ಕಾರಾಗೃಹದ ಕೈದಿಗಳು ಭಯೋತ್ಪಾದಕ ಸಂಚಿನಲ್ಲಿ ಭಾಗಿಯಾಗಿರುವ ಶಂಕಿತರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆ, ಏಳು ರಾಜ್ಯಗಳ ನಾನಾ ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶೋಧಕಾರ್ಯ ನಡೆಸಿದೆ.
ಬೆಳಗ್ಗೆಯಿಂದ ಬೆಂಗಳೂರು ಮತ್ತು ತಮಿಳುನಾಡು ಸೇರಿದಂತೆ ಇತರ ರಾಜ್ಯಗಳಲ್ಲಿ ದಾಳಿಗಳು ನಡೆಯುತ್ತಿವೆ. ಮಾ.4ರ ರಾತ್ರಿ 8 ಗಂಟೆಗೆ ಪರಪ್ಪನ ಅಗ್ರಹಾರದಲ್ಲಿ ಎನ್‌ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆವರೆಗೂ ತನಿಖೆ ನಡೆಸಿದ್ದು, ನಾಸೀರ್ ಸೇರಿದಂತೆ ಅನೇಕರ ವಿಚಾರಣೆ ನಡೆಸಿದ್ದಾರೆ.
ಈ ವರ್ಷದ ಜನವರಿ 12ರಂದು, ಬೆಂಗಳೂರು ಲಷ್ಕರ್-ಎ-ತೊಯ್ಬಾ ಜೈಲು ಆಮೂಲಾಗ್ರೀಕರಣ ಮತ್ತು ‘ಫಿದಾಯೀನ್’ ದಾಳಿಯ ಸಂಚಿನ ಪ್ರಕರಣದಲ್ಲಿ ಜೀವಾವಧಿ ಅಪರಾಧಿ ಮತ್ತು ಇಬ್ಬರು ತಲೆಮರೆಸಿಕೊಂಡವರು ಸೇರಿದಂತೆ ಎಂಟು ಮಂದಿ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಚಾರ್ಜ್‌ಶೀಟ್ ಸಲ್ಲಿಸಿದೆ.
ಚಾರ್ಜ್‌ಶೀಟ್ ಮಾಡಿರುವ ಆರೋಪಿಗಳಲ್ಲಿ ಕೇರಳದ ಕಣ್ಣೂರು ಜಿಲ್ಲೆಯ ಟಿ ನಾಸೀರ್ 2013 ರಿಂದ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದು, ಜುನೈದ್ ಅಹ್ಮದ್ ಅಲಿಯಾಸ್ ಜೆಡಿ ಮತ್ತು ಸಲ್ಮಾನ್ ಖಾನ್ ವಿದೇಶಕ್ಕೆ ಪರಾರಿಯಾಗಿರುವ ಶಂಕೆ ಇದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೂರು ವರ್ಷದ ಮಗುವಿಗೆ ದೌರ್ಜನ್ಯ ಪ್ರಕರಣ: ತಾಯಿ, ಆಕೆಯ ಪ್ರಿಯಕರನ ಬಂಧನ
ಉಳಿದವರನ್ನು ಸೈಯದ್ ಸುಹೇಲ್ ಖಾನ್ ಅಲಿಯಾಸ್ ಸುಹೇಲ್, ಮೊಹಮ್ಮದ್ ಉಮರ್ ಅಲಿಯಾಸ್ ಉಮರ್, ಜಾಹಿದ್ ತಬ್ರೇಜ್ ಅಲಿಯಾಸ್ ಜಾಹಿದ್, ಸೈಯದ್ ಮುದಾಸಿರ್ ಪಾಷಾ ಮತ್ತು ಮೊಹಮ್ಮದ್ ಫೈಸಲ್ ರಬ್ಬಾನಿ ಅಲಿಯಾಸ್ ಸಾದತ್ ಎಂದು ಗುರುತಿಸಲಾಗಿದೆ.