ಬೆಂಗಳೂರು | ಆರೋಪಿಯನ್ನು ಅಕ್ರಮ ಬಂಧನದಲ್ಲಿಟ್ಟಿದ್ದ ಅಮೃತಹಳ್ಳಿ ಪೊಲೀಸರು: ಮಾನವ ಹಕ್ಕುಗಳ ಆಯೋಗ ದಾಳಿ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಅಮೃತಹಳ್ಳಿ ಠಾಣೆಯ ಪೊಲೀಸರು ಓರ್ವ ಆರೋಪಿಯನ್ನು ಅಕ್ರಮವಾಗಿ ಬಂಧನದಲ್ಲಿಟ್ಟಿದ್ದರು. ಮಾನವ ಹಕ್ಕುಗಳ ಆಯೋಗ ದಾಳಿ ನಡೆಸಿ ಈ ವಿಚಾರ ಬಯಲಿಗೆಳೆದಿದೆ.

ಅಮೃತಹಳ್ಳಿ ಠಾಣೆಯ ಪೊಲೀಸರು ಫೆಬ್ರುವರಿ 1ರಂದು ಆರೋಪಿಯೊಬ್ಬರನ್ನು ಬಂಧನ ಮಾಡಿ 10 ದಿನಗಳ ಕಾಲ ಅಕ್ರಮ ಬಂಧನದಲ್ಲಿಟ್ಟಿತ್ತು. ಈ ಬಗ್ಗೆ ಆರೋಪಿಯ ಕುಟುಂಬಸ್ಥರಿಗೆ ಮಾಹಿತಿ ನೀಡಿರಲಿಲ್ಲ. ಜತೆಗೆ, ದಾಖಲಾತಿಯಲ್ಲಿ ನಮೂದಿಸಿರಲಿಲ್ಲ.

ಯಾಸಿನ್ ಮೆಹಬೂಬ್ ಖಾನ್ ವಿರುದ್ಧ 2023ರಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು. ಆತನ ವಿರುದ್ಧ ಪ್ರಕರಣ ದಾಖಲಾದ ಬಳಿಕ, ಆತ ಮುಂಬೈಯಲ್ಲಿ ತಲೆಮರೆಸಿಕೊಂಡಿದ್ದನು. ಆರೋಪಿಯನ್ನು ಬಂಧನ ಮಾಡಲು ನ್ಯಾಯಾಲಯ ಕೂಡ ವಾರೆಂಟ್ ಜಾರಿ ಮಾಡಿತ್ತು. ಪೊಲೀಸರು ವಾರೆಂಟ್ ಆಧರಿಸಿ ಮುಂಬೈನಲ್ಲಿ ಆರೋಪಿಯನ್ನು ಬಂಧಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆದರೆ, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದ ಬಗ್ಗೆ ದಾಖಲಾತಿಯಲ್ಲಿ ಉಲ್ಲೇಖಿಸಿರಲಿಲ್ಲ. ಕೋರ್ಟ್‌ಗೂ ಹಾಜರು ಪಡಿಸಿರಲಿಲ್ಲ. ಆರೋಪಿಯ ಮನೆಯವರಿಗೂ ಈ ಬಗ್ಗೆ ಮಾಹಿತಿ ನೀಡಿರಲಿಲ್ಲ.

ಅಡ್ವೋಕೇಟ್ ಮಜೀದ್ ಠಾಣೆಗೆ ಭೇಟಿ ನೀಡಿದಾಗ ಆರೋಪಿ ತನ್ನ ಬಂಧನದ ಬಗ್ಗೆ ಅಡ್ವೋಕೇಟ್‌ಗೆ ಮಾಹಿತಿ ನೀಡಿದ್ದರು. ಹೀಗಾಗಿ ಮಾನವ ಹಕ್ಕುಗಳ ಆಯೋಗಕ್ಕೆ ಆರೋಪಿಯ ಕುಟುಂಬ ದೂರು ನೀಡಿತ್ತು. ಬಳಿಕ ಮಾನವ ಹಕ್ಕುಗಳು ಆಯೋಗದ ಡಿವೈಎಸ್‌ಪಿ ಸುಧೀರ್ ಹೆಗ್ಡೆ ನೇತೃತ್ವದಲ್ಲಿ ಅಧಿಕಾರಿಗಳ ದಾಳಿ ನಡೆದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಿಟ್‌ ಆ್ಯಂಡ್ ರನ್‌ಗೆ 62 ವರ್ಷದ ವೃದ್ಧೆ ಬಲಿ

ಫೆ.10ರಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಅಮೃತಹಳ್ಳಿ ಪೊಲೀಸ್ ಠಾಣೆ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ ನಡೆಸಿತ್ತು. ವೇಳೆ ಅಮೃತಹಳ್ಳಿ ಪೊಲೀಸರು, ಆರೋಪಿಯನ್ನ ಅಕ್ರಮವಾಗಿ ಬಂಧನದಲ್ಲಿಟ್ಟಿರುವುದು ಪತ್ತೆಯಾಗಿದೆ.

ಸದ್ಯ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಸದ್ಯ ಅಧಿಕಾರಿಗಳು ಇನ್ಸ್ಪೆಕ್ಟರ್​, ಸಿಬ್ಬಂದಿ ವಿಚಾರಣೆ ಮಾಡುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಡಿವೈಎಫ್‌ಐ 12ನೇ ರಾಜ್ಯ ಸಮ್ಮೇಳನ, ಅಂಗಾಗ ದಾನ ಪ್ರತಿಜ್ಞೆ ಮಾಡಿದ ಕಾರ್ಯಕರ್ತರು

ಡಿವೈಎಫ್‌ಐ 12ನೇ ರಾಜ್ಯ ಸಮ್ಮೇಳನದಲ್ಲಿ ಭಾಗಿಯಾಗಿದ್ದ ಕಾರ್ಯಕರ್ತರು, ಅಂಗಾಗ ದಾನ ಮಾಡುವ...

ಜೈಲು ಸೇರಿದ ಬಜರಂಗದಳ ಕಾರ್ಯಕರ್ತರನ್ನು ಭೇಟಿಯಾದ ಶೋಭಾ ಕರಂದ್ಲಾಜೆ

ಲವ್ ಜಿಹಾದ್​ ಪ್ರಕರಣದಲ್ಲಿ ​ಹಲ್ಲೆ ಆರೋಪದಡಿ ಚಿಕ್ಕಮಗಳೂರು ಜಿಲ್ಲಾ ಕಾರಾಗೃಹ ಸೇರಿರುವ...

ವಿಜಯಪುರ | ಫೆ.28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು...

ಬಾಗಲಕೋಟೆ | ಬೇಸಿಗೆಗೂ ಮುನ್ನವೇ ಬಿಸಿಲಿನ ಧಗೆ, ಮಣ್ಣಿನ ಮಡಕೆಗಳತ್ತ ಜನರ ಚಿತ್ತ

ಬೇಸಿಗೆಯ ಆರಂಭದಲ್ಲೇ ಬಿಸಿಲ ತಾಪಕ್ಕೆ ಉತ್ತರ ಕರ್ನಾಟಕದ ಜನ ಹೈರಾಣಾಗಿದ್ದು, ಬಾಗಲಕೋಟೆ...