ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, 20 ಜನರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.
ಸೇಂಟ್ ಅಗ್ನೇಸ್ ಎಂಬ ಶಾಲಾ ಕಟ್ಟಡ ನಿರ್ಮಾಣದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಗ್ನೇಸ್ ಶಾಲಾ ಕಟ್ಟಡದ ಎರಡನೇ ಅಂತಸ್ತಿನ ನಿರ್ಮಾಣ ವೇಳೆ ಕಟ್ಟಡ ಕುಸಿದಿದೆ ಎಂದು ಹೇಳಲಾಗುತ್ತಿದೆ.
ಮಿನರ್ ಬಿಸ್ವಾಸ್, ಶಾಹೀದ್ ಮೃತರು. ಇವರು ಜಾರ್ಖಂಡ್ ಮೂಲದವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಆರು ಜನರ ಸ್ಥಿತಿ ಗಂಭೀರವಾಗಿದೆ. ಇನ್ನೂ ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಕಲಿ ದಾಖಲೆ ನೀಡಿದ್ದವರಿಗೆ ಸಾಲ ಮಂಜೂರು; ಮೂವರು ಬ್ಯಾಂಕ್ ಮ್ಯಾನೇಜರ್‌ಗಳ ಬಂಧನ
ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.