ಬೆಂಗಳೂರು | ವ್ಹೀಲಿಂಗ್ ಮಾಡುತ್ತಿದ್ದ 6 ಜನರ ಬಂಧನ; 13 ಬೈಕ್ ಜಪ್ತಿ

0
238
ವ್ಹೀಲಿಂಗ್
ವ್ಹೀಲಿಂಗ್

ಪೊಲೀಸರು ವ್ಹಿಲೀಂಗ್ ಮಾಡುವ ಅಪಾಯದ ಬಗ್ಗೆ ನಿತ್ಯ ಜಾಗೃತಿ ಮೂಡಿಸುತ್ತಿದ್ದಾರೆ. ಆದರೂ, ಪುಂಡರು ಹೆದ್ದಾರಿ, ಪ್ರಮುಖ ರಸ್ತೆ ಸೇರಿದಂತೆ ಜನಸಂದಣಿ ಪ್ರದೇಶಗಳಲ್ಲಿಯೂ ಕೂಡ ವ್ಹೀಲಿಂಗ್ ಮಾಡುತ್ತಿದ್ದಾರೆ. ಇದೀಗ, ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಆರು ಜನ ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ?  ಬೆಂಗಳೂರು | ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ; ಮಾಲೀಕ ಸೇರಿ ನಾಲ್ವರಿಗೆ ಗಾಯ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವ್ಹೀಲಿಂಗ್ ಮಾಡುತ್ತಿದ್ದ ಪುಂಡರ 13 ಬೈಕ್​ಗಳನ್ನು ಸಂಚಾರ ಪೊಲೀಸರು ಜಪ್ತಿ ಮಾಡಿದ್ದಾರೆ. ಇವರು ಶಿವರಾತ್ರಿ ಸೇರಿದಂತೆ ಇತರೆ ಹಬ್ಬಗಳ ಸಂದರ್ಭಗಳಲ್ಲಿ ಅಪಾಯಕಾರಿ ವ್ಹೀಲಿಂಗ್ ಮಾಡುವ ಮೂಲಕ ಇತರೆ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದರು. ಈ ಹಿನ್ನಲೆ ಯೋಜನೆ ರೂಪಿಸಿದ ಪೊಲೀಸರು, ಮೊದಲಿಗೆ ವ್ಹೀಲಿಂಗ್ ಮಾಡುತ್ತಿದ್ದ ದೃಶ್ಯವನ್ನ ಸರೆ ಹಿಡಿದು ಆರೋಪಿಗಳನ್ನು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here