ಬೆಂಗಳೂರು | ಒಂದೇ ಠಾಣೆಯಲ್ಲಿ 1.02 ಲಕ್ಷ ಸಂಚಾರ ನಿಮಯ ಉಲ್ಲಂಘನೆ ಪ್ರಕರಣ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಪತ್ತೆ ಮಾಡಲು ಸಂಚಾರ ಪೊಲೀಸರು ನಗರದ ಹಲವೆಡೆ ಕೃತಕ ಬುದ್ದಿಮತ್ತೆ(ಎಐ) ಸಂಚಾರ ನಿರ್ವಹಣಾ ವ್ಯವಸ್ಥೆಯಡಿ (ಐಟಿಎಂಎಸ್) ಆಧುನಿಕ ಕ್ಯಾಮೆರಾ ಅಳವಡಿಸಲಾಗಿದೆ. ಈ ಕ್ಯಾಮೆರಾಗಳು ಕ್ಲಿಕ್ಕಿಸುವ ಫೋಟೋಗಳನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುತ್ತಾರೆ.

ಇದೀಗ, ಬೆಂಗಳೂರಿನ ಸದಾಶಿವನಗರದ ಸಂಚಾರ ಠಾಣೆ ವ್ಯಾಪ್ತಿಯ ಹಲವೆಡೆ ಎಫ್‌ಟಿವಿಆರ್ (ಸಂಚಾರ ನಿಯಮ ಉಲ್ಲಂಘನೆ ವರದಿ) ತಂತ್ರಜ್ಞಾನ ಆಧರಿತ ಕ್ಯಾಮೆರಾಗಳನ್ನು ಅಳಡಿಸಲಾಗಿದೆ. ಇದು ಒಂದೇ ಠಾಣೆ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಪಟ್ಟಂತೆ 2024ರ ಜನವರಿಯಿಂದ ಮೇ 27ರವರೆಗೆ ಬರೋಬ್ಬರಿ 1.02 ಲಕ್ಷ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.

ನಗರದಲ್ಲಿ ಸಿಬ್ಬಂದಿ ಕೊರತೆ ಇದೆ. ಹೀಗಾಗಿ, ಪ್ರತಿಯೊಂದು ವಾಹನಗಳ ಮೇಲೆ ಕಣ್ಣಿಡಲು ಸಾಧ್ಯವಾಗುವುದಿಲ್ಲ. ಇದೇ ಕಾರಣಕ್ಕೆ ನಗರದ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಗರದಲ್ಲಿ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (ಐಟಿಎಂಎಸ್) ಅಡಿಯಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳು, ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ (ಎಎನ್‌ಪಿಆರ್) ಮತ್ತು ರೆಡ್ ಲೈಟ್ ಉಲ್ಲಂಘನೆ ಪತ್ತೆ (ಆರ್‌ಎಲ್‌ವಿಡಿ) ಕ್ಯಾಮೆರಾಗಳಲ್ಲದೆ, ಟ್ರಾಫಿಕ್ ಪೋಲೀಸರು ಕೈಯಲ್ಲಿ ಹಿಡಿಯುವ ಫೀಲ್ಡ್ ಟ್ರಾಫಿಕ್ ಉಲ್ಲಂಘನೆ ವರದಿ (ಎಫ್‌ಟಿವಿಆರ್) ಸಾಧನಗಳೊಂದಿಗೆ ಶಸ್ತ್ರಸಜ್ಜಿತರಾಗಿದ್ದಾರೆ. ಇದು ಇತರ ಟ್ರಾಫಿಕ್ ಉಲ್ಲಂಘನೆಗಳ ನಡುವೆ ವೇಗವಾಗಿ, ಫುಟ್‌ಪಾತ್ ಪಾರ್ಕಿಂಗ್ ಮತ್ತು ರಾಂಗ್ ಸೈಡ್ ಡ್ರೈವಿಂಗ್ ಅನ್ನು ದಾಖಲಿಸಲು ಅನುವು ಮಾಡಿಕೊಡುತ್ತದೆ.

ಎಫ್‌ಟಿವಿಆರ್‌ ನಗರದ ಪ್ರತಿಯೊಂದು ರಸ್ತೆಯಾದ್ಯಂತ ಸಿಬ್ಬಂದಿ ಮತ್ತು ಕ್ಯಾಮೆರಾಗಳ ಕೊರತೆಯನ್ನು ಸರಿದೂಗಿಸುತ್ತದೆ. ವಿಶೇಷವಾಗಿ ಐಟಿಎಮ್‌ಎಸ್‌ ಕ್ಯಾಮೆರಾಗಳನ್ನು ಸ್ಥಾಪಿಸದ ಪ್ರದೇಶಗಳಲ್ಲಿ ಹೆಚ್ಚಿನ ಸಂಚಾರ ಉಲ್ಲಂಘನೆಗಳನ್ನು ಸೆರೆಹಿಡಿಯಲು ಸಂಚಾರ ಪೊಲೀಸರಿಗೆ ಸಹಕರಿಸುತ್ತದೆ.

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಜತೆಗೆ, ಸಂಚಾರ ನಿಯಮಗಳ ಉಲ್ಲಂಘನೆ ಪ್ರಮಾಣವೂ ಹೆಚ್ಚಳವಾಗುತ್ತಿದೆ. ನಿಯಮ ಉಲ್ಲಂಘನೆಯಿಂದಾಗಿ ಅಪಘಾತಗಳು ಸಂಭವಿಸುತ್ತಿವೆ. ಹೆಲ್ಮೆಟ್‌ ಧರಿಸದೇ ವಾಹನ ಸವಾರಿ ಮಾಡುವುದು, ಅತೀ ವೇಗದ ವಾಹನ ಚಾಲನೆ ಸೇರಿದಂತೆ ಹಲವು ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ಸಂಖ್ಯೆ ಹೆಚ್ಚಾಗುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದಲ್ಲಿ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (ಐಟಿಎಂಎಸ್) ಅಡಿಯಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳು ಮುಖ್ಯವಾಗಿ ವೇಗ ಮಿತಿ ಉಲ್ಲಂಘನೆ, ಟ್ರಾಫಿಕ್‌ ಸಿಗ್ನಲ್‌ ನಿಯಮ ಉಲ್ಲಂಘನೆ, ಹೆಲ್ಮೆಟ್‌ ಧರಿಸದಿರುವುದು, ದ್ವಿಚಕ್ರ ವಾಹನದಲ್ಲಿ ನಿಯಮಬಾಹಿರವಾಗಿ 3 ಮಂದಿಯ ಸವಾರಿ, ವಾಹನ ಚಾಲನೆ ಮಾಡುವಾಗ ಮೊಬೈಲ್‌ ಬಳಕೆ, ಸೀಟ್‌ ಬೆಲ್ಟ ಧರಿಸದೆ ವಾಹನ ಚಲಾಯಿಸುವುದು, ಲೇನ್‌ ನಿಯಮ ಪಾಲಿಸದಿರುವುದು, ದೋಷಪೂರಿತ ನೋಂದಣಿ ಫಲಕದಂತಹ ಪ್ರಕರಣಗಳ ಮೇಲೆ ನಿಗಾ ವಹಿಸಿವೆ.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಮತ ಎಣಿಕೆ; ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

ಈ ಕ್ಯಾಮೆರಾಗಳು ಸಂಚಾರ ನಿಯಮ ಉಲ್ಲಂಘಿಘಿಸುವ ವಾಹನಗಳ ಫೋಟೋ ಸೆರೆ ಹಿಡಿದು ವಾಹನದ ನೋಂದಣಿ ಸಂಖ್ಯೆ ಸಮೇತ ಸಂಚಾರ ನಿರ್ವಹಣಾ ಕೇಂದ್ರಕ್ಕೆ (ಟಿಎಂಸಿ) ಮಾಹಿತಿ ರವಾನಿಸುತ್ತಿವೆ. ವಾಹನಗಳ ನೋಂದಣಿ ಸಂಖ್ಯೆ ಹಾಗೂ ಗುರುತು ಸಹ ಪತ್ತೆ ಹಚ್ಚುವುದು ಸುಲಭ. ಈ ಮಾಹಿತಿ ಆಧಾರದಲ್ಲಿ ಐಟಿಎಂಎಸ್‌ ಮೂಲಕ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ನೋಟಿಸ್‌ ಸಿದ್ಧಪಡಿಸಿ ದಂಡ ವಿಧಿಸಲಾಗುತ್ತಿದೆ. ಬಳಿಕ, ದಂಡ ಬಾಕಿ ಇರುವ ಜನರ ಮೊಬೈಲ್‌ ಹಾಗೂ ಮನೆಗಳಿಗೆ ನೋಟಿಸ್ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚನ್ನಪಟ್ಟಣ ಉಪಚುನಾಚಣೆ | ಊಹೆಗಳಾಚೆಗೂ ನಡೆಯುತ್ತಿದೆ ಡಿಕೆಶಿ-ಹೆಚ್‌ಡಿಕೆ ಆಟ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಶೀಘ್ರದಲ್ಲೇ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ಹುರಿಯಾಳು ಯಾರು?...

ಅಂಗನವಾಡಿ ಕೇಂದ್ರಗಳ ಉನ್ನತೀಕರಣ; LKG, UKG ಆರಂಭಿಸಲು ಸಿಎಂ ಸಮ್ಮತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

"ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಹಾಗೂ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಲು...

ವಾಲ್ಮೀಕಿ ನಿಗಮ ಅಕ್ರಮ | ಜಾರಿ ನಿರ್ದೇಶನಾಲಯದಿಂದ ಪ್ರತ್ಯೇಕ ತನಿಖೆ ಆರಂಭ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣವನ್ನು ಜಾರಿ...