ಬೆಂಗಳೂರು | ಅಗ್ನಿ ಅವಘಡ: ₹5 ಕೋಟಿ ಮೌಲ್ಯದ ಬಟ್ಟೆ, 40 ಬೈಕ್ ಭಸ್ಮ

Date:

Advertisements

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದ ಮಣಿಪಾಲ್​ ಕಂಟ್ರಿ ರೋಡ್​​ನಲ್ಲಿರುವ ಟಿಂಬರ್​ ಯಾರ್ಡ್​ನಲ್ಲಿ ಏ.23ರಂದು ಮಧ್ಯರಾತ್ರಿ 12.30ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ.

ಮೊದಲಿಗೆ ಮರದ ಪೀಸ್‌ಗಳನ್ನು ಇಟ್ಟಿದ್ದ ಟಿಂಬರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ, ಲೋವಬಲ್​ ಸ್ಪೋರ್ಟ್​​ ಹೆಸರಿನ ಗಾರ್ಮೆಂಟ್ಸ್​​​​​​​ ಕಟ್ಟಡ, ವಾಹನ ವಾಶ್​​ ಕೇಂದ್ರಕ್ಕೂ ಹಬ್ಬಿದೆ. ಜತೆಗೆ, ಬಲಭಾಗದಲ್ಲಿದ್ದ ಗ್ಯಾರೇಜ್‌ಗೂ ಬೆಂಕಿ ಹಬ್ಬಿದೆ.

ಬೆಂಕಿ ಅವಘಡದಿಂದ ಕಾರ್ ವಾಶ್ ಸರ್ವಿಸ್‌ನಲ್ಲಿದ್ದ 2 ಕಾರುಗಳು, ಗ್ಯಾರೇಜ್‌ನಲ್ಲಿದ್ದ 1 ಬಿಎಮ್‌ಡಬ್ಲೂ ಕಾರು, 1 ಟಾಟಾ ಏಸ್ ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಗಾಹುತಿಯಾಗಿವೆ. ಗಾರ್ಮೆಂಟ್ಸ್​​​​​ ಫ್ಯಾಕ್ಟರಿಗೆ ಬೆಂಕಿ ತಗುಲಿದ ಪರಿಣಾಮ ₹5 ಕೋಟಿಗೂ ಹೆಚ್ಚು ಮೌಲ್ಯದ ಬಟ್ಟೆ ನಾಶವಾಗಿದೆ. ಅದೃಷ್ಟವಶಾತ್ ಅಗ್ನಿ ಅವಘಡದಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ.

Advertisements

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಬಿಜೆಪಿ ಭದ್ರಕೋಟೆ ಬೆಂ. ದಕ್ಷಿಣದ ಮತದಾರರು ಹೇಳುತ್ತಿರೋದೇನು?

ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ 5ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X