ಬೆಂಗಳೂರು | ಹಾಡಹಗಲೇ ಗುಂಡು ಹಾರಿಸಿ ಜ್ಯೂವೆಲ್ಲರಿ ಶಾಪ್ ಕಳ್ಳತನ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಗುಂಡು ಹಾರಿಸಿ ಜ್ಯೂವೆಲ್ಲರಿ ಶಾಪ್ ಕಳ್ಳತನ ಮಾಡಿದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯ ಪೈಪ್​ಲೈನ್ ರಸ್ತೆಯಲ್ಲಿ ನಡೆದಿದೆ

ಬ್ಯಾಡರಹಳ್ಳಿಯ ಪೈಪ್‌ಲೈನ್ ರಸ್ತೆಯಲ್ಲಿರುವ ವಿನಾಯಕ ಜ್ಯೂವೆಲ್ಲರಿ ಶಾಪ್‌ಗೆ ಗುರುವಾರ (ಸೆ.12) ಬೆಳಗ್ಗೆ ಸುಮಾರು 10.45ರ ಸುಮಾರಿಗೆ ಎರಡು ಬೈಕ್‌ನಲ್ಲಿ 4 ಜನ ದರೋಡೆಕೋರರು ಬಂದಿದ್ದಾರೆ. ದರೋಡೆಕೋರರು ಉಪಾಯವಾಗಿ ಜ್ಯೂವೆಲ್ಲರಿ ಶಾಪ್‌ಗೆ ಬಂದಿದ್ದು, ಜತೆಗೆ ಲಾಂಗ್, ಚಾಕು ಹಾಗೂ ಗನ್ ತೆಗೆದುಕೊಂಡು ಬಂದಿದ್ದಾರೆ.

ದರೋಡೆಕೋರರು ಏಕಾಏಕಿ ಒಳಬಂದು ವಿನಾಯಕ ಜ್ಯೂವೆಲ್ಲರಿ ಶಾಪ್‌ ಮಾಲೀಕ ಮನೋಜ್ ಅವರಿಗೆ ಬಂದೂಕು ತೋರಿಸಿ ಬೆದರಿಸಿ ಹಣ ಮತ್ತು ಒಡವೆ ನೀಡಲು ಹೇಳಿದ್ದಾರೆ. ಇದಕ್ಕೆ ಅಂಗಡಿ ಮಾಲೀಕ ಮನೋಜ್ ಹೆದರದೆ ಅವರನ್ನು ತಡೆಯಲು ಮುಂದಾದಾಗ, ದರೋಡೆಕೋರರು ಮನೋಜ್ ಅವರ ಕಾಲಿಗೆ ಗುಂಡು ಹಾರಿಸಿದ್ದಾರೆ. ಬಳಿಕ ಶಾಪ್‌ನಲ್ಲಿದ್ದ ಚಿನ್ನಾಭರಣವನ್ನೆಲ್ಲ ದೋಚಿ ಪರಾರಿಯಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮನೋಜ್ ಅವರನ್ನು ಹಿಡಿಯಲು ಯತ್ನಿಸಿದಾಗ ದರೋಡೆಕೋರರು ಗಾಬರಿಯಿಂದ ತಾವು ತಂದಿದ್ದ ಬ್ಲಾಕ್ ಪಲ್ಸರ್ ಬೈಕ್ ಅನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಬೈಕ್ ಕೂಡ ಕದ್ದಿರುವ ಶಂಕೆ ವ್ಯಕ್ತವಾಗಿದೆ. ದರೋಡೆಕೋರರು ಸುಮಾರು ಒಂದು ‌ಕೆ.ಜಿಯಷ್ಟು ಚಿನ್ನಾಭರಣ ಕಳ್ಳತನ ಮಾಡಿದ್ದಾರೆ ಎಂದು ಮನೋಜ್ ತಿಳಿಸಿದ್ದಾರೆ.

ಸದ್ಯ ಮನೋಜ್ ಅವರು ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಮಾರು 1 ಕೆಜಿಗೂ ಹೆಚ್ಚು ಚಿನ್ನಾಭರಣ ದರೋಡೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಸ್ಥಳಕ್ಕೆ ಬ್ಯಾಡರಹಳ್ಳಿ ಠಾಣಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಹಾಡಹಗಲೇ ನಡೆದ ಘಟನೆಯಿಂದ ಸ್ಥಳೀಯ ವ್ಯಾಪಾರಿಗಳು ಭಯಭೀತರಾಗಿದ್ದಾರೆ. ದೂರು ದಾಖಲಿಸಿಕೊಂಡಿರುವ ಬ್ಯಾಡರಹಳ್ಳಿ ಪೊಲೀಸರು ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅತ್ತಿಬೆಲೆ ದುರಂತ | ಪಟಾಕಿ ಖರೀದಿಗಾಗಿ ಹೋಗಿ ಅವಘಡಕ್ಕೆ ಸಿಲುಕಿದ್ದ ಬಾಡಿ ಬಿಲ್ಡರ್ ವೆಂಕಟೇಶ್ ಸಾವು

“ನಾಲ್ಕು ಜನ ದರೋಡೆಕೋರರು ಬೈಕ್‌ನಲ್ಲಿ ಬಂದು ಈ ಕೃತ್ಯ ಎಸಗಿದ್ದಾರೆ. ಪರಾರಿಯಾಗುವ ಸಂದರ್ಭದಲ್ಲಿ ಬೈಕ್‌ ಅನ್ನು ಅಲ್ಲಿಯೇ ಬಿಟ್ಟು ತೆರಳಿದ್ದಾರೆ. ಆರೋಪಿಗಳ ಪತ್ತೆಗೆ ನಾಲ್ವರು ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ನಾಲ್ಕು ತಂಡ ರಚನೆ ಮಾಡಲಾಗಿದೆ. ಒಂದು ಕೆಜಿಗೂ ಹೆಚ್ಚಿನ ಚಿನ್ನಾಭರಣ ದರೋಡೆ ಆಗಿರುವ ಮಾಹಿತಿಯಿದೆ” ಎಂದು ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ ಕರೆ

ಬಿಜೆಪಿ ಪಕ್ಷ ಬಿಟ್ಟು ಕಾಂಗ್ರೇಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ...

ಚಿಕ್ಕಬಳ್ಳಾಪುರ | ಕೋಮುವಾದದ ಮಾತುಗಳನ್ನಾಡುವ ಪ್ರಧಾನಿ ದೇಶಕ್ಕೆ ಬೇಕೆ?: ಸಚಿವ ಎಂ ಸಿ ಸುಧಾಕರ್

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು...

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...