ಪಾರ್ಟ್ ಟೈಮ್ ಕೆಲಸ ಕೊಡಿಸುವಂತೆ ಕೇಳಿದ್ದ ವಿದ್ಯಾರ್ಥಿನಿಯನ್ನು ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಇಂಟರ್ ವ್ಯೂ ಇದೆ ಎಂದು ಹೋಟೆಲ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದ ಉಪಾನ್ಯಾಸಕನೊಬ್ಬನನ್ನು ಗಂಗಮ್ಮನ ಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮದನ್‌ಕುಮಾರ್ ಬಂಧಿತ. ಈತ ಯಲಹಂಕದ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಕಾರ್ಯನಿರ್ವಹಿಸುತ್ತಿದ್ದನು.
ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಯುವತಿಯೋರ್ವಳು ಆಕೆಯ ಉಪನ್ಯಾಸಕರಿಗೆ ಎಲ್ಲಿಯಾದರೂ ಒಂದು ಕಡೆ ಪಾರ್ಟ್ ಟೈಮ್ ಜಾಬ್ ಕೊಡಿಸುವಂತೆ ಕೇಳಿದ್ದಳು. ಇದನ್ನೇ ಬಂಡವಾಳ ಮಾಡಿಕೊಂಡ ಉಪನ್ಯಾಸಕ ಆಕೆಯ ಜತೆಗೆ ತುಂಬಾ ಅಸಭ್ಯವಾಗಿ ನಡೆದುಕೊಂಡಿದ್ದಾನೆ.
ಅಲ್ಲದೇ, ಪಾರ್ಟ್ ಜಾಬ್ ಸಲುವಾಗಿ ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಇಂಟರ್ ವ್ಯೂ ಇದೆ ಎಂದು ಹೇಳಿ ಯುವತಿಯನ್ನು ಹೋಟೆಲ್‌ಗೆ ಕರೆದುಕೊಂಡು ಹೋಗಿದ್ದಾನೆ.
ಈ ಸುದ್ದಿ ಓದಿದ್ದೀರಾ? ಬೆಳಕಿನ ಹಬ್ಬ | ಪಟಾಕಿ ಸಿಡಿತದಿಂದ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಏರಿಕೆ
ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಈ ವೇಳೆ, ವಿಡಿಯೋ ಮಾಡಿ ಯುವತಿಗೆ ಬ್ಲಾಕ್‌ಮೇಲ್ ಮಾಡಿದ್ದಾನೆ.
ಉಪನ್ಯಾಸಕನ ನಿರಂತರ ಲೈಂಗಿಕ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿ ಗಂಗಮ್ಮನ ಗುಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಯುವತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಉಪನ್ಯಾಸಕ ಮದನ್ ಕುಮಾರ್‌ನನ್ನು ಬಂಧಿಸಿದ್ದಾರೆ.