ಬೆಂಗಳೂರು | ಮಗನನ್ನೇ ಗುಂಡಿಕ್ಕಿ ಕೊಲೆ ಮಾಡಿದ ತಂದೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಂದೆಯೊಬ್ಬ ಮಗನನ್ನೇ ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಗುರುವಾರ ರಾತ್ರಿ ನಡೆದಿದೆ.

- Advertisement -

ನರ್ತನ್ ಬೋಪಣ್ಣ (32) ಕೊಲೆಯಾದ ದುರ್ದೈವಿ. ಸುರೇಶ್ ಆರೋಪಿ ತಂದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕರೆಕಲ್​ನ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಸುರೇಶ್ ಎಂಬವರು ಮಗ ನರ್ತನ್ ಬೋಪಣ್ಣ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.​​

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಘಟನೆ ನಡೆದ ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದರು. ಈ ವೇಳೆ, ನರ್ತನ್ ಗಂಭೀರವಾಗಿ ಗಾಯಗೊಂಡಿದ್ದರು. ಅವರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ಕೂಡಲೇ ನರ್ತನ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆದರೆ, ಚಿಕಿತ್ಸೆ ಫಲಕಾರಿಯಾಗದೇ, ಸಾವನ್ನಪ್ಪಿದ್ದಾರೆ. ಸದ್ಯ, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ತ್ಯಾಜ್ಯ ಉತ್ಪಾದಕರಿಂದ ಆಸ್ತಿ ತೆರಿಗೆಯೊಂದಿಗೆ ಸೇವಾ ಶುಲ್ಕ ಸಂಗ್ರಹಿಸಲು ಬಿಬಿಎಂಪಿ ನಿರ್ಧಾರ

ಸದ್ಯ ಘಟನೆಯ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...