ಮನೆಯಲ್ಲಿ ಏಕಾಂಗಿಯಾಗಿದ್ದ ವೃದ್ದೆಯ ಕೈ-ಕಾಲು ಕಟ್ಟಿ ಹಾಕಿ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಯೊಬ್ಬನನ್ನು ರಾಜರಾಜೇಶ್ವರಿನಗರದ ಪೊಲೀಸರು ಬಂಧಿಸಿದ್ದಾರೆ.
ರೌಡಿ ಕುಮಾರ ಅಲಿಯಾಸ್ ಲೊಡ್ಡೆ ಕುಮಾರ (30) ಬಂಧಿತ ಆರೋಪಿ. ಸದ್ಯ ಒಬ್ಬ ಆರೋಪಿಯನ್ನ ಬಂಧಿಸಿರುವ ರಾಜರಾಜೇಶ್ವರಿನಗರದ ಪೊಲೀಸರು ಇನ್ನುಳಿದ ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.
ಏನಿದು ಪ್ರಕರಣ?
ಜನವರಿ 9ರಂದು ರಾಜರಾಜೇಶ್ವರಿ ನಗರದ ಗೌರಮ್ಮ ಎಂಬುವವರು ಸಂಜೆ ತಮ್ಮ ಮೊಮ್ಮಕ್ಕಳನ್ನು ಟ್ಯೂಷನ್‌ಗೆ ಬಿಟ್ಟು, ಮನೆಗೆ ಬಂದಿದ್ದರು. ಇನ್ನೇನು ಬಾಗಿಲು ಹಾಕಬೇಕು ಎನ್ನುವಷ್ಟರಲ್ಲಿ ಅರೋಪಿಗಳು ಮನೆಗೆ ನುಗ್ಗಿ, ವೈದ್ದೆಯ ಕೈ-ಕಾಲು ಕಟ್ಟಿ ಹಾಕಿ, ಬಾಯಿಗೆ ಬಟ್ಟೆ ತುರುಕಿದ್ದರು.
ಬಳಿಕ, ಮನೆಯಲ್ಲಿದ್ದ 120 ಗ್ರಾಂ ಚಿನ್ನ, 100 ಗ್ರಾಂ ಬೆಳ್ಳಿ, 50 ಸಾವಿರ ನಗದು ದರೋಡೆ ಮಾಡಿ ಪರಾರಿಯಾಗಿದ್ದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೆಟ್ರೋ ಹಳಿಗೆ ಜಿಗಿಯುವವರ ಸಂಖ್ಯೆ ಹೆಚ್ಚಳ: ಭದ್ರತೆಗಾಗಿ 326 ಹೆಚ್ಚುವರಿ ಸಿಬ್ಬಂದಿ ನಿಯೋಜನೆ
ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯ ಓರ್ವ ಆರೋಪಿಯನ್ನು ಬಂಧಿಸಿದ್ದು, ಆತನಿಂದ ಕದ್ದ ವಸ್ತುಗಳನ್ನು ಹಾಗೂ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಇನ್ನು ಪ್ರಮುಖ ಆರೋಪಿಗೆ ಕಳ್ಳತನ ಮಾಡಲು ಸಹಾಯ ಮಾಡಿದ ಇನ್ನಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.