ಬೆಂಗಳೂರು | ನೀರು ನಿರ್ವಹಣೆ, ಪ್ರವಾಹ ತಗ್ಗಿಸುವ ಕಾಮಗಾರಿ; ವಿಶ್ವಬ್ಯಾಂಕ್‌ನಿಂದ ₹3,000 ಕೋಟಿ ಅನುದಾನ ನಿರೀಕ್ಷೆ

Date:

ಬೆಂಗಳೂರಿನಲ್ಲಿ ನೀರು ನಿರ್ವಹಣೆ ಮತ್ತು ಪ್ರವಾಹ ತಗ್ಗಿಸುವ ಉಪಕ್ರಮಗಳಿಗೆ ವಿಶ್ವಬ್ಯಾಂಕ್ ₹3,000 ಕೋಟಿ ಸಾಲ ರೂಪದ ಅನುದಾನ ನೀಡಲು ವಿಶ್ವಬ್ಯಾಂಕ್ ಮುಂದೆಬಂದಿದೆ.

- Advertisement -

ಈ ಕುರಿತ ಪ್ರಸ್ತಾವಣೆಗೆ ಸುಮಾರು ಒಂದು ತಿಂಗಳ ಹಿಂದೆ ಆರ್ಥಿಕ ವ್ಯವಹಾರಗಳ ಇಲಾಖೆ (ಡಿಇಎ) ಗ್ರೀನ್ ಸಿಗ್ನಲ್‌ನೀಡಿದೆ. ಮುಂದಿನ ಹಂತಗಳ ಬಗ್ಗೆ ನಕ್ಷೆ ಮಾಡಲು ಬಿಬಿಎಂಪಿ ಇತ್ತೀಚೆಗೆ ವಿಶ್ವಬ್ಯಾಂಕ್ ಪ್ರತಿನಿಧಿಗಳೊಂದಿಗೆ ತನ್ನ ಮೊದಲ ಸಭೆ ನಡೆಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲುಎಸ್‌ಎಸ್‌ಬಿ) ಸಾಲದ ಮೊತ್ತವನ್ನು ಕ್ರಮವಾಗಿ ₹2,000 ಕೋಟಿ ಮತ್ತು ₹1,000 ಕೋಟಿ ಆಗಿ ಹಂಚಿಕೊಳ್ಳಲಿದೆ.

ವಿಶ್ವಬ್ಯಾಂಕ್‌ನಿಂದ ಪಡೆದ ಸಾಲದೊಂದಿಗೆ ಬಿಬಿಎಂಪಿಯೂ ವಿಶೇಷವಾಗಿ 173 ಕಿಲೋಮೀಟರ್‌ ಉದ್ದಕ್ಕೂ ತಡೆಗೋಡೆಗಳನ್ನು ನಿರ್ಮಿಸುವ ಮೂಲಕ ಬಾಹ್ಯ ಪ್ರದೇಶಗಳಲ್ಲಿ ಮಳೆನೀರಿನ ಚರಂಡಿಗಳನ್ನು ಬಲಪಡಿಸಲು ಯೋಜಿಸಿದೆ. ಜತೆಗೆ, ಕೋರಮಂಗಲ ವ್ಯಾಲಿ ವಾಟರ್​ವೇಯನ್ನು ದಕ್ಷಿಣ ಪಿನಾಕಿನಿ ನದಿಯೊಂದಿಗೆ ಸಂಪರ್ಕಿಸುವ ನಿಟ್ಟಿನಲ್ಲಿ ಯೋಜನೆಯನ್ನು ವಿಸ್ತರಿಸಲಿದೆ.

ಜಲ ಮಂಡಳಿಯು ಹೊಸ ಒಳಚರಂಡಿ ನಿರ್ಮಾಣ ಮತ್ತು ಕೊಳಚೆನೀರಿನ ಸಂಸ್ಕರಣಾ ಘಟಕಗಳನ್ನು ರಚಿಸಲು ಹಣವನ್ನು ಬಳಸಿಕೊಳ್ಳಲಿದೆ.

ಬಿಡಬ್ಲೂಎಸ್‌ಎಸ್‌ಬಿ ಈ ಹಿಂದೆ ಹಲವು ಬಾರಿ ವಿಶ್ವಬ್ಯಾಂಕ್ ನಿಧಿಯನ್ನು ಬಳಸಿಕೊಂಡಿದ್ದರೂ, ಬಿಬಿಎಂಪಿಗೆ ಇದು ಮೊದಲ ಅನುಭವವಾಗಿದೆ. ಮಾಸಾಂತ್ಯದ ವೇಳೆಗೆ ವಿಶ್ವಬ್ಯಾಂಕ್‌ನೊಂದಿಗೆ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಹಂಚಿಕೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ಏಜೆನ್ಸಿಗಳಿಗೆ ನಿಧಿಯ ಜೊತೆಗೆ, ವಿಶ್ವಬ್ಯಾಂಕ್ ಕೂಡ ಕರ್ನಾಟಕಕ್ಕೆ ಪ್ರವಾಹ ತಗ್ಗಿಸಲು ₹2,000 ಕೋಟಿ ನೀಡಲಿದೆ ಎಂದು ತಿಳಿದುಬಂದಿದೆ. ಇದಕ್ಕಾಗಿ ಕರ್ನಾಟಕ ಕಂದಾಯ ಇಲಾಖೆ ಜಾಗತಿಕ ಏಜೆನ್ಸಿಯೊಂದಿಗೆ ಸಂಪರ್ಕದಲ್ಲಿದೆ. ವಿಶ್ವಬ್ಯಾಂಕ್ ಜತೆ ಮಾತುಕತೆ ನಡೆಸುತ್ತಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿಗೆ ಹೆಸರಘಟ್ಟ ಕೆರೆ ನೀರು ಸರಬರಾಜು ನಿರ್ಧಾರ ಮರುಪರಿಶೀಲನೆ: ಜಲಮಂಡಳಿ ಅಧ್ಯಕ್ಷ

ಇತ್ತೀಚಿನ ವರ್ಷಗಳಲ್ಲಿ ಬೆಂಗಳೂರಿನಲ್ಲಿ ಹಠಾತ್ ಪ್ರವಾಹ ಪುನರಾವರ್ತನೆಯಾಗುತ್ತಿದೆ. ಇದು ಜನರ ಜೀವ ಮತ್ತು ಆಸ್ತಿಗೆ ಅಪಾಯವನ್ನುಂಟುಮಾಡುತ್ತಿದೆ.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಸಂಶೋಧಕರಾದ ಪ್ರೊ.ಟಿ.ವಿ.ರಾಮಚಂದ್ರ, ವಿನಯ್ ಎಸ್, ಮತ್ತು ಭರತ್ ಎಚ್ ಐತಾಳ್ ಅವರ 2017 ರ ಅಧ್ಯಯನವು ಬೆಂಗಳೂರಿನ ಪ್ರವಾಹದ ಸಮಸ್ಯೆಗಳ ಹಿಂದೆ ಹಲವಾರು ಕಾರಣಗಳನ್ನು ಗುರುತಿಸಿದೆ. ಇವುಗಳಲ್ಲಿ ಕುಗ್ಗುತ್ತಿರುವ ಮಳೆನೀರಿನ ಚರಂಡಿಗಳು, ಕೆರೆಗಳ ನಾಶ, ಕಣಿವೆ ವಲಯಗಳಲ್ಲಿನ ಉಲ್ಲಂಘನೆಗಳು ಮತ್ತು ಕೆರೆಗಳ ಡಿನೋಟಿಫಿಕೇಶನ್ ಸೇರಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...