ವಂಚನೆ, ಜೀವ ಬೆದರಿಕೆ ಆರೋಪ: ಕೇಂದ್ರ ಸಚಿವ ಸೋಮಣ್ಣ ಪುತ್ರನ ವಿರುದ್ಧ ಎಫ್‌ಐಆ‌ರ್

Date:

ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿ, ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೇಂದ್ರ ಸಚಿವ ವಿ ಸೋಮಣ್ಣ ಅವರ ಪುತ್ರ ಅರುಣ್ ಸೋಮಣ್ಣ ಸೇರಿದಂತೆ ಮೂವರ ವಿರುದ್ಧ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಗೆ ವಂಚಿಸಿ, ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಅರುಣ್ ಮತ್ತು ಇತರ ಇಬ್ಬರ ವಿರುದ್ಧ ತೃಪ್ತಿ ಹೆಗಡೆ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದರು. ಅವರ ದೂರಿನ ವಿಚಾರಣೆ ನಡೆಸಿದ ನಗರದ 37ನೇ ಎಸಿಎಂಎಂ ನ್ಯಾಯಾಲಯ ತನಿಖೆ ನಡೆಸುವಂತೆ ಆದೇಶಿಸಿತ್ತು.

ಅದರನ್ವಯ ಅರುಣ್ ಸೋಮಣ್ಣ, ಜೀವನ್ ಕುಮಾರ್ ಹಾಗೂ ಪ್ರಮೋದ್ ರಾವ್ ಎಂಬುವರ ವಿರುದ್ಧ ಐಪಿಸಿ ಸೆಕ್ಷನ್ 506, 34, 504, 387, 420, 477A, 323, 327,347 ಹಾಗೂ 354 (ದೈಹಿಕ ಹಿಂಸೆ, ಅವಮಾನ, ಜೀವಭಯ, ವಂಚನೆ, ಅಪಹರಣ) ಅಡಿಯಲ್ಲಿ ಸಂಜಯ್ ನಗರ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಏನಿದು ಪ್ರಕರಣ?

ತೃಪ್ತಿ ಹಾಗೂ ಮಧ್ವರಾಜ್ ಎಂಬುವರು ಸುಮಾರು 23 ವರ್ಷಗಳಿಂದ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸುತ್ತಿದ್ದಾರೆ. 2013ರಲ್ಲಿ ಸರ್ಕಾರಿ ಕಾರ್ಯಕ್ರಮ ಆಯೋಜನೆ ಮಾಡಿದಾಗ ಇವರಿಗೆ ಅರುಣ್ ಸೋಮಣ್ಣ ಅವರ ಪರಿಚಯವಾಗಿತ್ತು.

ಬಳಿಕ, 2017ರಲ್ಲಿ ಅರುಣ್ ಸೋಮಣ್ಣ ಅವರ ಪುತ್ರಿಯ ಹುಟ್ಟುಹಬ್ಬದ ಕಾರ್ಯಕ್ರಮ ಆಯೋಜನೆ ಮಾಡುವ ಜವಾಬ್ದಾರಿಯನ್ನು ಮಧ್ವರಾಜ್ ಒಡೆತನದ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯೇ ನಿರ್ವಹಿಸಿತ್ತು.

ಆ ಬಳಿಕ ಅರುಣ್ ಸೋಮಣ್ಣ ಮತ್ತು ಮಧ್ವರಾಜ್  ಅವರ ಜತೆಗೆ ಉತ್ತಮ ಬಾಂಧವ್ಯ ಇತ್ತು.  ಹೀಗಾಗಿ, 2019ರಲ್ಲಿ  ಅರುಣ್ ಮತ್ತು ಮಧ್ವರಾಜ್ ಜಂಟಿಯಾಗಿ ನೈಬರ್‌ ಹುಡ್ ಎಂಬ ಇವೆಂಟ್ ಮ್ಯಾನೇಜ್ ಮೆಂಟ್ ಕಂಪನಿಯನ್ನು ಪಾರ್ಟನ‌ರ್ ಶಿಪ್ ಡೀಡ್ ಮೇಲೆ ಆರಂಭಿಸಿದ್ದರು. ಕಂಪನಿಯ ಹೂಡಿಕೆ, ಪಾವತಿ ಹಾಗೂ ಸಂಗ್ರಹಣೆಯ ಸಂಪೂರ್ಣ ಜವಾಬ್ದಾರಿ ಅರುಣ್ ವಹಿಸಿಕೊಂಡಿದ್ದರು.

ಕೆಲ ತಿಂಗಳಲ್ಲಿ ಕಂಪನಿಯ ವ್ಯವಹಾರದಲ್ಲಿ ನಷ್ಟವಾಗಿತ್ತು. ಈ ಹಿನ್ನೆಲೆ ಮಧ್ವರಾಜ್‌ಗೆ ಕಂಪನಿಗೆ ರಾಜೀನಾಮೆಗೆ ಒತ್ತಾಯಿಸಿ  ಕಿರುಕುಳ, ಕುಟುಂಬಕ್ಕೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | ಸುರಂಗ ಕೊರೆಯುವ ಟಿಬಿಎಂ ಯಂತ್ರಗಳಿಗೆ ಅಡ್ಡ ಬಂದ ಬಂಡೆ; ಪಿಂಕ್ ಲೈನ್ ಕಾಮಗಾರಿ ವಿಳಂಬ

ಕಂಪನಿಯಲ್ಲಿ ಲಾಸ್ ಆಗಿದ್ದ ಹಣವನ್ನು ನೀಡುವಂತೆ ಬೆದರಿಸಿ, ಹಲ್ಲೆ ಮಾಡಿಸಿ ಮಧ್ವರಾಜ್ ದಂಪತಿಯಿಂದ ವಸೂಲಿ ಮಾಡಿರುವ ಆರೋಪವೂ ಇದೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಸಂಜಯ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸದ್ಯ ನ್ಯಾಯಾಲಯದ ನಿರ್ದೇಶನದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ಆರೋಪಿತರ ವಿರುದ್ಧ ಜಾಮೀನು ರಹಿತ ಸೆಕ್ಷನ್​ಗಳಿರುವುದರಿಂದ ಸಚಿವ ಸೋಮಣ್ಣ ಅವರ ಪುತ್ರನಿಗೆ ಬಂಧನದ ಭೀತಿ ಎದುರಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕುವೆಂಪು ವಿವಿ ಅತಿಥಿ ಉಪನ್ಯಾಸಕರಿಂದ ಧರಣಿ

ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದ ಅತಿಥಿ ಉಪನ್ಯಾಸಕರುಗಳು...

ಕನ್ನಡಿಗರಿಗೆ ಉದ್ಯೋಗ | ಕಾರ್ಪೊರೇಟ್ ಲಾಬಿಗೆ ಮಣಿದ ಸರ್ಕಾರ: ಕರವೇ ಅಧ್ಯಕ್ಷ ಟಿ ಎ ನಾರಾಯಣ ಗೌಡ ಆರೋಪ

"ಕಾರ್ಪೊರೇಟ್ ಲಾಬಿ, ಒತ್ತಡಕ್ಕೆ ಮಣಿದು ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಕಲ್ಪಿಸುವ...

ಚಿತ್ರದುರ್ಗ‌ | ಭಾವೈಕ್ಯತೆಯ ಮೊಹರಂ; ಸಾರ್ವಜನಿಕರಿಗೆ ತಿನಿಸು, ಪಾನೀಯ ವಿತರಣೆ

ಹಿಂದೂ-ಮುಸಲ್ಮಾನರು ಕೂಡಿಕೊಂಡು ಭಾವೈಕ್ಯತೆಯ ಸಂಕೇತವಾಗಿ ಆಚರಿಸುವ ಮೊಹರಂ ಮೆರವಣಿಗೆ ಚಿತ್ರದುರ್ಗ ನಗರದಲ್ಲಿ...

‌ಬೆಳಗಾವಿ | ನಮ್ಮ ಧರ್ಮ ನಮ್ಮೊಂದಿಗೆ, ನಮ್ಮ ಪ್ರೀತಿ ಎಲ್ಲರೊಂದಿಗೆ: ಮುಹಮ್ಮದ್ ಕುಂಞಿ

ನಮ್ಮ ಧರ್ಮ ನಮ್ಮೊಂದಿಗೆ ನಮ್ಮ ಪ್ರೀತಿ ಎಲ್ಲರೊಂದಿಗೆ ಇರಲಿ. ನಾವು ನಮ್ಮ...