ಸಂಪ್‌ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪ ನಗರದ ವಿಶಾಲ್ ಮಾರ್ಟ್ ಮುಂಭಾಗ ನಡೆದಿದೆ.
ಸುಬೀನ್ ಸಾವನ್ನಪ್ಪಿರುವ ಬಾಲಕ. ನೇಪಾಳ ಮೂಲದ ದಂಪತಿಯ ಪುತ್ರ. ಈ ದಂಪತಿ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ದಂಪತಿ ಮಗುವನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಇನ್ನು ಕೆಲಸದಿಂದ ಮನೆಗೆ ಬಂದು ನೋಡಿದಾಗ ಮಗು ಕಂಡಿಲ್ಲ. ಕೂಡಲೇ ತಂದೆ-ತಾಯಿ ಮಗುವಿಗಾಗಿ ಹುಡುಕಾಟ ನಡೆಸಿದ್ದಾರೆ.
ಈ ವೇಳೆ, ಸಂಪಿನಲ್ಲಿ ಮಗು ಪತ್ತೆಯಾಗಿದೆ. ಕೂಡಲೇ ಕೆ.ಆರ್.ಪುರ ಸರ್ಕಾರಿ ಆಸ್ಪತ್ರೆಗೆ ಮಗುವನ್ನ ಕರೆದುಕೊಂಡು ಹೋಗಿದ್ದಾರೆ. ಆದರೆ, ಆ ವೇಳೆಗಾಗಲೇ ಮಗು ಕೊನೆಯುಸಿರೆಳೆದಿತ್ತು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಫಾರ್ಮ್‌ಹೌಸ್‌ನಲ್ಲಿ ರೇವ್ ಪಾರ್ಟಿ; ಐವರ ಬಂಧನ
ಈ ಸಂಬಂಧ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.