ಗಾರೆ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯ ಕಾಫಿ ಬೋರ್ಡ್ ಬಳಿ ನಡೆದಿದೆ.
ಮಹಿಳೆಯನ್ನು ನಿರ್ಮಾಣ ಹಂತದ ಕಟ್ಟಡದಲ್ಲಿ ಹತ್ಯೆಗೈಯಲಾಗಿದೆ. ಗಾರೆ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ.
ಮಂಗಳವಾರ (ಏ.2) ರಾತ್ರಿ ಈ ಘಟನೆ ನಡೆದಿದ್ದು, ರಾಯಚೂರು ಮೂಲದ ಮಹಿಳೆ ಕೊಲೆಯಾದ ದುರ್ದೈವಿ. 18 ವರ್ಷದ ಯುವಕ ಈ ಭೀಕರ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಬಳಿಕ ಮರ್ಮಾಂಗದ ಮೇಲೆ ಹಲ್ಲೆ ಮಾಡಿ ಕೊಂದು ವಿಕೃತಿ ಮೆರೆದಿದ್ದಾನೆ.
ಈ ಸುದ್ದಿ ಓದಿದ್ದೀರಾ? ಬಿಜೆಪಿ ಸರ್ವಾಧಿಕಾರಿ ಧೋರಣೆ ಖಂಡಿಸಿ ಏ.7ರಂದು ಎಎಪಿ ಉಪವಾಸ ಸತ್ಯಾಗ್ರಹ
ಕಟ್ಟಡದ ಮಾಲೀಕ ಇಂದು ಬೆಳಿಗ್ಗೆ ಬಂದು ನೋಡಿದಾಗ ಮಹಿಳೆ ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ. ಅಮೃತಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದ್ದು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.