ಏಷ್ಯನ್ ಆಟ್ಯಾಪಟ್ಯಾ ಚಾಂಪಿಯನ್‌ಶಿಪ್‌: ಚಿನ್ನ ಗೆದ್ದ ಗದಗದ ಯುವಕರು

Date:

ಭೂತಾನ್‌ನಲ್ಲಿ ನಡೆದ ಏಷ್ಯನ್ ಆಟ್ಯಾಪಟ್ಯಾ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದು ಗದಗ ಜಿಲ್ಲೆಗೆ ಕೀರ್ತಿ ಕಿರೀಟ ತೊಡಿಸಿದ, ರಾಹುಲ್ ಶೇಖರ್ ಕಾರಭಾರಿ ಮತ್ತು ಉಳವೇಶ ಶಿವಾಜಿ ಲಮಾಣಿ ಈರ್ವರಿಗೂ, ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಸನ್ಮಾನಿಸಿ ಅಭಿನಂದಿಸಿದರು.

- Advertisement -

ಜೂನ್ 7 ರಿಂದ 10ರವರೆಗೆ ಭೂತಾನ್‌ನಲ್ಲಿ ನಡೆದ 3ನೇ ಸೀನಿಯರ್ ಏಷ್ಯನ್ ಆಟ್ಯಾಪಟ್ಯಾ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ತಂಡವನ್ನು ಪ್ರತಿನಿಧಿಸಿದ್ದ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟರಾಯನಕೇರಿ ತಾಂಡಾದ ಕ್ರೀಡಾಪಟು ರಾಹುಲ್ ಶೇಖರ್ ಕಾರಭಾರಿ ಅವರು ತಮ್ಮ ತಂಡದೊಂದಿಗೆ ಭರ್ಜರಿ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು, ಚಿನ್ನದ ಪದಕ ಮುಡಿಗೇರಿಸಿಕೊಂಡರು. 15 ಆಟಗಾರರನ್ನು ಒಳಗೊಂಡಿದ್ದ ಭಾರತೀಯ ತಂಡವು ಪ್ರತಿಸ್ಪರ್ಧಿಗಳನ್ನು ಮಣಿಸಿ ಪ್ರಶಸ್ತಿ ಗೆಲ್ಲುವ ಮೂಲಕ ದೇಶದ ಕೀರ್ತಿಯನ್ನು ಹೆಚ್ಚಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಅದೇ ರೀತಿ ಜೂನ್ 4 ರಿಂದ 6ರವರೆಗೆ ಭೂತಾನ್‌ನಲ್ಲಿ ನಡೆದ ಪ್ರಥಮ ಜೂನಿಯರ್ (ಅಂಡರ್-19) ಏಷ್ಯನ್ ಆಟ್ಯಾಪಟ್ಯಾ ಚಾಂಪಿಯನ್‌ಶಿಪ್‌ನಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ದೇವಿಹಾಳ ತಾಂಡಾದ ಯುವ ಕ್ರೀಡಾಪಟು ಉಳವೇಶ ಶಿವಾಜಿ ಲಮಾಣಿ ಅವರು ಭಾರತೀಯ ತಂಡದ ನಾಯಕನಾಗಿ ಕಾರ್ಯನಿರ್ವಹಿಸಿ ತಂಡವನ್ನು ವಿಜಯದತ್ತ ಮುನ್ನಡೆಸಿದರು. ಅವರ ನೇತೃತ್ವದ 15 ಸದಸ್ಯರ ತಂಡ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಜಯಿಸಿತು.

ಜಿಲ್ಲಾಡಳಿತ ಭವನದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ಇಬ್ಬರು ಕ್ರೀಡಾಪಟುಗಳ ಸಾಧನೆಯನ್ನು ಶ್ಲಾಘಿಸಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ಗದಗ ಜಿಲ್ಲೆಯ ಹೆಸರು ಬೆಳಗಿಸಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. ಗ್ರಾಮೀಣ ಭಾಗದ ಯುವಕರು ಪರಿಶ್ರಮ ಮತ್ತು ಪ್ರತಿಭೆಯಿಂದ ವಿಶ್ವಮಟ್ಟದ ಸಾಧನೆ ಮಾಡಿರುವುದು ಇತರ ಯುವಕರಿಗೂ ಸ್ಪೂರ್ತಿದಾಯಕವಾಗಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ಕೆ. ಪಾಟೀಲ ಹಾಗೂ ಶಾಸಕ ಜಿ.ಎಸ್. ಪಾಟೀಲ ಅವರು ದೂರವಾಣಿ ಮೂಲಕ ಕ್ರೀಡಾಪಟುಗಳೊಂದಿಗೆ ಮಾತನಾಡಿ ಅಭಿನಂದನೆ ಸಲ್ಲಿಸಿದರು. “ಅಂತರರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಗೆದ್ದು ಜಿಲ್ಲೆ ಹಾಗೂ ರಾಜ್ಯದ ಕೀರ್ತಿಯನ್ನು ಹೆಚ್ಚಿಸಿರುವ ಇವರ ಸಾಧನೆ ಶ್ಲಾಘನೀಯವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡುವಂತಾಗಲಿ” ಎಂದು ಹಾರೈಸಿದರು.

“ಭಾರತೀಯ ಆಟ್ಯಾಪಟ್ಯಾ ತಂಡಗಳ ಈ ಸಾಧನೆ ದೇಶದ ಕ್ರೀಡಾ ಕ್ಷೇತ್ರಕ್ಕೆ ಹೊಸ ಉತ್ತೇಜನ ನೀಡಿದ್ದು, ಗದಗ ಜಿಲ್ಲೆಯ ಕ್ರೀಡಾ ಪ್ರತಿಭೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿರುವುದು ಜಿಲ್ಲೆಯ ಜನತೆಗೆ ಹೆಮ್ಮೆಯ ವಿಷಯವಾಗಿದೆ” ಎಂದು ಮೆಚ್ಚುಗೆ ವ್ಯಕ್ಯಪಡಿಸಿದರು.

ಈ ಸಂದರ್ಭದಲ್ಲಿ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಶರಣು ಗೊಗೇರಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಸೇರಿದಂತೆ ಮನೋಜ್ ರಾಠೋಡ, ಕ್ರೀಡಾ ಸಾಧಕ ಯುವಕರ ಪಾಲಕರು, ಸ್ನೇಹಿತರು, ತರಬೇತುದಾರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಮೆಟ್ರೋ ಬ್ಲೂ ಲೈನ್ ಕಾಮಗಾರಿಗೆ ಸುಪ್ರೀಂ ಅಸ್ತು; ನಿರ್ಮಾಣ ಮುಂದುವರಿಸಲು ಅನುಮತಿ

ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿರೀಕ್ಷೆಯಿರುವ ನಮ್ಮ ಮೆಟ್ರೋದ ಬ್ಲೂ...

ಬ್ರಹ್ಮಪುತ್ರ ನದಿಗೆ ಚೀನಾದ ಬೃಹತ್ ಅಣೆಕಟ್ಟು: ಪ್ರವಾಹದ ಅಪಾಯ ಹೆಚ್ಚಳ, ಭಾರತಕ್ಕೂ ಆತಂಕ

ಟಿಬೆಟ್‌ನಲ್ಲಿ ಹರಿಯುವ ಬ್ರಹ್ಮಪುತ್ರ (ಯಾರ್ಲುಂಗ್ ಜಾಂಗ್ಬೋ) ನದಿಗೆ ಚೀನಾ ನಿರ್ಮಿಸುತ್ತಿರುವ ವಿಶ್ವದ...

ಪಟಾಕಿ ನಿಷೇಧ ಜಾಗೃತಿಗೆ ಹಣವೇಕೆ; ಸೆಲೆಬ್ರಿಟಿಗಳ ವಿರುದ್ಧ ಬಾಂಬೆ ಹೈಕೋರ್ಟ್ ಅಸಮಾಧಾನ

ಮುಂಬೈನಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ...

ಪೂನಾದ ‘IISER’ ಗ್ರಂಥಾಲಯದಿಂದ ಉಮರ್ ಖಾಲಿದ್ ಪುಸ್ತಕ ತೆರವು

ಪುಣೆಯಲ್ಲಿರುವ 'ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಶನ್ ಆಂಡ್ ರಿಸರ್ಚ್' (IISER)...