ಬೆಂಗಳೂರು | ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ; ಮಾಲೀಕ ಸೇರಿ ನಾಲ್ವರಿಗೆ ಗಾಯ

Date:

ಬೆಂಗಳೂರಿನ ಬಸವೇಶ್ವರನಗರದ ಗ್ಯಾರೇಜ್‌ನಲ್ಲಿ ಮಾರ್ಚ್ 9ರಂದು ಸಾಯಂಕಾಲ ಅಗ್ನಿ ಅವಘಡ ಸಂಭವಿಸಿದ್ದು, ಗ್ಯಾರೇಜ್ ಮಾಲೀಕ ಸೇರಿ ನಾಲ್ವರಿಗೆ ಗಾಯವಾಗಿದೆ.

- Advertisement -

ಗ್ಯಾರೇಜ್ ಮಾಲೀಕ ಜಾರ್ಜ್, ಕೆಲಸಗಾರ ಶಿವು ಇನ್ನು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರಿಗೆ ಗಾಯವಾಗಿದೆ. ಮೇಲ್ನೋಟಕ್ಕೆ ವೆಲ್ಡಿಂಗ್ ಗ್ಯಾಸ್ ಟ್ಯಾಂಕ್ ಸ್ಫೋಟದಿಂದ ಘಟನೆ ಸಂಭವಿಸಿರುವ ಸಾಧ್ಯತೆಯಿದೆ. ಸ್ಫೋಟದಿಂದ 2 ಅಂತಸ್ತಿನ ಮನೆಗೂ ಹಾನಿಯಾಗಿದ್ದು, ಸ್ವಿಫ್ಟ್ ಡಿಸೈರ್ ಕಾರು, ದ್ವಿಚಕ್ರ ವಾಹನ ಸಂಪೂರ್ಣ ಹಾನಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಘಟನೆ ಹಿನ್ನಲೆ, ಗ್ಯಾರೇಜ್ ಪಕ್ಕದ ಮನೆ ಹಾಗೂ ನಿರ್ಮಾಣ ಹಂತದ ಕಟ್ಟಡಕ್ಕೂ ಹಾನಿಯಾಗಿದೆ. ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಜೆ ಆರು ಗಂಟೆ ಸುಮಾರಿಗೆ ಅವಘಡ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಗ್ಯಾರೇಜ್ ಸುತ್ತಮುತ್ತ ಇರುವ ಕೆಲ ಮನೆಗಳ ಕಿಟಕಿ ಗಾಜುಗಳು ಸಹ ಜಖಂಗೊಂಡಿವೆ. ಗ್ಯಾರೇಜ್ ಮಾಲೀಕ ಜಾರ್ಜ್, ಕೆಲಸಗಾರ ಶಿವು ಹಾಗೂ ಇಬ್ಬರು ಸಾರ್ವಜನಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳುಗಳನ್ನ ಚಿಕಿತ್ಸೆಗಾಗಿ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡಿರುವ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 4 ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ, ಆತಂಕ ಬೇಡ : ಜಲಮಂಡಳಿ ಅಧ್ಯಕ್ಷ

“ವೆಲ್ಡಿಂಗ್ ಮೆಷಿನ್​​ನಿಂದ ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ದೊಡ್ಡ ಪ್ರಮಾಣದ ಗಾಯ ಯಾರಿಗೂ ಆಗಿಲ್ಲ. ರೆವೆನ್ಯೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ಮಾಡುತ್ತಾರೆ. ಮೊದಲು ಗ್ಯಾರೇಜ್ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಅನಧಿಕೃತವಾಗಿ ಗ್ಯಾಸ್ ವೆಲ್ಡಿಂಗ್ ಮಾಡುತ್ತಿದ್ದರು ಎಂಬ ಮಾಹಿತಿ ಈಗ ಸಿಕ್ಕಿದೆ. ಸುರಕ್ಷತಾ ಕ್ರಮ ಕೈಗೊಂಡಿದ್ದರಾ? ಎಂಬ ಬಗ್ಗೆ ತಿಳಿದುಕೊಳ್ಳಬೇಕು. ತಪ್ಪಿದ್ದರೇ, ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು” ಎಂದು ಘಟನಾ ಸ್ಥಳ ಪರಿಶೀಲನೆ ನಂತರ ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...