ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆ ಸೇರಿದಂತೆ ನಗರದಲ್ಲಿರುವ ಪಾರಿವಾಳಗಳಿಗೆ ಆಹಾರ ಹಾಕಿದವರ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದಂಡ ವಿಧಿಸಲು ಮುಂದಾಗಿದೆ. ಸದ್ಯ ಪಾಲಿಕೆಯ ಈ ನಡೆಯ ವಿರುದ್ಧ ಪಕ್ಷಿ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಧಾನಿಯಲ್ಲಿ ಪಾರಿವಾಳಗಳ ಸಂಖ್ಯೆ ಹೆಚ್ಚಳವಾಗಿದೆ. ಅದರಲ್ಲಿಯೂ ನಗರದ ರೇಸ್ ಕೋರ್ಸ್ ರೋಡ್, ಕಬ್ಬನ್ ಪಾರ್ಕ್, ಸ್ಯಾಂಕಿ ಟ್ಯಾಂಕ್ ರಸ್ತೆಗಳಲ್ಲಿ ಪಾರಿವಾಳಗಳ ಸಂಖ್ಯೆ ಹೆಚ್ಚಾಗಿದೆ. ಹಾಗೆಯೇ, ಪಾರಿವಾಳಗಳು ಎಲ್ಲಿಲ್ಲಿ ಹೆಚ್ಚಾಗಿ ಕಂಡುಬರುತ್ತವೋ, ಆ ಸ್ಥಳಗಳಲ್ಲಿ ಪಾರಿವಾಳಗಳಿಗೆ ಊಟ ಹಾಕುವವರ ಸಂಖ್ಯೆ ಹೆಚ್ಚಾಗಿದೆ. ಆದರೆ, ಇನ್ನುಮುಂದೆ ಪಾರಿವಾಳಗಳಿಗೆ ಊಟ ಹಾಕಿದರೆ, ₹200 ದಂಡ ಹಾಕಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮದುವೆಯಾಗುವುದಾಗಿ ನಂಬಿಸಿ ವಿಶೇಷ ಚೇತನ ಯುವತಿಗೆ ವಂಚನೆ
ದಿನದಿಂದ ದಿನಕ್ಕೆ ನಗರದಲ್ಲಿ ಪಾರಿವಾಳಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಈ ಬೇಸಿಗೆಯ ಸಮಯದಲ್ಲಿ ಪಾರಿವಾಳಗಳ ಸಂಖ್ಯೆ ಹೆಚ್ಚಳವಾದರೇ, ಆರೋಗ್ಯ ಸಮಸ್ಯೆ ಹೆಚ್ಚಾಗಿ ಕಾಡುತ್ತವೆ. ಅಲ್ಲದೇ, ಪಾರಿವಾಳಗಳ ರೆಕ್ಕೆಗಳಿಂದ ಅಸ್ತಮಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಈ ರೀತಿ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ.