ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದೆ.
ಈ ಘಟನೆ ಶುಕ್ರವಾರ ರಾತ್ರಿ 10.45ರ ಸುಮಾರಿಗೆ ನಡೆದಿದೆ. ಆ್ಯಂಬುಲೆನ್ಸ್ ಚಾಲಕ ಸಿಟಿ ಮಾರುಕಟ್ಟೆ ಕಡೆಯಿಂದ ಗುಡ್ಡದಹಳ್ಳಿ ಮಾರ್ಗವಾಗಿ ವೇಗವಾಗಿ ಬಂದಿದ್ದಾನೆ. ಈ ವೇಳೆ, ನಿಯಂತ್ರಣ ತಪ್ಪಿ ಗುಡ್ಡದಹಳ್ಳಿ ಬಳಿ ನಿಂತಿದ್ದ ಕಾರಿಗೆ ಢಿಕ್ಕಿ ಹೊಡೆದಿದ್ದಾನೆ.
ಕಾರಿಗೆ ಢಿಕ್ಕಿ ಹೊಡೆದ ಸಂದರ್ಭದಲ್ಲಿ ಭಯಗೊಂಡ ಆ್ಯಂಬುಲೆನ್ಸ್ ಚಾಲಕ ಬ್ರೇಕ್ ಬದಲು ಎಕ್ಸ್‌ಲೇಟರ್ ತುಳಿದಿದ್ದಾನೆ. ಇದರ ಪರಿಣಾಮ ಕಾರಿನ ಮುಂದೆ ಇದ್ದ ಎರಡು ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಈ ಸುದ್ದಿ ಓದಿದ್ದೀರಾ? ಕೋಲಾರ | ಇವಿಎಂ ಮೆಷಿನ್ ಸಾಗಿಸುತ್ತಿದ್ದ ವಾಹನದ ಟೈರ್ ಬ್ಲಾಸ್ಟ್: ಪೊಲೀಸ್ ಬಂದೋಬಸ್ತ್
ಅಪಘಾತದ ಸಮಯದಲ್ಲಿ ಕಾರಿನಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಅದೃಷ್ಟವಶಾತ್ ಪಾರಾಗಿದ್ದಾರೆ. ದ್ವಿಚಕ್ರ ವಾಹನ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ಪಡೆಯುತ್ತಿದ್ದಾರೆ.
ಬ್ಯಾಟರಾಯನಪುರ ಸಂಚಾರ ಠಾಣಾ ಪೊಲೀಸರು ಆ್ಯಂಬುಲೆನ್ಸ್ ಚಾಲಕ ಸುಮಂತ್ನನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.