ಬೆಂಗಳೂರು | ಬಾತ್ ರೂಮ್‌ನಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ

Date:

ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯ ಬಾತ್‌ ರೂಮ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡದಿದೆ.

- Advertisement -

ಮನೆಯ ಬಾತ್‌ ರೂಮ್‌ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. ಪ್ರಭುಧ್ಯಾ (21) ಸಾವನ್ನಪ್ಪಿದ ಯುವತಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಯುವತಿಯ ಸಾವು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಪ್ರಭುಧ್ಯಾ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಯುಡಿಆರ್ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆ ನಡೆಸಿದ್ದಾರೆ.

“ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಯವಳಲ್ಲ. ಯಾರೋ ಕೊಲೆ ಮಾಡಿದ್ದಾರೆ. ನನ್ನ ಮಗಳು ನನಗೆ ಮಧ್ಯಾಹ್ನ ಕರೆ ಮಾಡಿದ್ದಳು. ಆಫೀಸ್‌ನಲ್ಲಿದ್ದೇನೆ, ಪಾನಿಪುರಿ ತಿಂದು ಮನೆಗೆ ಹೋಗುತ್ತೇನೆ ಎಂದು ಹೇಳಿದ್ದಳು. ನಾನು ಆಫೀಸ್‌ ಮುಗಿಸಿ ಮನೆಗೆ ಬಂದು ನೋಡಿದಾಗ ಮಗಳು ಬಾತ್‌ ರೂಮಿನಲ್ಲಿ ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು” ಎಂದು ತಾಯಿ ಸೌಮ್ಯ ಕಣ್ಣೀರು ಹಾಕಿದ್ದಾರೆ.

“ಪ್ರತಿದಿನ ಕಾಲೇಜಿನಿಂದ ಮನೆಗೆ ಬಂದ ಕೂಡಲೇ ಸೇಫ್ ಆಗಿ ತಲುಪಿದ್ದಕ್ಕೆ ಮೇಸೆಜ್ ಮಾಡುತ್ತಿದ್ದಳು. ಎಜುಕೇಷನ್ ಸಿಸ್ಟಮ್ ಪ್ರಶ್ನೆ ಮಾಡುತ್ತಿದ್ದಳು. ಮನೆಯ ಹಿಂಬದಿ ಡೋರ್ ಓಪನ್ ಆಗಿದೆ. ನನ್ನ ಮಗಳ ಮೊಬೈಲ್ ಕಳೆದು ಹೋಗಿದೆ. ನನ್ನ ಮಗಳನ್ನ ಕ್ರೂರವಾಗಿ ಕೊಲೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರಜ್ವಲ್-ರೇವಣ್ಣ ಲೈಂಗಿಕ ಹಗರಣ | ರೇವಣ್ಣಗೆ ಒಂದು ದಿನದ ಮಟ್ಟಿಗೆ ಜಾಮೀನು

ಇನ್ನು ಈ ಪ್ರಕರಣದ ಬಗ್ಗೆ ದಕ್ಷಿಣ ವಿಭಾಗ ಡಿಸಿಪಿ ಲೊಕೇಶ್ ಪ್ರತಿಕ್ರಿಯಿಸಿದ್ದು, “ಮೇ 15ರ ಸಂಜೆ 7:30ರ ಸುಮಾರಿಗೆ ಈ ಘಟನೆ ವರದಿಯಾಗಿದೆ. 21 ವರ್ಷದ ವಿದ್ಯಾರ್ಥಿಯ ಕೈ ಹಾಗೂ ಕುತ್ತಿಗೆಗೆ ಚಾಕು ಇರಿತ ಆಗಿದೆ. ಮನೆಯ ಬಾತ್ ರೂಂನಲ್ಲಿ ಘಟನೆ ನಡೆದಿದ್ದು, ಆತ್ಮಹತ್ಯೆಯೋ ಅಥವಾ ಕೊಲೆಯಾ ಅನ್ನೋದು ತನಿಖೆ ನಡೆಯುತ್ತಿದೆ. ಮನೆಯವರು ಸಾವಿನ ಹಿಂದೆ ಅನುಮಾನ ಇದೆ ಎಂದು ದೂರು ನೀಡಿದ್ದಾರೆ. ಈಗ ಕೇಸ್ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದೇವೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...