ಬೆಂಗಳೂರು | ಏರ್ ಇಂಡಿಯಾ ಸಿಬ್ಬಂದಿಗೆ ತಾನು ‘ಉಗ್ರಗಾಮಿ’ ಎಂದು ಬೆದರಿಕೆ; ಪ್ರಯಾಣಿಕ ಪೊಲೀಸ್ ವಶಕ್ಕೆ

Date:

ಪ್ರಯಾಣಿಕನೊಬ್ಬ ತಾನು ‘ಉಗ್ರಗಾಮಿ’ ಎಂದು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಸಿಬ್ಬಂದಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆದರಿಕೆ ಹಾಕಿದ್ದ ಆರೋಪಿ ಆದರ್ಶ್ ಕುಮಾರ್ ಸಿಂಗ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. 

ಫೆಬ್ರವರಿ 17ರಂದು ಬೆಂಗಳೂರಿನಿಂದ ಲಖನೌಗೆ ಆರೋಪಿ ಆದರ್ಶ ಹೊರಟಿದ್ದನು. ಈ ಸಮಯದಲ್ಲಿ ವಿಮಾನ ಏರಲು ತೆರಳಿದ್ದ ಆತ ಕೊನೆ ಕ್ಷಣದಲ್ಲಿ ವಾಪಾಸ್ ಹಿಂತಿರುಗಿ ತೆರಳಲು ಮುಂದಾಗಿದ್ದಾನೆ. ಬಗ್ಗೆ ಏರ್ ಇಂಡಿಯಾ ಸಿಬ್ಬಂದಿ ಭದ್ರತಾ ಪಡೆಗೆ ಮಾಹಿತಿ ನೀಡಿದ್ದಾರೆ. ಪ್ರಯಾಣಿಕ ವಿಮಾನ ಏರಲು ತೆರಳಿ ವಾಪಾಸ್ ಆಗುತ್ತಿದ್ದ ಬಗ್ಗೆ ವಿಮಾನ ನಿಲ್ದಾಣದ ಭದ್ರತಾ ಪಡೆ ಸಿಬ್ಬಂದಿ ಪ್ರಶ್ನೆ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವೇಳೆ, ಆರೋಪಿ ಆದರ್ಶ ಕುಮಾರ್ ಭದ್ರತಾ ಸಿಬ್ಬಂದಿಯ ಪ್ರಶ್ನೆಗೆ, ‘ನಾನು ಭಯೋತ್ಪಾದಕ ಗುಂಪಿಗೆ ಸೇರಿದ್ದು, ಲಖನೌಗೆ ತೆರಳಲ್ಲ’ ಎಂದು ಬೆದರಿಕೆ ಹಾಕಿ ಉತ್ತರ ನೀಡಿದ್ದನು.

ಈ ಸುದ್ದಿ ಓದಿದ್ದೀರಾ? ಘೋಷಿತ ಕಾಯಿಲೆಗಳ ಪಟ್ಟಿಗೆ ಹಾವು ಕಡಿತ ಸೇರ್ಪಡೆ: ಆರೋಗ್ಯ ಇಲಾಖೆ

ಭದ್ರತಾ ಸಿಬ್ಬಂದಿ ತಕ್ಷಣವೇ ಆರೋಪಿ ಆದರ್ಶ ಕುಮಾರ್‌ನನ್ನು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಬೆಂಗಳೂರು ವಿಮಾನ ನಿಲ್ದಾಣ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಪ್ರಾರಂಭಕ್ಕೆ ನೀಡಿರುವ ಆದೇಶ ಹಿಂಪಡೆಯಲು ಒತ್ತಾಯಿಸಿ; ಜೂ.3ರಂದು ಪ್ರತಿಭಟನೆ

ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ನೀಡಿರುವ ಆದೇಶ ಹಿಂಪಡೆಯುವಂತೆ...

ಪ್ರತಿ ತಿಂಗಳು ನಾನು ಮತ್ತು ಸಿಎಂ ಸೇರಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡುತ್ತೇವೆ: ಡಿ ಕೆ ಶಿವಕುಮಾರ್

ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲವರ್ಧನೆಗೆ “ಕಾಂಗ್ರೆಸ್ ಕುಟುಂಬ” ಕಾರ್ಯಕ್ರಮ ರೂಪಿಸಲಾಗುವುದು....

ಬೆಂಗಳೂರು | ಮಾಲ್, ಮನರಂಜನಾ ಕೇಂದ್ರಗಳ ಸುರಕ್ಷತಾ ಕ್ರಮಗಳ ಪರಿಶೀಲನೆಗೆ ಸೂಚನೆ ನೀಡಿದ ಡಿಸಿಎಂ

ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಮಾಲ್‌ಗಳು, ಗೇಮಿಂಗ್ ಜೋನ್‌ಗಳು, ಮನರಂಜನಾ ಕೇಂದ್ರಗಳಲ್ಲಿ ಅಗ್ನಿ ದುರಂತ...