ಬೆಂಗಳೂರು | ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ : ಅಪರಿಚಿತ ವ್ಯಕ್ತಿ ವಿರುದ್ಧ ಎಫ್​​ಐಆರ್​ ದಾಖಲು

Date:

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಕೆಲವು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್ ಬೆದರಿಕೆ ಕರೆ ಬಂದಿರುವುದಾಗಿ ತಿಳಿದುಬಂದಿದೆ. ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ.

ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಟರ್ಮಿನಲ್ 1ರ ಮ್ಯಾನೇಜರ್ ಗೀತಾ ರಾಣಿ ಅವರು ನೀಡಿದ ದೂರಿನ ಆಧಾರದ ಮೇಲೆ ಅಪರಿಚಿತ ಆರೋಪಿಗಳ ವಿರುದ್ಧ ಮೇ 2 ರಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.

ಏಪ್ರಿಲ್ 29 ರಂದು ಬೆಳಿಗ್ಗೆ ವಿಮಾನ ನಿಲ್ದಾಣದ ಮೇಲ್ ಐಡಿಗೆ, 209.85.218.54 ಐಪಿ ವಿಳಾಸದೊಂದಿಗೆ [email protected] ಇಮೇಲ್ ವಿಳಾಸದಿಂದ ‘Terrorzers111’ ಗುಂಪಿನಿಂದ ಬಾಂಬ್​ ಬೆದರಿಕೆ ಮೇಲ್​ ಬಂದಿದೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಯಾವುದೇ ಸಮಯದಲ್ಲಿ ಸ್ಫೋಟಗೊಳ್ಳುವ ಬಾಂಬ್‌ಗಳನ್ನು ಕೆಲವು ವಿಮಾನಗಳಲ್ಲಿ ಇರಿಸಲಾಗಿದೆ. ಜತೆಗೆ, ಗುಂಪಿನಿಂದ ಟರ್ಮಿನಲ್ 1ರ ಒಳಗೆ ನಾನಾ ಸ್ಥಳಗಳಲ್ಲಿ ಸ್ಫೋಟಕ ವಸ್ತುಗಳನ್ನು ಇರಿಸಲಾಗಿದೆ ಎಂದು ಬೆದರಿಕೆ ಮೇಲ್ ಬಂದಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ: ತುಷಾರ್ ಗಿರಿ ನಾಥ್

ವಿಮಾನ ನಿಲ್ದಾಣ ಸಿಬ್ಬಂದಿಯ ದೂರಿನ ಆಧಾರದ ಮೇಲೆ, ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ ಐಪಿಸಿ ಸೆಕ್ಷನ್‌ 501 (1) (ಬಿ), ಸೆಕ್ಷನ್ 507 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ವಾಯವ್ಯ ಕರ್ನಾಟಕ ಬದಲು ಕಿತ್ತೂರು ಕರ್ನಾಟಕ ಸಾರಿಗೆ ಎಂದು ನಾಮಕರಣಕ್ಕೆ ಚಿಂತನೆ: ಸತೀಶ್ ಜಾರಕಿಹೊಳಿ

200ನೇ ರಾಣಿ ಚನ್ನಮ್ಮನ ಕಿತ್ತೂರ ವಿಜಯೋತ್ಸವದ ಹಿನ್ನೆಲೆಯಲ್ಲಿ ವಾಯುವ್ಯ ಕರ್ನಾಟಕ ಸಾರಿಗೆ...

ಗದಗ | ವಂಚನೆ ಮಾಡಿದ ಕಂಪನಿಗಳ ವಿರುದ್ಧ ಕಠಿಣ ಕಾನೂನು ಕ್ರಮ : ಸಚಿವ ಎಚ್‌.ಕೆ. ಪಾಟೀಲ್ ಭರವಸೆ

‘ಜನರು ಕೆಲವು ವಂಚಕ ಕಂಪನಿಗಳ ಬಗ್ಗೆ ಜಾಗರೂಕರಾಗಿರಬೇಕು. ಕಂಪನಿಗಳ ಸತ್ಯಾಸತ್ಯತೆ ಪರಾಮರ್ಶಿಸಿ...

ಮಂಡ್ಯ | ರೈತರಿಗೆ ನೀರು ಒದಗಿಸದಿದ್ದರೆ ಗಗನಚುಕ್ಕಿ ಜಲಪಾತೋತ್ಸವದಲ್ಲಿ ಪ್ರತಿಭಟನೆ: ಮಾಜಿ ಶಾಸಕ ಅನ್ನದಾನಿ ಎಚ್ಚರಿಕೆ

ಮಂಡ್ಯ ಜಿಲ್ಲೆಯ ಮಳವಳ್ಳಿಯ ರೈತರ ಬೇಸಾಯಕ್ಕೆ ಅನುಕೂಲವಾಗುವಂತೆ ಕೆರೆಕಟ್ಟೆಗಳಿಗೆ ಮೊದಲು ನೀರು...

ಚಿತ್ರದುರ್ಗ | ಭದ್ರಾ ಮೆಲ್ದಂಡೆ ಯೋಜನೆ ಜಾರಿಗೆ ಸರ್ಕಾರದಿಂದ ಮೀನಮೇಷ: ರೈತರ ಆಕ್ರೋಶ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬಯಲು ಸೀಮೆಗೆ ನೀರು ಹರಿಸುವ ಭದ್ರಾ...