ಬೆಂಗಳೂರಿನ ‘ಮೆಟ್ರೋ’ ರೈಲು ಹಳಿಗೆ ಜಿಗಿದು ಯವುಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಘಟನೆ ನಡೆಸಿದೆ. ಹಳಿಯಿಂದ ಮೃತದೇಹವನ್ನು ಹೊರತೆಗೆಯಲಾಗಿದ್ದು, ಮೆಟ್ರೋ ಸಂಚಾರ ಪುನರಾರಂಭವಾಗಿದೆ.
ಧ್ರುವ್ ಟಕ್ಕರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಮೂಲತಃ ಮುಂಬೈ ಮೂಲದವನಾಗಿದ್ದು, ಬೆಂಗಳೂರಿನ ನ್ಯಾಷನಲ್ ಲಾ ಕಾಲೇಜಿನಲ್ಲಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಕ್ಕೆ ರೈಲು ಬರುತ್ತಿದ್ದಂತೆಯೇ ಯುವಕ ಹಳಿ ಮೇಲೆ ಜಿಗಿದಿದ್ದಾನೆ. ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ದಿಢೀರನೇ ಜಿಗಿದ ಪರಿಣಾಮ ಆತನನ್ನು ರೈಲು ಎಂಟು ಅಡಿಯಷ್ಟು ದೂರ ಎಳೆದೊಯ್ದಿದೆ. ಯುವಕನ ದೇಹ ಎರಡು ತುಂಡಾಗಿದೆ.
ಘಟನೆ ನಡೆಯುತ್ತಿದ್ದಂತೆಯೇ ಮೆಟ್ರೋ ಸಿಬ್ಬಂದಿ ರೈಲಿನಲ್ಲಿದ್ದ ಪ್ರಯಾಣಿಕರನೆಲ್ಲ ಕೆಳಗೆ ಇಳಿಸಿದ್ದಾರೆ. ಅತ್ತಿಗುಪ್ಪೆ ನಿಲ್ದಾಣದಲ್ಲಿ ರೈಲು ಓಡಾಟ ಸ್ಥಗಿತವಾಗಿತ್ತು. ಮಾಗಡಿ ರೋಡ್‌ನಿಂದ ವೈಟ್ ಫೀಲ್ಡ್‌ವರೆಗೆ ಮಾತ್ರ ಮೆಟ್ರೋ ಸಂಚಾರ ನಡೆಯುತ್ತಿತ್ತು. ಇದೀಗ, ಮೃತದೇಹವನ್ನು ಹೊರತೆಗೆದ ಬಳಿಕ, ಚಲ್ಲಘಟ್ಟದವರೆಗೂ ಮೆಟ್ರೋ ಸೇವೆ ಪುನರಾರಂಭವಾಗಿದೆ.
ಘಟನಾ ಸ್ಥಳಕ್ಕೆ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್.ಎಸ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | ರೈಲು ಹಳಿಗೆ ಹಾರಿದ ವ್ಯಕ್ತಿ; ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ
ಮೆಟ್ರೋ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವುದು ಇದೇ ಮೊದಲ ಪ್ರಕರಣವಾಗಿದೆ.