ಹಳೆ ವೈಷಮ್ಯದ ಹಿನ್ನೆಲೆ, ಯುವಕನೊಬ್ಬನನ್ನು ನಡುರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಮರಸೂರು ಗ್ರಾಮದಲ್ಲಿ ನಡೆದಿದೆ.
ವಿಜಯ್ ಕುಮಾರ್ (27) ಕೊಲೆಯಾದವನು. ಫೆ.25ರಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ವಿಜಯ ಕುಮಾರ್‌ನನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಏನಿದು ಘಟನೆ?
ಮೃತ ವ್ಯಕ್ತಿ ವಿಜಯ್ ಕುಮಾರ್ ಈ ಹಿಂದೆ 2017ರಲ್ಲಿ ನಡೆದಿದ್ದ ಮನೋಜ್ ಅಲಿಯಾಸ್ ಬಬ್ಲು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದನು. ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಈತ ಐದು ವರ್ಷ ಜೈಲಿನಲ್ಲಿದ್ದನು.
ಕಳೆದ 7-8 ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದನು. ಮನೋಜ್ ಅಲಿಯಾಸ್ ಬಬ್ಲು ಕೊಲೆಯ ಪ್ರತಿಕಾರ ತೀರಿಸಿಕೊಳ್ಳಲು ಕಾಯುತ್ತಿದ್ದ ಆತನ ಸಹಚರರು ವಿಜಯ ಕುಮಾರ್‌ನನ್ನು ಕರೆದೊಯ್ದು ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಸುದ್ದಿ ಓದಿದ್ದೀರಾ? ‘ದೇವಾಲಯದ ತೀರ್ಥ ಪ್ರಸಾದ ಬೇಡ, ಉನ್ನತ ಶಿಕ್ಷಣಕ್ಕಾಗಿ ಬಸ್ ಬೇಕು’; ಸಿಎಂಗೆ ಪತ್ರ ಬರೆದ ವಿದ್ಯಾರ್ಥಿನಿ
ಮನೋಜ್ ಕುಮಾರ್ ಸಹೋದರ ಅರ್ಜುನ್ ವಿಜಯ್ ಕುಮಾರ್‌ನನ್ನು ಕೊಲೆ ಮಾಡಿದ್ದಾನೆ ಎಂದು ವಿಜಯ್ ಕುಮಾರ್ ತಂದೆ ಆರೋಪ ಮಾಡಿದ್ದಾರೆ.