ಬಾಗಲಕೋಟೆ ವಿಧಾನಸಭೆ ಉಪಚುನಾವಣೆ: ಮತದಾರರಿಗೆ ಸಿಎಂ ಮನವಿ

Date:

ಎಚ್ ವೈ ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಉಮೇಶ್ ಮೇಟಿ ಅವರನ್ನು ಗೆಲ್ಲಿಸಲೇಬೇಕು. ಬಾಗಲಕೋಟೆಗೆ ಮೆಡಿಕಲ್ ಕಾಲೇಜು ಬರುತ್ತಿರುವುದು ಮೇಟಿಯವರ ಶ್ರಮದ ಫಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

- Advertisement -

ಬಾಗಲಕೋಟೆ ಉಪ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಸುತಗುಂಡಾರ, ನಾಯನೇಗಲಿ ಸೇರಿ ಸುತ್ತಮುತ್ತಲ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮೇಟಿ ಅವರ ನಾಲ್ವರೂ ಮಕ್ಕಳು ಟಿಕೆಟ್ ಕೇಳಿದ್ದರು. ಆದರೆ, ಯಾರಿಗೇ ಕೊಟ್ಟರೂ ಒಟ್ಟಿಗೇ ಕೆಲಸ ಮಾಡುವ ಭರವಸೆ ನೀಡಿದರು. ಕಾಂಗ್ರೆಸ್ ಪದ್ಧತಿಯಂತೆ ಉಮೇಶ್ ಮೇಟಿ ಅವರಿಗೆ ಟಿಕೆಟ್ ಕೊಟ್ಟಿದ್ದೇವೆ. ಆದ್ದರಿಂದ ಇವರನ್ನು ಬೆಂಬಲಿಸಿ, ಗೆಲ್ಲಿಸಿ ಕಳುಹಿಸಿ ಎಂದರು.

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಆಲಮಟ್ಟಿ ವಿಚಾರದಲ್ಲಿ ಜನವಿರೋಧಿ ನಿಲುವು ಹೊಂದಿದೆ. ಹದಿಮೂರು ವರ್ಷಗಳಿಂದ ಗೆಜೆಟ್ ನೋಟಿಫಿಕೇಶನ್ ಕೂಡ ಮಾಡಲಿಲ್ಲ. ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗಲೂ ಭೂ ಪರಿಹಾರ ಘೋಷಿಸಿದರೂ ಹಣ ನೀಡಲಿಲ್ಲ. ನಾನು ಮುಖ್ಯಮಂತ್ರಿಯಾಗಿ ಎಕರೆ ನೀರಾವರಿ ಜಮೀನಿಗೆ 40 ಲಕ್ಷ, ಒಣ ಭೂಮಿಗೆ 30 ಲಕ್ಷ ರೂ ಪರಿಹಾರ ಕೊಡುವ ತೀರ್ಮಾನ ಮಾಡಿ ಕೆಲಸ ಪ್ರಾರಂಭ ಮಾಡಿದ್ದು ಮೂರು ವರ್ಷದಲ್ಲಿ ಪರಿಹಾರ ಕೊಡುತ್ತೇವೆ ಎಂದು ಭರವಸೆ ನೀಡಿದರು.

ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಎಚ್ ವೈ ಮೇಟಿಯವರ ಒತ್ತಾಯದಂತೆ ಬಾಗಲಕೋಟೆಗೆ ಮೆಡಿಕಲ್ ಕಾಲೇಜು ತರಲು ಶಂಕುಸ್ಥಾಪನೆ ಮಾಡಿದ್ದೇವೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮತ್ತು ಟ್ರಾಮಾ ಸೆಂಟರನ್ನೂ ನಾವು ಮಾಡುತ್ತೇವೆ. ನುಡಿದಂತೆ ಮಾಡುವ ಸರ್ಕಾರ ನಮ್ಮದು ಎಂದರು.

ಇದನ್ನು ಓದಿದ್ದೀರಾ? ಅಸ್ಸಾಂ ಅಖಾಡ | ಕಾಂಗ್ರೆಸ್ – ಎಐಯುಡಿಎಫ್ ಜಗಳದಲ್ಲಿ ಕಮಲಕ್ಕೆ ಲಾಭವಾಗಲಿದೆಯೇ?

ಬಿಜೆಪಿಯವರು ನುಡಿದಂತೆ ನಡೆಯಲಿಲ್ಲ. ಒಂದೇ ಒಂದು ರೂಪಾಯಿ ರೈತರ ಸಾಲ ಮನ್ನಾ ಮಾಡಲಿಲ್ಲ. ಕೋವಿಡ್‌ನಿಂದ ಬಳಲಿದ್ದ ರಾಜ್ಯದ ಜನತೆಗೆ ಅನುಕೂಲ ಮಾಡಿಕೊಡಲು ಐದು ಗ್ಯಾರಂಟಿಗಳನ್ನು ತಂದು ಜನರಿಗೆ ನೆರವಾಗಿದ್ದು ನಮ್ಮ ಸರ್ಕಾರ ಎಂದರು.

ಕೇಂದ್ರದ ಬಿಜೆಪಿ ಸರ್ಕಾರ ಕಬ್ಬು ಬಳೆಗೆ ರೈತರ ಬೇಡಿಕೆಯಷ್ಟು ಬೆಂಬಲ ಬೆಲೆ ನೀಡದಿದ್ದಾಗ ನಾನು ರೈತ ಸಂಘಟನೆಗಳು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ನಡೆಸಿ 200 ರೂ ಹೆಚ್ಚು ಮಾಡಿದೆವು. ಎಚ್ ವೈ ಮೇಟಿಯವರು ಜನರ ಕೈಗೆ ಸಿಗುತ್ತಿದ್ದರು. ಅಹಿಂದ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸುತ್ತಿದ್ದರು. ಆದರೆ ಅಧಿಕಾರದಲ್ಲಿದ್ದಾಗ ಜನರಿಗೆ ಸ್ಪಂದಿಸದೆ, ಈಗ ನಮ್ಮ ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಯವರಿಗೆ ಮತ ಕೇಳುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ನಾವು ಪ್ರತೀ ವರ್ಷ 52 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯದ ಜನರ ಜೇಬಿಗೆ ಹಾಕುತ್ತಲೇ ಅಭಿವೃದ್ಧಿ ಕೆಲಸವನ್ನೂ ಮಾಡುತ್ತಿದ್ದೇವೆ. ಬಿಜೆಪಿಯವರು ಕಳ್ಳೆತ್ತುಗಳು. ಗೇಯುವ ಎತ್ತಿಗೆ ತಾನೆ ಮೇವು ಹಾಕೋದು, ಹಾಗೆಯೇ ಕೆಲಸ ಮಾಡಿದ ನಮಗೆ ಕೂಲಿ ಕೊಡಿ ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...