ಮೈಸೂರು | ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ; ಬೇಡಿಕೆಗಳ ಈಡೇರಿಕೆಗೆ ದೆಹಲಿ ಸಿಎಂಗೆ ಮನವಿ

Date:

ಕಳೆದ ಎರಡು ತಿಂಗಳಿನಿಂದ ದೆಹಲಿಯಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಹೋರಾಟವನ್ನು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಬೆಂಬಲಿಸಿದೆ. ದೆಹಲಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬರೆದ ಮನವಿ ಪತ್ರವನ್ನು ಮೈಸೂರು ಜಿಲ್ಲಾಧಿಕಾರಿಗೆ ಸಂಘದ ಕಾರ್ಯಕರ್ತರು ಸಲ್ಲಿಸಿದ್ದಾರೆ.

- Advertisement -

ಆಗಸ್ಟ್ 28, 2023ರಿಂದ ಸತತವಾಗಿ ದೆಹಲಿಯಲ್ಲಿ 6,500 ಆಶಾ ಕಾರ್ಯಕರ್ತೆಯರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಪ್ರತಿನಿತ್ಯ ಹೋರಾಟ ನಡೆಸುತ್ತಿದ್ದಾರೆ. ಜೀವನ ಯೋಗ್ಯ ಮತ್ತು ನಿಗದಿತ ವೇತನ ಜಾರಿಗೊಳಿಸಿ ಇನ್ನಿತರ ಬೇಡಿಕೆಗಳನ್ನು ಮುಂದಿಟ್ಟು ಹೋರಾಟ ನಡೆಸುತ್ತಿದ್ದಾರೆ. ಅವರ ಬೇಡಿಕೆಗಳನ್ನು ದೆಹಲಿ ಮುಖ್ಯಮಂತ್ರಿಗಳು ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಈ ವೇಳೆ, ಎಐಯುಟಿಯುಸಿಗೆ ಸಂಯೋಜಿತ ಗೊಂಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಮೈಸೂರು ಜಿಲ್ಲಾ ಸಮಿತಿಯಿಂದ, ಮೈಸೂರು ಜಿಲ್ಲಾ ಪದಾಧಿಕಾರಿಗಳು ನಿಯೋಗದಲ್ಲಿ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಿದರು. ಈ ವೇಳೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ನಗರ ಸಮಿತಿಯ ಅಧ್ಯಕ್ಷರಾದ ಕಾ. ಸೀಮಾ ಜಿ.ಎಸ್, ಮೈಸೂರು ತಾಲೂಕು ಸಮಿತಿಯ ಅಧ್ಯಕ್ಷರಾದ ಮಂಗಳಮ್ಮ, ತಾಲೂಕು ಸಮಿತಿ ಸದಸ್ಯರಾದ ಮಾಲಾ, ಸೌಭಾಗ್ಯ,ಗೌರಮ್ಮ  ಮುಂತಾದವರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...