ಮಗಳ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭವತಿಯನ್ನಾಗಿ ಮಾಡಿದ್ದ ತಂದೆಗೆ 20 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ದಂಡವನ್ನು ವಿಧಿಸಿ ಐದನೇ ಅಧಿಕ ಮತ್ತ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ನ್ಯಾಯಾಧೀಶರಾದ ಎನ್ ನರಸಮ್ಮ ಅವರು ಈ ಆದೇಶ ನೀಡಿದ್ದಾರೆ. 2022ರಲ್ಲಿ ಕಾಮುಕ ತಂದೆ ಆಕೆಯ ಮಗಳ ಮೇಲೆ ಅತ್ಯಾಚಾರ ನಡೆಸಿದ್ದನು. ಈ ಬಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಈ ಹಿಂದೆ ಕಾಮಾಕ್ಷಿಪಾಳ್ಯದ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ಬಿ.ಎನ್ ಲೋಹಿತ್ ತನಿಖೆ ನಡೆಸಿ ಐದನೇ ಅಧಿಕ ಮತ್ತ ಸತ್ರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಎಸ್‌ಐಓನ ರಾಜ್ಯ ಕಚೇರಿ ‘ವಿದ್ಯಾರ್ಥಿ ಭವನ’ ಉದ್ಘಾಟನೆ
ಇದೀಗ ನ್ಯಾಯಾಲಯ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 10 ಸಾವಿರ ದಂಡ ವಿಧಿಸಿದೆ. ಸಂತ್ರಸ್ತ ಬಾಲಕಿಗೆ ಜಿಲ್ಲಾ ಮತ್ತು ಕಾನೂನು ಪ್ರಾಧಿಕಾರದಿಂದ ಏಳು ಲಕ್ಷ ಪರಿಹಾರ ನೀಡಬೇಕು ಎಂದು ಸೂಚಿಸಿದೆ.
Nice Jadgement