ಬೆಂಗಳೂರು | ‘ಓವರ್ ಟೇಕ್’ ಮಾಡಲು ಜಾಗ ಬಿಡಲಿಲ್ಲವೆಂದು ಕಾರಿನ ಮೇಲೆ ದಾಳಿ ನಡೆಸಿದ ದ್ವಿಚಕ್ರ ವಾಹನ ಸವಾರ

Date:

ಓವರ್ ಟೇಕ್ ಮಾಡಲು ಜಾಗ ಬಿಡಲಿಲ್ಲವೆಂದು ಕುಟಂಬವೊಂದು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದ್ವಿಚಕ್ರ ವಾಹನ ಸವಾರನೊಬ್ಬ ದಾಳಿ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಅಖಿಲ್ ಸಾಬು ಎಂಬುವವರು ತಮ್ಮ ಪತ್ನಿ ಹಾಗೂ ಮೂರು ವರ್ಷದ ಮಗಳ ಜೊತೆಗೆ ನಗರದ ಸರ್ಜಾಪುರ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದರು. ಅಖಿಲ್ ಸಾಬು ಅವರು ಮೂಲತಃ ಕೇರಳದವರಾಗಿದ್ದು, ಐಟಿ ವೃತ್ತಿಪರರಾಗಿದ್ದಾರೆ.

ಓವರ್ ಟೆಕ್ ಮಾಡಲು ಜಾಗ ಬಿಡಲಿಲ್ಲ ಎಂದು ರೊಚ್ಚಿಗೆದ್ದ ಬೈಕ್ ಸವಾರ ಏಕಾಏಕಿ ಕಾರು ಚಾಲಕನ ಮೇಲೆ ದಾಳಿ ನಡೆಸಿದ್ದಾನೆ. ಈ ಘಟನೆ ಸಂಬಂಧ ಕಾರು ಮಾಲೀಕ ಅಖಿಲ್ ಸಾಬು ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಏನಿದು ಘಟನೆ?

ದಂಪತಿ ತಮ್ಮ ಮೂರು ವರ್ಷದ ಮಗುವಿನೊಂದಿಗೆ ನಗರದ ಸರ್ಜಾಪುರದ ರಸ್ತೆಯಲ್ಲಿ ಸಂಚಾರ ಮಾಡುವಾಗ ಓವರ್‌ ಟೇಕ್ ಮಾಡಲು ಸೈಡ್ ಬಿಡಲಿಲ್ಲ ಎಂದು ದ್ವಿಚಕ್ರ ವಾಹನ ಸವಾರನೊಬ್ಬ ಏಕಾಏಕಿ ಕಾರಿನ ಮೇಲೆ ದಾಳಿ ನಡೆಸಿದ್ದಾನೆ.

ಮೊದಲಿಗೆ ಬೈಕ್‌ ಸವಾರ ಕಾರನ್ನು ಅಡ್ಡಗಟ್ಟುವ ವೇಳೆ ಹೆಲ್ಮೆಟ್‌ನಿಂದ ಕಾರಿಗೆ ಬೀಸಿದ್ದಾನೆ. ಬಳಿಕ, ಕಾರಿನ ಮುಂದೆ ವಾಹನ ನಿಲ್ಲಿಸಿ, ಮತ್ತೆ ಕೆಳಗೆ ಬಿದ್ದ ಹೆಲ್ಮೆಟ್ ತೆಗೆದುಕೊಂಡು ಕಾರಿನ ಗಾಜಿಗೆ ಹೊಡೆದಿದ್ದಾನೆ. ಪರಿಣಾಮ ಬೈಕ್ ಚಾಲಕ ಕಾರಿನ ಗ್ಲಾಸ್ ಒಡೆದು ಹಾಕಿದ್ದು ಕಾರಿನೊಳಗಿದ್ದ ಮಗಳಿಗೆ ಗಾಯಗಳಾಗಿವೆ ಎಂದು ಅಖಿಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಜಗದೀಶ್ ಎಂದು ಗುರುತಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೂರು ‘ಫೈವ್ ಸ್ಟಾರ್’ ಹೋಟೆಲ್‍ಗಳಿಗೆ ಬಾಂಬ್ ಬೆದರಿಕೆ; ಹೆಚ್ಚುತ್ತಿರುವ ಪ್ರಕರಣಗಳು

ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋಗಳು ವೈರಲ್​ ಆಗಿವೆ. ಈ ವಿಡಿಯೋದಲ್ಲಿ ಬೈಕ್ ಚಾಲಕ ಕಾರನ್ನು ಅಡ್ಡಗಟ್ಟುವುದನ್ನು ಕಾಣಬಹುದು. ಜತೆಗೆ, ನಡು ರಸ್ತೆಯಲ್ಲಿ ಕಾರು ಚಾಲಕ ಮತ್ತು ಬೈಕ್​ ಚಾಲಕರಿಬ್ಬರು ಬಡಿದಾಡಿಕೊಂಡ ದೃಶ್ಯ ಕಾಣಬಹುದು.

ಘಟನೆಯಲ್ಲಿ ಕಾರು ಚಾಲಕನ ಕಣ್ಣು, ಮೂಗು, ಕೆನ್ನೆಗೆ ಗಾಯವಾಗಿದೆ. ಅಷ್ಟೆ ಅಲ್ಲದೇ ದ್ವಿಚಕ್ರ ವಾಹನ ಸವಾರ ತನ್ನ ಹೆಲ್ಮೆಟ್​ನಿಂದ ಕಾರಿನ ಗಾಜು ಹೊಡೆದಿದ್ದರಿಂದ ಕಾರಿನಲ್ಲಿದ್ದ 3 ವರ್ಷದ ಮಗುವಿನ ಕೈಗೆ ಗಾಯವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮಹಾರಾಣಿ ಕಾಲೇಜು ಹಾಸ್ಟೆಲ್​​ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರಿನ ಮಹಾರಾಣಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಓರ್ವ ವಿದ್ಯಾರ್ಥಿನಿ ಡೆತ್‌ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು...

ದಾವಣಗೆರೆ | ಮುಚ್ಚಿರುವ ಸರ್ಕಾರಿ ಶಾಲೆಗಳ ಪುನರಾರಂಭಕ್ಕೆ ಒತ್ತಾಯ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನಲ್ಲಿ ಮುಚ್ಚಿರುವ ಮೂರು ಸರ್ಕಾರಿ...

ಕಲಬುರಗಿ | ತರಗತಿವಾರು ಲಭ್ಯವಿರದ ಪಠ್ಯಪುಸ್ತಕ ಒದಗಿಸುವಂತೆ ದಸಂಸ ಆಗ್ರಹ

ಪ್ರಸ್ತುತ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು, ತರಗತಿವಾರು ಲಭ್ಯವಿರದ ಪಠ್ಯಪುಸ್ತಕಗಳನ್ನು ಕೂಡಲೇ ವಿದ್ಯಾರ್ಥಿಗಳಿಗೆ...

ದರ್ಶನ್ ಬಂಧನ | ಪೊಲೀಸರ ಪ್ರಾಮಾಣಿಕ ತನಿಖೆ ಮತ್ತು ಕರ್ತವ್ಯ ಪ್ರಜ್ಞೆಯಿಂದ ಘಟನೆ ಬೆಳಕಿಗೆ: ದಯಾನಂದ

“ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈವರೆಗೆ 17 ಆರೋಪಿಗಳನ್ನು ಬಂಧಿಸಲಾಗಿದೆ. ಎಸಿಪಿ...