ಬೆಂಗಳೂರು | ಪ್ರೀತಿ ನಿರಾಕರಣೆ; ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಯುವಕ

Date:

Advertisements

ಬೇರೊಬ್ಬರ ಜತೆಗೆ ನಿಶ್ಚಿತಾರ್ಥವಾದ ಬಳಿಕ ಐದಾರು ವರ್ಷದ ಪ್ರೀತಿಯನ್ನು ಕಡೆಗಣಿಸುತ್ತಿದ್ದಕ್ಕೆ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಘಟನೆ ಬೆಂಗಳೂರಿನ ಕೆಂಗೇರಿಯ ಕೊಡಿಗೆಪಾಳ್ಯದಲ್ಲಿ ನಡೆದಿದೆ.

ಡಿ.6ರ ರಾತ್ರಿ ಈ ಘಟನೆ ನಡೆದಿದೆ. ರಾಕೇಶ್ ಮೃತ ದುರ್ದೈವಿ. ಈತನು ಆನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಳು ಗ್ರಾಮದವನು.

ರಾಕೇಶ್ ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ರಾಕೇಶ್, ಹೆಮ್ಮಿಗೆಪುರದಲ್ಲಿ ಯುವತಿಯೊಬ್ಬರು ಪರಿಚಯವಾಗಿದ್ದರು. ಕಳೆದ ಐದಾರು ವರ್ಷದಿಂದ ಇಬ್ಬರು ಪ್ರೀತಿ ಮಾಡುತ್ತಿದ್ದರು. ಮದುವೆ ವಿಚಾರವಾಗಿ ರಾಕೇಶ್ ತಂದೆ ಯುವತಿಯ ಮನೆಗೆ ಹೋಗಿ ಮಗಳನ್ನು ಮದುವೆ ಮಾಡಿ ಕೊಡುವಂತೆ ಕೇಳಿದ್ದಾರೆ.

Advertisements

ಇತ್ತೀಚೆಗೆ, ಯುವತಿ ಬೇರೊಬ್ಬ ಯುವಕನ ಜತೆಗೆ ಮದುವೆಗೆ ಒಪ್ಪಿಕೊಂಡಿದ್ದಳು. ನಿಶ್ಚಿತಾರ್ಥವೂ ಆಗಿತ್ತು. ಬಳಿಕ, ಯುವತಿ ರಾಕೇಶ್ನ ಜೊತೆಗೆ ಮಾತುಕತೆ ನಡೆಸುವುನ್ನು ಬಿಟ್ಟಿದ್ದಳು. ಪ್ರಿಯತಮೆಯ ಈ ವರ್ತನೆಯಿಂದ ಅನುಮಾನಗೊಂಡ ರಾಕೇಶ್, ಆಕೆಯನ್ನು ಪ್ರಶ್ನೆ ಮಾಡಲು ಯುವತಿಯ ಮನೆ ಬಳಿ ತೆರಳಿದ್ದಾನೆ. ಈ ವೇಳೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ.

ಗಲಾಟೆ ನಡುವೆ ಯುವತಿ ತನ್ನ ನಿರ್ಧಾರದ ಬಗ್ಗೆ ತಿಳಿಸಿದ್ದಾಳೆ. ಇದರಿಂದ ಮನನೊಂದ ರಾಕೇಶ್ ಯುವತಿಯ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಳೆದ 11 ತಿಂಗಳಲ್ಲಿ 16 ಸಾವಿರ ಸೈಬರ್ ಪ್ರಕರಣ ದಾಖಲು

ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಕೂಡಲೇ ರಾಕೇಶ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ರಾಕೇಶ್ ಬುಧವಾರ ರಾತ್ರಿ ಮೃತಪಟ್ಟಿದ್ದಾನೆ.

ಸದ್ಯ ರಾಕೇಶ್ ಕುಟುಂಬಸ್ಥರು ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಗನ ಸಾವಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X