ಬೆಂಗಳೂರು | ಐಷಾರಾಮಿ ಕಾರು ಕೊಡಿಸುವುದಾಗಿ ವೈದ್ಯರೊಬ್ಬರಿಗೆ ನಂಬಿಸಿ ₹6 ಕೋಟಿ ವಂಚನೆ

Date:

ವೈದ್ಯರೊಬ್ಬರಿಗೆ ‍ಐಷಾರಾಮಿ ಕಾರು ಕೊಡಿಸುವುದಾಗಿ ನಂಬಿಸಿ, ಮಹಿಳೆಯೊಬ್ಬರು ಬರೋಬ್ಬರಿ ₹6 ಕೋಟಿ ವಂಚನೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗಿರೀಶ್ ಮೋಸ ಹೋದ ವೈದ್ಯ. ಐಶ್ವರ್ಯ ಗೌಡ ಆರೋಪಿ. ಸದ್ಯ ಈ ಬಗ್ಗೆ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಗಿರೀಶ್ ಅವರು ವೈದ್ಯರಾಗಿದ್ದು, ಇವರ ಬಳಿ ಆರೋಪಿ ಐಶ್ವರ್ಯ ಗೌಡ ಕಾಸ್ಮೆಟಿಕ್ ಸರ್ಜರಿ ಮಾಡಿಸಲು 2022ರ ಮಾರ್ಚ್‌ನಲ್ಲಿ ಬಂದಿದ್ದಳು. ಆಗ ವೈದ್ಯರಿಗೂ ಆರೋಪಿಗೂ ಪರಿಚಯವಾಗಿದೆ.

ಈ ವೇಳೆ, ಆರೋಪಿ ಐಶ್ವರ್ಯ ತಾನು ರಿಯಲ್​ ಎಸ್ಟೇಟ್​ ಫೈನಾನ್ಸ್​​ ನಡೆಸುತ್ತಿದ್ದು, ಸೆಕೆಂಡ್​​ ಹ್ಯಾಂಡ್​​ ಕಾರುಗಳ ವ್ಯವಹಾರ ಸಹ ನಡೆಸುತ್ತಿದ್ದೇನೆ ಎಂದು ಪರಿಚಯ ಮಾಡಿಕೊಂಡಿದ್ದಳು.

ಗಿರೀಶ್ ಸೆಕೆಂಡ್ ಹ್ಯಾಂಡ್ ಐಷಾರಾಮಿ ಕಾರು ಖರೀದಿ ಮಾಡಲು ಯೋಚಿಸುತ್ತಿದ್ದಾಗ ಮಹಿಳೆಯನ್ನು ಸಂಪರ್ಕ ಮಾಡಿದ್ದಾರೆ. ಆರೋಪಿ ಕಡಿಮೆ ಬೆಲೆಗೆ ಐಷಾರಾಮಿ ಕಾರ್ ಕೊಡಿಸುವುದಾಗಿ ನಂಬಿಸಿ, ವೈದ್ಯರ ಬಳಿಯಿಂದ ಮೊದಲನೆಯದಾಗಿ ₹2 ಕೋಟಿ 75 ಲಕ್ಷ ಹಣವನ್ನು ಆನ್​ಲೈನ್​ ಮೂಲಕ ಪಾವತಿ ಮಾಡಿಸಿಕೊಂಡಿದ್ದಾಳೆ. ಅಲ್ಲದೇ, ₹3 ಕೋಟಿ 25 ಲಕ್ಷ ನಗದಾಗಿ ಪಡೆದುಕೊಂಡಿದ್ದಾಳೆ.

ಹಣ ಪಡೆದು ತುಂಬಾ ದಿನಗಳಾದರೂ ಕಾರನ್ನು ಕೊಡಿಸದ ಆಕೆಯ ಮೇಲೆ ಅನುಮಾನಗೊಂಡ ಗಿರೀಶ್ “ಕಾರನ್ನು ಕೊಡಿಸದಿದ್ದರೇ, ಹಣ ವಾಪಸ್ ನೀಡಿ” ಎಂದು ಕೇಳಿದ್ದಾರೆ. ಆ ಸಮಯದಲ್ಲಿ ಕೊಡುವುದಾಗಿ ಸಬೂಬು ಹೇಳಿ ಮುಂದೂಡಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಕ್ಕಳ ನಾಪತ್ತೆ ಪ್ರಕರಣ ಶೇ.34 ರಷ್ಟು ಏರಿಕೆ

ವೈದ್ಯ ಡಿಸೆಂಬರ್‌ನಲ್ಲಿ ಹಣ ತಿರುಗಿಸುವಂತೆ ಕೇಳಿದಾಗ, ಆರೋಪಿ ಐಶ್ವರ್ಯ ವಿಜಯನಗರ ಕ್ಲಬ್ ಹತ್ತಿರ ಬರಲು ತಿಳಿಸಿದ್ದಾಳೆ. ಅದರಂತೆ ಗಿರೀಶ್ ಮತ್ತು ಅವರ ಪತ್ನಿ ಕ್ಲಬ್ ಹತ್ತಿರ ಹೋದಾಗ, ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾಳೆ. ಅಲ್ಲದೇ, ಪದೇಪದೆ ಹಣ ಕೇಳಿದರೆ, ಅತ್ಯಾಚಾರದ ದೂರು ಕೊಡುತ್ತೇನೆ ಎಂದು ಹೆದರಿಕೆ ಹಾಕಿದ್ದಾರೆ.

ಇಷ್ಟೇ ಅಲ್ಲದೇ, ಈ ವಿಷಯವನ್ನು ಕೈ ಬಿಡಬೇಕಾದರೆ ₹5 ಲಕ್ಷ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ವೈದ್ಯರಿಂದ ಪುನಃ ₹2 ಲಕ್ಷ ಹಣ ಸುಲಿಗೆ ಮಾಡಿದ್ದಾರೆ ಎಂದು ವೈದ್ಯರು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ವಿಜಯನಗರ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್​ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಬಿಸಿಲಿನ ತಾಪ ಹೆಚ್ಚಳ; ಮೃಗಾಲಯ ತಂಪಾಗಿಡಲು ವಿಶೇಷ ವ್ಯವಸ್ಥೆ

ಪ್ರಸ್ತುತ ವರ್ಷ ಮೈಸೂರು ನಗರದಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿರುವುದರಿಂದ ಮೃಗಾಲಯದ ಪ್ರಾಣಿಗಳು...

ತುಮಕೂರು | ಹಾಲಪ್ಪ ಯಾರು? ಮುದ್ದಹನುಮೇಗೌಡರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ: ಸಚಿವ ರಾಜಣ್ಣ

ಮಾಜಿ ಸಂಸದ ಮುದ್ದಹನುಮೇಗೌಡ ಅವರು ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದು,...

ಬೆಂಗಳೂರು | ಕನ್ನಡ ನಾಮಫಲಕ ಕಡ್ಡಾಯ; ತಪ್ಪಿದಲ್ಲಿ ‘ಕರ್ನಾಟಕ ಬಂದ್’: ವಾಟಾಳ್ ನಾಗರಾಜ್ ಎಚ್ಚರಿಕೆ

ಕನ್ನಡ ನಾಮಫಲಕ ಕಡ್ಡಾಯಕ್ಕೆ ಮೂರು ದಿನಗಳಷ್ಟೇ ಬಾಕಿ ಉಳಿದಿದ್ದು, ಗಡುವು ಮುಗಿಯುವುದರೊಳಗಾಗಿ...

ತುಮಕೂರು | ಲೋಕಸಭಾ ಚುನಾವಣೆಗೆ ಜೆಡಿಎಸ್‌ ಟಿಕೆಟ್‌ ಬೇಡಿಕೆಯಿಟ್ಟ ಕೆ.ಟಿ ಶಾಂತಕುಮಾರ್

ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್...