ಕಳ್ಳತನ ಮಾಡಲು ಹೊಸ ಕ್ರೇಟಾ ಕಾರ್‌ನಲ್ಲಿ ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಕಳ್ಳರ ಬಂಧನ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಮನೆಗಳ ಬೀಗ ಮುರಿದು ಹಾಡಹಗಲೇ ಕಳ್ಳತನ ಮಾಡುತ್ತಿದ್ದ ಖದೀಮರನ್ನು ನಗರದ ಮಡಿವಾಳ ಪೊಲೀಸರು ಬಂಧಿಸಿದ್ದಾರೆ.

- Advertisement -

ಅಬುದ್ ಅಲಿ, ಶೇಕ್ ಫಯಾಜ್, ಅಯೈದ್ ಅಹ್ಮದ್, ರಿಯಾಜ್ ಸೇರಿದಂತೆ ಒಟ್ಟು ಐದು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಮೂಲತಃ ಹೈದರಾಬಾದ್‌ನವರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಂಧಿತರು ಮಡಿವಾಳ ಪೊಲೀಸ್‌ ಠಾಣಾ ವ್ಯಾಪ್ತಿಯ ಮಾರುತಿನಗರದ 7ನೇ ಕ್ರಾಸ್‌ ಮನೆಯೊಂದರ ಬಾಗಿಲು ಮುರಿದು ಮೂರು ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದರು.

ಕಳ್ಳತನ ಮಾಡಿ ಆರೋಪಿಗಳು ಒಂದೂವರೆ ಕಿ.ಮೀ ವರೆಗೂ ನಡೆದು, ಮುಂದೆ ಹೋಗಿ ಕಾರು ಹತ್ತಿದ್ದರು. ಈ ಬಗ್ಗೆ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳ್ಳರ ಪತ್ತೆಗೆ ಬಲೆ ಬೀಸಿದ ಪೊಲೀಸರು ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಆಧರಿಸಿ ಖದೀಮರನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

ಈ ಐವರು ಖದೀಮರು ಹೈದರಾಬಾದ್‌ನಿಂದ ಕಳುವು ಮಾಡಲೆಂದೇ ಬೆಂಗಳೂರಿಗೆ ಹೊಸ ಕ್ರೇಟಾ ಕಾರ್‌ನಲ್ಲಿ ಬರುತ್ತಿದ್ದರು ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ ಹೊರವಲಯದಲ್ಲಿ 20 ಹೊಸ ಉದ್ಯಾನವನಗಳ ಅಭಿವೃದ್ಧಿಗೆ ಬಿಬಿಎಂಪಿ ಯೋಜನೆ

ಬಂಧಿತ ಆರೋಪಿಗಳ ಪೈಕಿ ಅಯೈದ್ ಅಹ್ಮದ್ ಎಂಬಿಎ ಪದವೀಧರನಾಗಿದ್ದಾನೆ. ಅಲ್ಲದೇ, ಈತನ ಮೇಲೆ ನೂರಾರು ಕೇಸ್‌ಗಳು ದಾಖಲಾಗಿವೆ. ಅಬುದ್ ಅಲಿ ಮೇಲೆ 50ಕ್ಕೂ ಹೆಚ್ಚು ಮನೆಗಳ್ಳತನ ಕೇಸ್​ ದಾಖಲಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....