ಬೆಂಗಳೂರು | ಹಿಟ್‌ ಆ್ಯಂಡ್ ರನ್‌ಗೆ 62 ವರ್ಷದ ವೃದ್ಧೆ ಬಲಿ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನೇದಿನೆ ಹಿಟ್‌ ಆ್ಯಂಡ್​ ರನ್ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಇದೀಗ ಮಹಿಳೆಯೊಬ್ಬರು ಬಲಿಯಾದ ಘಟನೆ ನಗರದ ಮಹಾಲಕ್ಷ್ಮೀ ಲೇಔಟ್‌ನ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ.

ಆಶಾರಾಣಿ (62) ಮೃತ ದುರ್ದೈವಿ. ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿಯಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಮಲ್ಲೇಶ್ವರಂ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೃತ ಆಶಾ ಅವರು ಶ್ರೀರಂಗಪಟ್ಟಣಕ್ಕೆ ತೆರಳಲು ಬೆಳಗಿನ‌ ಜಾವ 5:40ರ ಸುಮಾರಿಗೆ ಮನೆ ಬಿಟ್ಟಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ವೇಳೆ ಸುಮಾರು ಆರು ಗಂಟೆಗೆ ಅಪಘಾತ ಸಂಭವಿಸಿದೆ. ನಸುಕಿನ ವೇಳೆ ಬೆಳಕು ಕಡಿಮೆ ಇದ್ದ ಕಾರಣ ಯಾವ ವಾಹನ ಡಿಕ್ಕಿ ಹೊಡೆದಿದೆ ಎಂಬ ಬಗ್ಗೆ ಪತ್ತೆಯಾಗಿಲ್ಲ.

Advertisements

ಇದೀಗ, ಪೊಲೀಸರು ಆ ಭಾಗದಲ್ಲಿ ಆ ಹೊತ್ತಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ. ಹಿಟ್‌ ಆ್ಯಂಡ್​ ರನ್‌ ಮಾಡಿ ಹೋದ ವಾಹನವನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 50,000ಕ್ಕೂ ಅಧಿಕ ದಂಡ ಬಾಕಿ ಇದ್ದರೆ, ಮನೆ ಬಾಗಿಲಿಗೆ ಬರ್ತಾರೆ ಸಂಚಾರ ಪೊಲೀಸರು!

ಬೆಂಗಳೂರಿನಲ್ಲಿ ಕಳೆದ ಕೆಲವು ದಿನದಿಂದ ಹಿಟ್‌ ಆ್ಯಂಡ್​ ರನ್‌ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಅದರಲ್ಲೂ ರಾತ್ರಿಯ ಸಮಯ ಮತ್ತು ಮುಂಜಾನೆ ಸಮಯ ವಾಹನಗಳು ಅತಿವೇಗವಾಗಿ ಮತ್ತು ವಿವೇಚನೆ ಇಲ್ಲದೆ ಸಾಗಿ ಜನರ ಜೀವವನ್ನು ಬಲಿ ಪಡೆಯುತ್ತಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

Download Eedina App Android / iOS

X