ಬೆಂಗಳೂರು | ಕಡಿಮೆ ಸಮಯದಲ್ಲಿ ಝೀರೋ ಬ್ಯಾಕ್ಟೀರಿಯಲ್‌ ಸಂಸ್ಕರಿಸಿದ ನೀರು ಉತ್ಪಾದನೆ; ದೇಶೀಯ ತಂತ್ರಜ್ಞಾನ ಅಳವಡಿಕೆ

Date:

ಅತ್ಯಾಧುನಿಕ ತಂತ್ರಜ್ಞಾನದ ಅಳವಡಿಕೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರು ಜಲಮಂಡಳಿ, ಕೇವಲ 2 ವಾರಗಳ ಸಮಯದಲ್ಲಿ ಐಐಎಸ್‌ಸಿ ವಿಜ್ಞಾನಿಗಳ ಸಹಯೋಗದಿಂದ, ಝೀರೋ ಬ್ಯಾಕ್ಟೀರಿಯಲ್‌ ಗುಣಮಟ್ಟದ ಸಂಸ್ಕರಣೆಯ ಸಾಮರ್ಥ್ಯದ ದೇಶೀಯ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದು ಪ್ರತಿ ದಿನ 1 ಕೋಟಿ ಲೀಟರ್‌ ಪರಿಸರ ಸ್ನೇಹೀ ಶುದ್ದೀಕರಿಸಿದ ಗುಣಮಟ್ಟದ ನೀರು ಉತ್ಪಾದನೆಯ ಸಾಮರ್ಥ್ಯ ಹೊಂದಿದೆ.

- Advertisement -

ಬೆಂಗಳೂರು ನಗರದಲ್ಲಿ ಪ್ರತಿ ದಿನ ಸುಮಾರು 1800 ಎಂಎಲ್‌ಡಿಯಷ್ಟು ತ್ಯಾಜ್ಯ ನೀರು ಉತ್ಪತ್ತಿಯಾಗುತ್ತಿದೆ. ಇದರಲ್ಲಿ ಬೆಂಗಳೂರು ಜಲಮಂಡಳಿಯ ತ್ಯಾಜ್ಯ ನೀರು ನಿರ್ವಹಣಾ ಘಟಕಗಳ ಮೂಲಕ ಪ್ರತಿ ದಿನ 1200 ಎಂಎಲ್‌ಡಿಯಷ್ಟು ನೀರಿನ ಸಂಸ್ಕರಣೆಯನ್ನು ಮಾಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸಂಸ್ಕರಣೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಗುಣಮಟ್ಟದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಈ ನೀರಿನಲ್ಲಿರುವಂತಹ ಸೂಕ್ಷ್ಮ ಬ್ಯಾಕ್ಟೀರಿಯಾಗಳು ಮಾನವನ ಸಂಪರ್ಕಕ್ಕೆ ಬಂದಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಇರುತ್ತದೆ. ಇದನ್ನ ತಪ್ಪಿಸುವ ನಿಟ್ಟಿನಲ್ಲಿ ಈ ನೀರನ್ನು ಗೃಹಪಯೋಗಿ ಬಳಕೆಗೆ ಬಳಸಬಾರದು ಹಾಗೂ ಮಾನವ ಸಂಪರ್ಕವಿಲ್ಲದ ಕಾರ್ಯಗಳಿಗೆ ಉಪಯೋಗಿಸಬೇಕು ಎನ್ನುವ ಎಚ್ಚರಿಕೆಯನ್ನು ನೀಡಲಾಗುತ್ತದೆ.

ಭಾರತದ ಪ್ರಮುಖ ವಿಜ್ಞಾನ ಸಂಶೋಧನಾ ಸಂಸ್ಥೆಯಾಗಿರುವಂತಹ ಐಐಎಸ್‌ಸಿ ವಿಜ್ಞಾನಿಗಳ ಸಹಯೋಗ ಮತ್ತು ಮಾರ್ಗದರ್ಶನದಲ್ಲಿ ಬೆಂಗಳೂರು ಜಲಮಂಡಳಿಯ ಎಂಜಿನಿಯರ್‌ಗಳು ತ್ಯಾಜ್ಯ ನೀರು ಸಂಸ್ಕರಣೆಯಲ್ಲಿ ದೇಶೀಯ ತಂತ್ರಜ್ಞಾನವನ್ನು ರೂಪಿಸಿದ್ದಾರೆ. ಈಗಾಗಲೇ, ಜಲಮಂಡಳಿಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತ್ಯಾಜ್ಯ ನೀರು ನಿರ್ವಹಣಾ ಘಟಕಗಳ ಮೂಲ ಸೌಲಭ್ಯಗಳನ್ನು ಬಳಸಿಕೊಳ್ಳುವ ಮೂಲಕ ಕಡಿಮೆ ವೆಚ್ಚದಲ್ಲಿ ದೇಶಿಯ ತಾಂತ್ರಿಕತೆಯನ್ನು ಅಳವಡಿಸುವ ಮೂಲಕ ಅತ್ಯುತ್ತಮ ಗುಣಮಟ್ಟದಲ್ಲಿ ತ್ಯಾಜ್ಯ ನೀರನ್ನು ಶುದ್ದೀಕರಣ ಮಾಡುವ ಮೂಲಕ ಝೀರೋ ಬ್ಯಾಕ್ಟೀರಿಯಲ್‌ ಸಂಸ್ಕರಿಸಿದ ನೀರು ಉತ್ಪಾದನೆಯನ್ನು ಇದು ಸಾಧ್ಯವಾಗಿಸಲಿದೆ.

ಈ ಝೀರೋ ಬ್ಯಾಕ್ಟೀರಿಯಲ್‌ ಸಂಸ್ಕರಿಸಿದ ನೀರಿನಲ್ಲಿ ಯಾವುದೇ ಹಾನಿಕಾರಕ ಬ್ಯಾಕ್ಟೀರಿಯಾಗಳು ಇರುವುದಿಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿಯ ಮಾನದಂಡಗಳ ಆಧಾರದ ಮೇಲೆ ಬೇರೆ ತಂತ್ರಜ್ಞಾನದ ಮೂಲಕ ಸಂಸ್ಕರಣೆ ಆಗುವಂತಹ ನೀರಿನಲ್ಲಿ ಕೆಲವು ಪ್ರಮಾಣದಲ್ಲಿ ಬ್ಯಾಕ್ಟೀರಿಯಾಗಳು ಇರುತ್ತವೆ. ಆದರೆ, ಝೀರೋ ಬ್ಯಾಕ್ಟೀರಿಯಲ್‌ ನೀರಿನಲ್ಲಿ ಯಾವುದೇ ಬ್ಯಾಕ್ಟೀರಿಯಾಗಳು ಇರುವುದಿಲ್ಲ. ಆದ್ದರಿಂದ, ಈ ನೀರು ಕುಡಿಯುವುದಕ್ಕೆ ಹೊರತುಪಡಿಸಿ ಬೇರೆ ಕಾರಣಗಳಿಗೆ ಯಾವುದೇ ಹಿಂಜರಿಕೆ ಇಲ್ಲದೆ ಬಳಸಬಹುದಾಗಿದೆ.

ಎರಡು ವಾರಗಳ ಹಿಂದೆ ಪ್ರಾರಂಭಿಸಲಾದ ಈ ಯೋಜನೆಯ ಮೂಲಕ ಇಂದು ಪ್ರತಿ ದಿನ ಸುಮಾರು 1 ಕೋಟಿ ಲೀಟರ್‌ನಷ್ಟು ಝೀರೋ ಬ್ಯಾಕ್ಟೀರಿಯಲ್‌ ಸಂಸ್ಕರಿಸಿದ ನೀರು ಉತ್ಪಾದನೆಯ ಸಾಮರ್ಥ್ಯವನ್ನು ಜಲಮಂಡಳಿ ಅಳವಡಿಸಿಕೊಂಡಿದೆ. ಇದೀಗ, ನಗರದ ಅಗರ, ಕೆ.ಸಿ ವ್ಯಾಲಿ ಹಾಗೂ ಬೆಳ್ಳಂದೂರು ಎಸ್‌ಟಿಪಿಗಳಲ್ಲಿ ಈ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿದೆ.

ಸುಧಾರಿತ ದೇಶೀಯ ತಂತ್ರಜ್ಞಾನ ಅಳವಡಿಕೆಯಿಂದ ಹೊರಬರುವಂತಹ ಝೀರೋ ಬ್ಯಾಕ್ಟೀರಿಯಲ್‌ ನೀರಿನ ಬಗ್ಗೆ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಧೃಢೀಕರಣ ಪತ್ರವನ್ನು ಪಡೆದುಕೊಳ್ಳಲಾಗಿದೆ. ಐಐಎಸ್‌ಸಿ ವಿಜ್ಞಾನಿಗಳು ಎಸ್‌ಟಿಪಿ ಟ್ರೀಟ್‌ಮೆಂಟ್‌ ಟ್ಯಾಂಕರ್‌ಗಳಿಂದ ಹೊರಬರುವ ಕಡೆಗಳಲ್ಲಿ ಹಾಗೂ ತಮ್ಮ ಪ್ರಯೋಗಶಾಲೆಗಳಲ್ಲಿ ಪರೀಕ್ಷೆಯನ್ನು ನಡೆಸಿದ್ದಾರೆ. ಪರೀಕ್ಷೆಯ ನಂತರ ಝೀರೋ ಬ್ಯಾಕ್ಟೀರಿಯಲ್‌ ಗುಣಮಟ್ಟದ ಬಗ್ಗೆ ಪ್ರಮಾಣೀಕರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮತ್ತೊಂದು ಕಾಲರಾ ಪ್ರಕರಣ ಪತ್ತೆ : 41ಕ್ಕೆ ಏರಿಕೆ

ಬೆಂಗಳೂರು ಪೂರ್ವಭಾಗದಲ್ಲಿರುವ ವಿಪ್ರೋ, ಹೆಚ್‌ಎಎಲ್‌ ಸೇರಿದಂತೆ ಹಲವಾರು ಐಟಿ ಕಂಪನಿಗಳು ಈಗಾಗಲೇ ಝೀರೋ ಬ್ಯಾಕ್ಟೀರಿಯಲ್‌ ನೀರಿಗೆ ಬೇಡಿಕೆಯಿಟ್ಟಿದ್ದಾರೆ. ಸ್ವಚ್ಚತೆ, ಏರ್‌ ಕಂಡಿಷನಿಂಗ್‌ ಕೂಲಿಂಗ್ ಸೇರಿದಂತೆ‌ ಹಲವಾರು ಕಾರ್ಯಗಳಿಗೆ ಇದನ್ನ ಬಳಸಬಹುದಾಗಿದೆ. ಬೇಡಿಕೆಯಿರುವ ಸ್ಥಳಗಳಿಗೆ ಜಲಮಂಡಳಿ ಈ ಸಂಸ್ಕರಿಸಿದ ನೀರನ್ನು ಸರಬರಾಜು ಮಾಡಲಿದೆ.

ಸಂಸ್ಕರಿಸಿದ ನೀರಿನ ಬಳಕೆಯನ್ನು ಹೆಚ್ಚಿಸುವುದರಿಂದ ಕಾವೇರಿ ನೀರಿನ ಮೇಲೆ ಒತ್ತಡವನ್ನು ಬಹಳಷ್ಟು ಕಡಿಮೆ ಮಾಡಬಹುದಾಗಿದೆ. ಈ ಸಂಸ್ಕರಣೆಯಲ್ಲಿ ಸುಧಾರಿತ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಐಐಎಸ್‌ಸಿ ವಿಜ್ಞಾನಿಗಳೂ ಜಲಮಂಡಳಿ ಜೊತೆ ಕೈಜೋಡಿಸಿದ್ದು, ಝೀರೋ ಬ್ಯಾಕ್ಟೀರಿಯಲ್‌ ಗುಣಮಟ್ಟದ ಸಂಸ್ಕರಿಸಿದ ನೀರು ಪಡೆಯಲು ಸಾಧ್ಯವಾಗಿದೆ.

ಇದು ಜಲಮಂಡಳಿಯ ಇತಿಹಾಸದಲ್ಲಿ ಹೊಸದೊಂದು ಮೈಲುಗಲ್ಲಾಗಿದೆ. ಸಂಸ್ಕರಿಸಿದ ನೀರಿನ ಬಳಕೆಯಲ್ಲಿ ಜನರ ಮನಃಸ್ಥಿತಿಯನ್ನು ಬದಲಾಯಿಸುವಲ್ಲಿ ಇದು ಸಹಕಾರಿಯಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...