ಬೆಂಗಳೂರು | 15 ದಿನದ ಮಗುವಿಗೆ ‘ಹಾರ್ಟ್ ಆಪರೇಷನ್’ ಮಾಡಿ ಯಶಸ್ವಿಯಾದ ಸರ್ಕಾರಿ ಆಸ್ಪತ್ರೆ ವೈದ್ಯರು

Date:

ರಾಜ್ಯ ರಾಜಧಾನಿ ಬೆಂಗಳೂರಿನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ 15 ದಿನದ ಎಳೆ ಮಗುವಿಗೆ ವೈದ್ಯರು ‘ಹಾರ್ಟ್ ಆಪರೇಷನ್’ (ಹೃದಯ ಶಸ್ತ್ರಚಿಕಿತ್ಸೆ) ಮಾಡಿದ್ದು, ಚಿಕಿತ್ಸೆ ಯಶಸ್ವಿಯಾಗಿದೆ.

- Advertisement -

15 ದಿನದ ಎಳೆಯ ಕಂದ ಹೃದಯ ಸಮಸ್ಯೆಯಿಂದ ಬಳಲುತ್ತಿತ್ತು. ಈ ಹಿನ್ನೆಲೆ, ಪೋಷಕರು ಮಗುವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ದಾಖಲು ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾತಾಳ ಸೀಳಿ ಪೈರಾಗಿ ಎದ್ದವನು: ಕನ್ನಡ ಮನಸ್ಸಿನಲ್ಲಿ ಬಲೀಂದ್ರನ...

ಸತ್ಯನಿಷ್ಠೆ, ಮಹೋದಾರತೆ ಮತ್ತು ಶ್ರಮಸಂಸ್ಕೃತಿಯ ಫಲವಂತಿಕೆಯಾಗಿ ಸಾವನ್ನು ಗೆದ್ದು ಜನಮಾನಸದಲ್ಲಿ ನೆಲೆಗೊಂಡಿರುವ ಬಲಿ ಕೇವಲ ಸೋಲಿನ ಸಂಕೇತವಲ್ಲ; ಆತ ಚಾರಿತ್ರಿಕವಾಗಿ ಪ್ರಭುತ್ವದ ವಂಚನೆಯನ್ನು ಬಯಲು ಮಾಡುವ ಜೀವಂತ ಪ್ರತಿರೋಧ. ಊರಿಗೆಲ್ಲ ದೀಪಾವಳಿಯು ಬೆಳಕಿನ ಸಂಭ್ರಮವಾದರೆ,...

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು...

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ...

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ...

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ ಸಂಭ್ರಮದ ಪ್ರತೀಕವಾಗಿಯೂ ಪರಿಗಣಿಸಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಹಬ್ಬ ಪ್ರತಿವರ್ಷವೂ 'ಉಸಿರುಗಟ್ಟಿಸುವ ನರಕಯಾತನೆ'ಯಾಗಿ ಬದಲಾಗುತ್ತಿರುವುದು ಕಟು ಸತ್ಯ....

ಆರು ತಿಂಗಳಿಗೆ ಮಗುವಿನ ಜನನವಾಗಿತ್ತು. ಅಲ್ಲದೇ, ಮಗುವಿನ ಹೃದಯದಲ್ಲಿ ರಂಧ್ರವಿದ್ದ ಕಾರಣ ಉಸಿರಾಟಕ್ಕೆ ತೊಂದರೆಯಾಗಿತ್ತು. ಮಗುವನ್ನು ಹುಟ್ಟಿದಾಗಿನಿಂದಲೇ ವೆಂಟಿಲೇಶನ್‌ನಲ್ಲಿ ಇರಿಸಲಾಗಿತ್ತು. ಮಗು ಬದುಕುವುದೇ ಕಷ್ಟಕರ ಎಂದು ಪೋಷಕರು ಹೆದರಿದ್ದರು. ಮಗುವನ್ನು ಉಳಿಸಿಕೊಳ್ಳಲು ಪೋಷಕರು ಹಲವು ಆಸ್ಪತ್ರೆಗಳಿಗೆ ಸುತ್ತಾಟ ನಡೆಸಿ, ಕೊನೆಗೆ ಇಂದಿರಾ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಿದ್ದರು.

ಸದ್ಯ, ಮಗುವಿನ ಹೃದಯ ಸಮಸ್ಯೆಗೆ ಪಿಡಿಎ ಲೈಗೇಷನ್ ಸರ್ಜರಿ ಮಾಡಿರುವ ವೈದ್ಯರು, ಮಗುವಿನ ಜೀವ ಉಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದರ್ಶನ್ ಪ್ರಕರಣ | ತನಿಖಾಧಿಕಾರಿಯಾಗಿ ಗಿರೀಶ್ ನಾಯ್ಕ್ ಮರು ನೇಮಕ

“ಮಗುವಿನ ಸಮಸ್ಯೆ ಬಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಕೇಳಿದಾಗ ₹30 ಲಕ್ಷ ಖರ್ಚಾಗುತ್ತದೆ ಎಂದಿದ್ದರು. ಈಗ ಇಂದಿರಾ ಗಾಂಧಿ ಆಸ್ಪತ್ರೆಯಲ್ಲಿ ಕೇವಲ ₹7 ಸಾವಿರಕ್ಕೆ ಸರ್ಜರಿ ಮಾಡಿದ್ದಾರೆ. ಈ ಹಿಂದೆ ಸರ್ಕಾರಿ ಆಸ್ಪತ್ರೆ ಮೇಲೆ ಅಷ್ಟೊಂದು ನಂಬಿಕೆ ಇರಲಿಲ್ಲ. ಇದೀಗ, ತುಂಬಾ ಖುಷಿಯಾಯಿತು. ಮಗುವನ್ನ ಆಸ್ಪತ್ರೆಯ ಕರೆದುಕೊಂಡು ಬಂದಾಗ 800 ಗ್ರಾಂ ಇತ್ತು. ಸರ್ಕಾರಿ ಆಸ್ಪತ್ರೆಯಲ್ಲಿ ಬಡವರ ಜೀವ ಉಳಿಯುತ್ತೆ‌ ಎನ್ನುವ ನಂಬಿಕೆ ಜಾಸ್ತಿಯಾಗಿದೆ” ಎಂದು ಮಗುವಿನ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪ್ರದೀಪ್ ಪೂಜಾರಿ ಸಾವಿನ ಪ್ರಕರಣ: ಮೂರು ಪ್ರಕರಣಗಳ ತನಿಖೆ ಸಿಐಡಿಗೆ ಹಸ್ತಾಂತರ

ಪೆರ್ಡೂರಿನ ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ...

ಚಿಕ್ಕಮಗಳೂರು | ತೋಟದ ನೀರಿನ ತೊಟ್ಟಿಯಲ್ಲಿ ಕಾರ್ಮಿಕರ ಶವ ಪತ್ತೆ 

ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ಅಡಿಕೆ ತೋಟದ ಮನೆಯ ನೀರಿನ ತೊಟ್ಟಿಯಲ್ಲಿ...