ಬೆಂಗಳೂರು | ಐಟಿ ದಾಳಿ ಬೆನ್ನಲ್ಲೇ, ಉದ್ಯಮಿ ಮನೆ, ಕಚೇರಿ ಮೇಲೆ ಇಡಿ ದಾಳಿ

Date:

Advertisements

ಕಳೆದ ಕೆಲವು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ, ಗುತ್ತಿಗೆದಾರ ಅಂಬಿಕಾಪತಿ ಪುತ್ರ ಪ್ರದೀಪ್ ಮತ್ತು ಬಿಲ್ಡರ್ ಸಂತೋಷ್ ಅವರ ಮನೆಯಲ್ಲಿ ಕೋಟ್ಯಂತರ ನಗದು ಹಣ ಪತ್ತೆಯಾಗಿದೆ. ಈ ಐಟಿ ದಾಳಿ ಬೆನ್ನಲ್ಲೇ, ಇದೀಗ ನಗರದ ಉದ್ಯಮಿಯೊಬ್ಬರ ಮನೆಯ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎರಡು ಕಂಪನಿಗಳ ಎಂಡಿ ಮತ್ತು ಡೈರೆಕ್ಟರ್ ಆಗಿರುವ ಉದ್ಯಮಿ ಉಷಾ ರಾಮನಾನಿ ಮನೆ ಹಾಗೂ ಕಂಪನಿ ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿದೆ. 8 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ಅಕ್ಟೋಬರ್ 17ರ ಬೆಳಗ್ಗೆ 5 ಗಂಟೆಗೆ ಉದ್ಯಮಿಯ ಕಸವಿನಹಳ್ಳಿ ಬಳಿ ಇರುವ ನಿವಾಸ ಸೇರಿದಂತೆ ಕಂಪನಿ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಏನಿದು ಪ್ರಕರಣ?

Advertisements

ಉದ್ಯಮಿ ಉಷಾ ರಾಮನಾನಿ ಎಂಬುವವರು ಆಪ್ಟ್ ಸರ್ಕ್ಯೂಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ ಎಂಡಿ ಆಗಿದ್ದಾರೆ. ಇವರು 2011-16 ರವರೆಗೂ ಕಂಪನಿ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿ ಮಾಡಿ, ಎಸ್‌ಬಿಐ ಬ್ಯಾಂಕ್‌ನಿಂದ ₹354 ಕೋಟಿ ಸಾಲ ಪಡೆದಿದ್ದರು. ಆದರೆ, ಪಡೆದ ಸಾಲವನ್ನು ಹಿಂತಿರುಗಿಸದೆ ಬ್ಯಾಂಕ್‌ಗೆ ವಂಚನೆ ಮಾಡಿದ್ದರು.

ಈ ಹಿನ್ನೆಲೆ, ಎಸ್‌ಬಿಐ 2019ರಲ್ಲಿ ಕಂಪನಿ ವಿರುದ್ಧ ಸಿಬಿಐಗೆ ದೂರು ನೀಡಿತ್ತು. ಬಳಿಕ ಈ ಪ್ರಕರಣದ ತನಿಖೆ ಸಿಬಿಐಯಿಂದ ಇಡಿಗೆ ವರ್ಗಾವಣೆಯಾಗಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹106 ಕೋಟಿ ವೆಚ್ಚದ ಹೈಟೆಕ್ ಆಸ್ಪತ್ರೆಯಲ್ಲಿ ಸಿಬ್ಬಂದಿಯೇ ಇಲ್ಲ!

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಸದ್ಯ ಇಡಿ ಅಧಿಕಾರಿಗಳು ಉದ್ಯಮಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ಪಿಎಮ್‌ಎಲ್‌ಎ (PMLA) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

ಗದಗ | ಒಳಮೀಸಲಾತಿ ಜಾರಿ, ಬಹುದಿನಗಳ ಕನಸು ನನಸು ಮಾಡಿದ ಎಲ್ಲರಿಗೂ ಅಭಿನಂದನೆ: ಎಸ್. ಎನ್. ಬಳ್ಳಾರಿ

ಪರಿಶಿಷ್ಟ ಜಾತಿಗಳ ಮೂರು ದಶಕಗಳ ಒಳಮೀಸಲಾತಿ ಹೋರಾಟವನ್ನು ಮಾನ್ಯ ಸುಪ್ರೀಂ ಕೋರ್ಟ್...

Download Eedina App Android / iOS

X