೀರಗಳು ಮತ್ತು ಹೆಚ್ಚು ಜನಸಂದಣಿ ಇರುವ ಧಾರ್ಮಿಕ ಸ್ಥಳಗಳು ಮೊದಲಾದವುಗಳ ಕಡೆ ಗಸ್ತು ತಿರುಗುತ್ತದೆ. ರಾಣಿ ಅಬ್ಬಕ್ಕ ಪಡೆಯಲ್ಲಿ ಮಹಿಳಾ ಸಬ್ ಇನ್‌ಸ್ಪೆಕ್ಟರ್ ಅಥವಾ ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್ ಮತ್ತು ಕೆಲವು ಮಹಿಳಾ ಮತ್ತು ಪುರುಷ ಕಾನ್‌ಸ್ಟೆಬಲ್‌ಗಳು ಇರುತ್ತಾರೆ. ಈ ಪಡೆಗೆ ವಿಶೇಷವಾದ ಗುಲಾಬಿ ಬಣ್ಣದ ವಾಹನಗಳನ್ನು ಒದಗಿಸಲಾಗಿದೆ. ಸಾದಾ ಉಡುಪಿನಲ್ಲಿಯೂ ಈ ಪಡೆಯ ಸಿಬ್ಬಂದಿಗಳು ಕಾರ್ಯನಿರ್ವಹಿಸಿ ಮಹಿಳೆಯರಿಗೆ ಕಿರುಕುಳ ನೀಡುವವವರನ್ನು ರೆಡ್ ಹ್ಯಾಂಡ್ ಆಗಿ ಹಿಡಿಯುವ ಕೆಲಸವನ್ನು ಮಾಡುತ್ತಾ ಬರುತ್ತಿದ್ದಾರೆ. ಇದೀಗ ರಾಜ್ಯಾದ್ಯಂತ ಅಕ್ಕ ಪಡೆಯನ್ನೇ ಆರಂಭಿಸಲಾಗುತ್ತಿದೆ.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700 ಕೋಟಿ ನಾಮ!

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...