ಬೆಂಗಳೂರು | ಅನಿರೀಕ್ಷಿತವಾಗಿ ಬೈಕ್‌ ಸವಾರನಿಗೆ ಗುದ್ದಿದ ‘ಕೋಲೆ ಬಸವ’: ವಿಡಿಯೋ ವೈರಲ್

Date:

ಬೆಂಗಳೂರಿನಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೋಲೆ ಬಸವ ಬೈಕ್ ಸವಾರನೊಬ್ಬನಿಗೆ ಏಕಾಏಕಿ ಗುದ್ದಿ ಓಡಿ ಹೋಗಿದೆ. ಪರಿಣಾಮ ಎದುರಿನಿಂದ ಬರುತ್ತಿದ್ದ ಕ್ಯಾಂಟರ್ ಚಾಲಕನ ಸಮಯಪ್ರಜ್ಞೆಯಿಂದ ಬೈಕ್ ಸವಾರನ ಜೀವ ಉಳಿದಿದೆ.

- Advertisement -

ನಗರದ ಮಹಾಲಕ್ಷ್ಮೀ ಲೇಔಟ್ ಸ್ವಿಮ್ಮಿಂಗ್ ಪೂಲ್ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬೆಂಗಳೂರಿನಲ್ಲಿ ರಸ್ತೆ ಬದಿ ಮಹಿಳೆಯೊಬ್ಬರು ಕೋಲೆ ಬಸವನನ್ನು ಹಿಡಿದುಕೊಂಡು ಬರುತ್ತಿದ್ದರು. ಈ ವೇಳೆ, ಎದುರಿಗೆ ಬರುತ್ತಿದ್ದ ಬೈಕ್ ಸವಾರನ ಮೇಲೆ ಕೋಲೆ ಬಸವ ಎರಗಿ ಓಡಿ ಹೋಗಿದೆ. ಈ ವೇಳೆ, ಬೈಕ್ ಸವಾರನ ವಿರುದ್ಧ ದಿಕ್ಕಿನಲ್ಲಿ ಕ್ಯಾಂಟರ್ ವಾಹನ ಬರುತ್ತಿತ್ತು. ಬೈಕ್ ಸವಾರ ಕ್ಯಾಂಟರ್​ ಚಕ್ರದಡಿಗೆ ಬಿದ್ದಿದ್ದಾನೆ. ತಕ್ಷಣ ಎಚ್ಚೆತ್ತ ಚಾಲಕ ಬ್ರೇಕ್ ಹಾಕಿ ಕ್ಯಾಂಟರ್ ನಿಲ್ಲಿಸಿದ್ದಾನೆ. ಇದರಿಂದ ಬೈಕ್​ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇದನ್ನು ಓದಿದ್ದೀರಾ? ಏಪ್ರಿಲ್​ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಈ ಘಟನೆ ವೇಳೆ, ಸ್ಕೂಟರ್‌ ಸವಾರ ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಬೇಕಿತ್ತು. ಆದರೆ, ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅಪಘಾತ ತಪ್ಪಿದಂತಾಗಿದೆ.

Kole basava

ಕೋಲೆ ಬಸವ ಈ ರೀತಿ ಒಮ್ಮಿಂದೊಮ್ಮೆಲೇ ವರ್ತಿಸಿದ್ದು, ಜನರಲ್ಲಿ ಭಯ ಬೀಳಿಸುವಂತಿದೆ. ಸದ್ಯ ಈ ಅಪಘಾತದ ದೃಶ್ಯ ಎಲ್ಲೆಡೆ ವೈರಲ್ ಆಗಿದೆ.

ಅಲ್ಲದೇ, ಈ ಘಟನಾ ಸ್ಥಳದಲ್ಲಿ ವಾಹನಗಳು ಸಂಚರಿಸಲು ಎರಡು ಬದಿ ರಸ್ತೆಗಳಿವೆ. ಆದರೆ, ಒಂದು ಬದಿಯ ರಸ್ತೆಯ ಮೇಲೆ ವಾಹನಗಳನ್ನು ಪಾರ್ಕ್‌ ಮಾಡಲಾಗಿದೆ. ಪಾದಚಾರಿಗಳು ಈ ರಸ್ತೆಯಲ್ಲಿ ನಡೆದುಕೊಂಡು ಓಡಾಡುವಂತಾಗಿದೆ. ಅಲ್ಲದೇ, ದನಗಳು ಕೂಡ ರಸ್ತೆಯಲ್ಲಿ ಓಡಾಡುವಂತಾಗಿದೆ. ಸರಿಯಾದ ಪಾದಚಾರಿ ಮಾರ್ಗ ಇಲ್ಲದಿರುವುದು ಈ ಘಟನೆಗೆ ಕಾರಣ ಎಂದು ಹಲವರು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...