ಬೆಂಗಳೂರು | ಚಂದಾಪುರದ ಫ್ಲ್ಯಾಟ್‌ನಲ್ಲಿ ವಿವಸ್ತ್ರವಾಗಿ ಮಹಿಳೆಯ ಶವ ಪತ್ತೆ

Date:

ಬೆಂಗಳೂರಿನ ದಕ್ಷಿಣ ಹೊರವಲಯದಲ್ಲಿರುವ ಚಂದಾಪುರದ ಫ್ಲ್ಯಾಟ್‌ವೊಂದರಲ್ಲಿ ಅಪರಿಚಿತ ಮಹಿಳೆಯೊಬ್ಬರ ಶವ ಅರೆನಗ್ನವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

- Advertisement -

ಸಾವನ್ನಪ್ಪಿದ ಯುವತಿ ಮೂಲತಃ ಒಡಿಶಾದವಳು ಎನ್ನಲಾಗಿದೆ. ನಗರದ ಹೆಡ್ ಮಾಸ್ಟರ್ ಲೇಔಟ್‌ನ ನಾಲ್ಕನೇ ಮಹಡಿಯ ಫ್ಲಾಟ್‌ನಲ್ಲಿ ಮಧ್ಯಾಹ್ನ 2:30ರ ಸುಮಾರಿಗೆ ಶವ ಪತ್ತೆಯಾಗಿದೆ. ಫ್ಲ್ಯಾಟ್‌ನಲ್ಲಿ ದುರ್ವಾಸನೆ ಬರುತ್ತಿದ್ದ ಕಾರಣ ಮನೆಯ ಮಾಲೀಕರು ಫ್ಲ್ಯಾಟ್‌ಅನ್ನು ಪರಿಶೀಲಿಸಿದ್ದು, ಆಗ ಮೃತದೇಹ ಪತ್ತೆಯಾಗಿದೆ. ತಕ್ಷಣ ಅವರು ಪೊಲೀಸರಿಗೆ ಕರೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಯುವತಿ ಬಹುಶಃ ಐದು ದಿನಗಳ ಹಿಂದೆ ಸಾವನ್ನಪ್ಪಿದ್ದಾಳೆ. ಶವ ಬೆತ್ತಲೆಯಾಗಿದ್ದರೂ, ಯುವತಿಯ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಅಥವಾ ಗೀರುಗಳು ಪತ್ತೆಯಾಗಿಲ್ಲ ಎಂದು ಸೂರ್ಯನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಕೊಲೆ, ಅತ್ಯಾಚಾರ ಮತ್ತು ಅಪರಾಧ ಪ್ರಕರಣ ದಾಖಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಸುಮಾರು ಒಂದು ತಿಂಗಳ ಹಿಂದೆ ಫ್ಲಾಟ್ ಅನ್ನು ಯುವತಿ ಬಾಡಿಗೆಗೆ ಪಡೆದ್ದರು. ಯುವತಿಯ ತಂದೆ ಎಂದು ಪರಿಚಯಿಸಿಕೊಂಡಿದ್ದ 40ರ ಪ್ರಾಯದ ಪುರುಷ ಕೂಡ ಆಯೆಯ ಜೊತೆಗಿದ್ದರು. ಇದೀಗ ಪೊಲೀಸರು ಆತನಿಗಾಗಿ ಹುಡುಕುತ್ತಿದ್ದಾರೆ.

ಮನೆಯ ಮಾಲೀಕರು ತನ್ನ ಬಾಡಿಗೆದಾರರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸಿಲ್ಲ. ಅದೇ ಕಟ್ಟಡದಲ್ಲಿ ವಾಸವಾಗಿರುವ ಒಡಿಶಾ ಮೂಲದ ಮತ್ತೊಬ್ಬ ವ್ಯಕ್ತಿಯ ಶಿಫಾರಸಿನ ಮೇರೆಗೆ ಮನೆ ಮಾಲೀಕರು ಫ್ಲ್ಯಾಟ್‌ ಬಾಡಿಗೆಗೆ ನೀಡಲು ಒಪ್ಪಿಕೊಂಡಿದ್ದರು. ಬಾಡಿಗೆದಾರರು ತಾವು ಒಡಿಶಾ ಮೂಲದವರೆಂದು ಹೇಳಿಕೊಂಡಿದ್ದು, ತನ್ನ ಹೆಸರು ಸಪನ್ ಕುಮಾರ್ ಎಂದು ಪರಿಚರಿಸಿಕೊಂಡಿದ್ದರು ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಶಿವರಾತ್ರಿ ಆಚರಣೆ ವೇಳೆ ವ್ಯಕ್ತಿಯೊಬ್ಬನ ಹತ್ಯೆ: ಮೂವರ ಬಂಧನ

ಬಾಡಿಗೆದಾರರನ್ನು ರೆಫರ್ ಮಾಡಿದ್ದ ವ್ಯಕ್ತಿಯೂ ನಾಪತ್ತೆಯಾಗಿರುವುದು ಕುತೂಹಲ ಮೂಡಿಸಿದೆ. ಇಬ್ಬರೂ ಕೂಡ ತಮ್ಮ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಅವರನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ಬಂದಾಗ, ಫ್ಲ್ಯಾಟ್‌ನ ನೆಲದ ಮೇಲೆ ಸಿಗರೇಟ್ ತುಂಡುಗಳು ಹರಡಿಕೊಂಡಿದ್ದವು. ಅಡುಗೆಮನೆಯಲ್ಲಿನ ಪಾತ್ರೆಗಳನ್ನು ಸ್ವಚ್ಛಗೊಳಿಸಲಾಗಿರಲ್ಲ. ಮನೆ ಸಂಪೂರ್ಣ ಧೂಳಿನಿಂದ ತುಂಬಿತ್ತು ಎನ್ನಲಾಗಿದೆ.

ಇನ್ನು ನೆರಹೊರೆಯವರು ಒಡಿಸಾದ ಬಾಡಿಗೆದಾರರನ್ನು ಒಮ್ಮೆ ಅಥವಾ ಎರಡು ಬಾರಿ ಮಾತ್ರ ನೋಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...