ಅನುಮತಿ ಪಡೆಯದ ಜಾಗದಲ್ಲಿ ಕೊಳವೆಬಾವಿ ಕೊರೆದರೆ ಕ್ರಮ: ಬೆಂಗಳೂರು ಜಲಮಂಡಳಿ

Date:

  • ಸಾರ್ವಜನಿಕ ಕೊಳವೆಬಾವಿಗಳ ಕೊರೆಯಿಸುವುದಕ್ಕೆ ಅನುಮತಿ ಪ್ರಥಮ ಆದ್ಯತೆ
  • ಕೊಳವೆಬಾವಿ ಕೊರೆಯಿಸುವುದಕ್ಕೆ ಅನುಮತಿ ಅರ್ಜಿ ಸಲ್ಲಿಸಲು ಮಾ.15ರಿಂದ ಅವಕಾಶ

“ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೊಳವೆಬಾವಿಗಳನ್ನು ಕೊರೆಯವವರು ಅನುಮತಿ ಪಡೆದಿರುವ ಜಾಗದಲ್ಲಿ ಮಾತ್ರ ಕೊಳವೆಬಾವಿಗಳನ್ನು ಕೊರೆಯತಕ್ಕದ್ದು. ಒಂದು ವೇಳೆ ಅನುಮತಿ ಪಡೆಯದೇ ಇರುವ ಸ್ಥಳಗಳಲ್ಲಿ ಕೊಳವೆ ಬಾವಿಗಳನ್ನು ಕೊರೆದಲ್ಲಿ ಅಂತಹ ಕೊಳವೆಬಾವಿ ಕೊರೆಯುವರ ವಿರುದ್ಧ ಕ್ರಮಕೈಗೊಳ್ಳಲಾಗುವುದು” ಎಂದು ಬೆಂಗಳೂರು ‌ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲೂಎಸ್‌ಎಸ್‌ಬಿ) ಎಚ್ಚರಿಕೆ ನೀಡಿದೆ.

“ಅಂತರ್ಜಲವನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡು ಆದೇಶ ಹೊರಡಿಸಿರುವ ಮಂಡಳಿಯು ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) ಅಧಿನಿಯಮ 2011ರ ಕಂಡಿಕೆ 17 ರ ಅಧಿಕಾರದನ್ವಯ ನಿಯಮಾನುಸಾರ ರಿಗ್ ಪಡೆಯಲು ನೀಡಿರುವ ಅನುಮತಿಯನ್ನು ಕೂಡಲೇ ರದ್ದುಪಡಿಸಲು ಕ್ರಮವಹಿಸುವುದು ಮತ್ತು ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ.

“ಹಾಗೆಯೇ, ಇನ್ನು ಮುಂದೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನೆ ಹಾಗೂ ನಿಯಂತ್ರಣ) ಅಧಿನಿಯಮ 2011ರ ಕಂಡಿಕೆ 11ರನ್ವಯ ಎಲ್ಲಾದರು ಸಂಬಂಧಪಟ್ಟ ಪ್ರಾಧಿಕಾರಿಯಿಂದ ಅನುಮತಿ ಪಡೆಯದೇ ಕೊಳವೆ ಬಾವಿಗಳನ್ನು ಕೊರೆದಲ್ಲಿ ಕೊಳವೆಬಾವಿಯನ್ನು ಕೊರೆಸುವ ಮಾಲೀಕರ ವಿರುದ್ಧ ನಿಯಮ ಉಲ್ಲಂಘನೆ ಮಾಡಿರುವುದ್ದಾಗಿ ದೂರು ಹಾಗೂ ಅಂತವರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರೂಗಿಸಲಾಗುವುದು” ಎಂದು ಅವರು ವಿವರಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಈ ಆದೇಶವು ಇದೇ ಮಾ.15 ರಿಂದ ಜಾರಿಗೆ ಬರಲಿದೆ. ಮಾ.15 ರಿಂದ ಬೆಂಗಳೂರು ಜಲಮಂಡಳಿ ಜಾಲತಾಣದಲ್ಲಿ ಕೊಳವೆಬಾವಿ ಕೊರೆಸಲು ಅನುಮತಿ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ತಾವು ಅನುಮತಿ ಕೇಳಿದಲ್ಲಿ ಸಾರ್ವಜನಿಕ ಕೊಳವೆ ಬಾವಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು ಹಾಗೂ ಖಾಸಗಿ ಕೊಳವೆಬಾವಿಗಳಿಗೆ ಅಂತರ್ಜಲ ಮಟ್ಟ, ಅವಶ್ಯಕತೆ ಹಾಗೂ ತಜ್ಞರ ವರದಿ ಆಧಾರಿಸಿ ಸಂಬಂಧಪಟ್ಟವರಿಂದ ಸ್ಥಳ ಪರಿಶೀಲಿಸಿ ನಂತರ ನಿಯಮಾನುಸಾರ ಸೂಕ್ತ ಪ್ರಾಧಿಕಾರದಿಂದ ಅನುಮತಿ ನೀಡಲಾಗುವುದು” ಎಂದು ಅವರು ತಿಳಿಸಿದ್ದಾರೆ.

“ಬೆಂಗಳೂರು ಮಹಾನಗರದಲ್ಲಿ ಮಳೆ ನೀರಿನ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿದಿದ್ದು, ನಗರದಲ್ಲಿನ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿದ್ದು, ಅಂತರ್ಜಲ ನೀರಿನ ಮಟ್ಟ ಕಡಿಮೆಯಾಗಿದೆ. ಬೆಂಗಳೂರು ನಗರದಲ್ಲಿ ವೈಯಕ್ತಿಕ ಅಥವಾ ಇನ್ನಿತರೆ ಬಳಕೆಗೆ ಕೊಳವೆ ಬಾವಿಗಳನ್ನು ಕೊರೆಯುವ ಮುನ್ನ ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) ಅಧಿನಿಯಮ 2011ರ ಕಂಡಿಕೆ 11ರಂತೆ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಳವೆಬಾವಿ ಕೊರೆಯಿಸುವುದಕ್ಕೆ ಅನುಮತಿ ಅರ್ಜಿ ಸಲ್ಲಿಸಲು ಮಾ.15ರಿಂದ ಅವಕಾಶ

“ಅವೈಜ್ಞಾನಿಕವಾಗಿ ಕೊಳವೆ ಬಾವಿಗಳನ್ನು ಕೊರೆಯುತ್ತಿರುವುದು ಹಾಗೂ ನಿಯಮಾನುಸಾರ ಕೊಳವೆ ಬಾವಿಗಳನ್ನು ಕೊರೆಯುವ ಮುನ್ನ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ ಅನುಮತಿ ಪಡೆಯದೇ ಇರುವುದರಿಂದ ಬೆಂಗಳೂರು ನಗರದ ಅಂತರ್ಜಲ ಮಟ್ಟ ಕಡಿಮೆಯಾಗುತ್ತಿದೆ. ಈ ಹಿನ್ನಲೆ, ಅಂತರ್ಜಲವನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ನಿರ್ಣಯ ಕೈಗೊಳ್ಳಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಸ್ವಾಮಿ ಕೊಲೆ ಪ್ರಕರಣ | 4ನೇ ಆರೋಪಿ ತಾಯಿ ಅನಾರೋಗ್ಯದಿಂದ ಸಾವು

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 4ನೇ ಆರೋಪಿ, ದರ್ಶನ್‌ ತೂಗುದೀಪ ಸೇನೆಯ...

ಬೆಳಗಾವಿ | ಮಳೆ ಅಬ್ಬರಕ್ಕೆ ಕುಸಿದು ಬಿದ್ದ ಮನೆ; ಕೂದಲೆಳೆಯಲ್ಲಿ 11 ಮಂದಿ ಪಾರು

ಕಳೆದೊಂದು ವಾರದಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಶುಕ್ರವಾರ...

ಮಂಡ್ಯ | ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ: ಕಾವೇರಿ ನದಿ ತಟದ ತಗ್ಗು ಪ್ರದೇಶದ ಜನರಿಗೆ ಮುನ್ನೆಚ್ಚರಿಕೆ

ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಕನ್ನಂಬಾಡಿ ಕಟ್ಟೆ...

ಪೋಷಕರು ತಮ್ಮ ಮನೆಯಿಂದಲೇ ಮಕ್ಕಳಿಗೆ ಸಾಹಿತ್ಯಾಸಕ್ತಿ ಬೆಳೆಸಬೇಕು: ಸ್ಪೀಕರ್ ಯು ಟಿ ಖಾದರ್

ಮಾತೃಭಾಷೆ, ಸಾಹಿತ್ಯಗಳು ಉಳಿದು ಬೆಳೆಯಬೇಕಾದರೆ ಮುಂದಿನ ಪೀಳಿಗೆಗೆ ವರ್ಗಾಯಿಸುವ ಅವಶ್ಯಕತೆ ಇದೆ....