ಫೆ.12 ರಂದು ʼಅಖಿಲ ಭಾರತ ಸಾರ್ವತ್ರಿಕ ಮುಷ್ಕರʼ : ಕೇಂದ್ರ-ರಾಜ್ಯ ಸರ್ಕಾರಗಳಿಗೆ ಕಟ್ಟೆಚ್ಚರ

Date:

“ಕೇಂದ್ರ ಸರ್ಕಾರವು 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಹೊಸದಾಗಿ ತಂದಿರುವ 4 ಕಾರ್ಮಿಕ ಸಂಹಿತೆಗಳನ್ನು, ಬೀಜ ಮಸೂದೆ, ವಿದ್ಯುಚ್ಛಕ್ತಿ ಮಸೂದೆಯನ್ನು ವಾಪಸ್ ಹಾಗೂ ಮನರೇಗಾವನ್ನು ಮರು ಸ್ಥಾಪಿಸಬೇಕು ಎಂದು ರೈತಸಂಘದ ಅಧ್ಯಕ್ಷ ಹೆಚ್‌ ಆರ್‌ ಬಸವರಾಜಪ್ಪ ಒತ್ತಾಯಿಸಿದರು.

- Advertisement -

ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಫೆ.12ರಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ – ಜೆಸಿಟಿಯು ಕರ್ನಾಟಕ ಹಾಗೂ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಸ್ವಯಂ ಪ್ರೇರಿತ ʼಅಖಿಲ ಭಾರತ ಸಾರ್ವತ್ರಿಕ ಮುಷ್ಕರʼಕ್ಕೆ ಕರೆ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಜಾಗತೀಕರಣದ ನಂತರ ಸರ್ಕಾರಗಳು ಬಂಡವಾಳ ಶಾಹಿಗಳ ಪರವಾಗಿ ಕಾನೂನುಗಳನ್ನು ತರುತ್ತಿದ್ದಾರೆ. ಈಗ ಅದೇ ಮಾದರಿಯಲ್ಲಿ ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ತಂದಿದೆ. ಇದನ್ನು ವಾಪಸ್ಸು ಪಡೆಯಬೇಕೆಂದು” ಆಗ್ರಹಿಸಿದರು.

ಇದನ್ನು ಓದಿ : ಹಾಸನ | ಫೆ. 12ಕ್ಕೆ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ರಸ್ತೆ ತಡೆ ಮತ್ತು ಪಿಕೆಟಿಂಗ್

ಕಾರ್ಮಿಕ ಮುಂಖಡರಾದ ಎಸ್‌.ವರಲಕ್ಷ್ಮಿ ಮಾತನಾಡಿ “ರಾಜ್ಯ ಸರ್ಕಾರ ಕಾರ್ಮಿಕ ಕೋಡ್‌ಗಳಿಗೆ ನಿಯಮಾವಳಿ ರಚಿಸವಾರದೆಂದೂ ಒತ್ತಾಯಿಸಿದರೂ, ಕಾರ್ಮಿಕ ಸಚಿವರು ಹಾಗೂ ಮುಖ್ಯಮಂತ್ರಿಗಳು 4 ಕಾರ್ಮಿಕ ಕೋಡ್‌ಗಳಿಗೆ ಗೆಜೆಟ್‌ ನೋಟೀಫಿಕೇಷನ್‌ ತರಲು ಹೊರಟಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರಡೂ ಬಂಡವಾಳಿಗರ ಹಿತವನ್ನು ಕಾಯುತ್ತಿವೆ” ಎಂದು ಆರೋಪಿಸಿದರು.

ಸಂಯುಕ್ತ ಹೋರಾಟ ಕರ್ನಾಟಕದ ಪ್ರಮುಖರಾದ ನೂರ್‌ ಶ್ರೀಧರ್‌ ಮಾತನಾಡಿ “ದೇಶದಲ್ಲಿ ಕಾರ್ಪೊರೇಟ್‌ ಬಾಂಬಿಗ್‌ ನಡೆಯುತ್ತಿದೆ. ರಾಜ್ಯದ ಮೂರು ಪಕ್ಷಗಳು ಬಡವರ ವಿರೋಧಿ ಕೆಲಸಗಳನ್ನು ಮಾಡುತ್ತಿವೆ. ಜೆಡಿಎಸ್‌ ಈಗಾಗಲೇ ತಮ್ಮನ್ನು ತಾವು ಮಾರಿಕೊಂಡಿದೆ. 4 ಕಾರ್ಮಿಕ ಕೋಡ್‌ಗಳ ಬಗ್ಗೆ ಮೌನವಹಿಸಿರುವ ಕಾಂಗ್ರೆಸ್‌, ಕೇವಲ ನರೇಗಾ ವಿಚಾರವನ್ನು ಮಾತ್ರ ಚರ್ಚೆ ನಡೆಸುತ್ತಿದೆ” ಎಂದು ಆರೋಪಿಸಿದರು.

“ಕಾರ್ಮಿಕ, ರೈತ, ದಲಿತ, ವಿದ್ಯಾರ್ಥಿ, ಯುವಜನ ಹಾಗೂ ಕೂಲಿಕಾರ್ಮಿಕರೆಲ್ಲರೂ ಒಗ್ಗೂಡಿ ಬೃಹತ್ ಮಟ್ಟದ ಬಂದ್‌ ನಡೆಸಲಾಗುತ್ತದೆ. ಅಂದು ದೇಶದಲ್ಲಿರುವ ಎಲ್ಲಾ ಕೈಗಾರಿಕೆಗಳು ಕೆಲಸ ನಿಲ್ಲಿಸುತ್ತವೆ. ಜೊತೆಗೆ ಸಂಘಟಿತ ಹಾಗೂ ಅಸಂಘಟಿತ ನೌಕರರೆಲ್ಲರೂ ಪ್ರತಿಭಟನೆಯನ್ನು ಪಾಲ್ಗೊಳ್ಳುತ್ತಾರೆ. ಆಳುವ ಸರ್ಕಾರಗಳಿಗೆ ಬೀಸಿ ಮುಟ್ಟಿಸದೆ ಹೋದರೆ ಎಚ್ಚರಗೊಳ್ಳುವುದಿಲ್ಲ” ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಡಗಲಪುರ ನಾಗೇಂದ್ರ, ಕೆ ವಿ ಭಟ್, ಟಿ. ಯಶವಂತ್, ಚಂದ್ರಪ್ಪ ಹೊಸಕೆರೆ, ಅಪ್ಪಣ್ಣ, ಕಾಳಪ್ಪ, ಗಂಗಣ್ಣ, ವೀರಸಂಗಯ್ಯ, ಛಾಯಾ, ಜಿ. ಆರ್‌. ಶಿವಶಂಕರ್‌ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...