ಬೆಂಗಳೂರು | ಇಬ್ಬರು ಮಕ್ಕಳನ್ನು ಕೊಂದಿದ್ದ ತಾಯಿ ಜೈಲಿನಲ್ಲೇ ಆತ್ಮಹತ್ಯೆ

Date:

ಇಬ್ಬರು ಮಕ್ಕಳನ್ನು ಕೊಂದು ಪರಪ್ಪನ ಅಗ್ರಹಾರ ಸೇರಿದ್ದ ತಾಯಿ ಗಂಗಾದೇವಿ ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

- Advertisement -

ಮೃತ ಗಂಗಾದೇವಿ ಜಾಲಹಳ್ಳಿ ವಿಲೇಜ್‌ನಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ನೆಲೆಸಿದ್ದಳು. ಏ.8ರಂದು (ಮಂಗಳವಾರ) ರಾತ್ರಿ ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಳು. ಬಳಿಕ ತಾನೇ ಮರುದಿನ ಬುಧವಾರ ಬೆಳಗ್ಗೆ 112ಕ್ಕೆ ಫೋನ್ ಮಾಡಿ ಪೊಲೀಸರಿಗೆ ವಿಷಯ ತಿಳಿಸಿ, ತಾನೂ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳು. ವಿಷಯ ತಿಳಿದ ತಕ್ಷಣ ಜಾಲಹಳ್ಳಿ ಪೊಲೀಸರು ಸ್ಥಳಕ್ಕೆ ತೆರಳಿ ಆಕೆಯನ್ನು ವಶಕ್ಕೆ ಪಡೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಘಟನೆ ಬಳಿಕ, ಆರೋಪಿಯನ್ನು ಬಂಧಿಸಿದ್ದ ಪೊಲೀಸರು ನಾಯ್ಯಾಲಯದ ಎದುರು ಆಕೆಯನ್ನು ಹಾಜರು ಪಡಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದರು. ಅದೇ ದಿನ ರಾತ್ರಿ ಗಂಗಾದೇವಿ ಜೈಲಿನ ಶೌಚಾಲಯದಲ್ಲಿ ತಾನು ಧರಿಸಿದ್ದ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ, ಗಂಗಾದೇವಿ ಸಾವನ್ನಪ್ಪಿದ್ದಾಳೆ.

ಮರಣೋತ್ತರ ಪರೀಕ್ಷೆ ಮಾಡಿ ನಂತರ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂಧ್ರಪ್ರದೇಶ ಮೂಲದ ಗಂಗಾದೇವಿ ಗಂಡನ ಜತೆಗೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ವಾಸವಾಗಿದ್ದಳು. ಆಕೆಯ ಪತಿ ಇತ್ತೀಚೆಗೆ ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿ ಜೈಲಿನಲ್ಲಿದ್ದಾನೆ. ಮಗಳ ಜತೆಗೆ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆ ಸ್ವತಃ ಗಂಗಾದೇವಿಯೇ ಪತಿಯ ವಿರುದ್ಧ ಪೊಲೀಸ್​ ಠಾಣೆಗೆ ದೂರು ನೀಡಿದ್ದಳು.

ಈ ಸುದ್ದಿ ಓದಿದ್ದೀರಾ? ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಎಪ್ರಿಲ್ 8ರಂದು ರಾತ್ರಿ ತನ್ನ ಮಗಳು ಲಕ್ಷ್ಮೀ (9) ಹಾಗೂ ಮಗ ಗೌತಮ್ (7) ನನ್ನು ತಾನೇ ಕೊಲೆ ಮಾಡಿದ್ದಳು. ಮಹಿಳೆಯನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದರು. ಆರೋಪಿ ಗಂಗಾದೇವಿ ಖಾಸಗಿ ಕಂಪನಿಯೊಂದರ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಳು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...