ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಿಂದ ಒಂದಾದರ ಮೇಲೊಂದರಂತೆ ಅಗ್ನಿ ಅವಘಡ ಪ್ರಕರಣಗಳು ವರದಿಯಾಗುತ್ತಿವೆ. ಇದೀಗ, ನಗರದ ವೀರಭದ್ರ ನಗರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, 10ಕ್ಕೂ ಹೆಚ್ಚು ಖಾಸಗಿ ಬಸ್‌ಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಬೆಂಗಳೂರಿನ ವೀರಭದ್ರ ನಗರದಲ್ಲಿ ಈ ಘಟನೆ ನಡೆದಿದೆ. ಕಟ್ಟಿಂಗ್ ಹಾಗೂ ವೆಲ್ಡಿಂಗ್ ಮೆಷಿನ್ ಬಳಸಿ ಕೆಲಸ ಮಾಡಲಾಗುತ್ತಿತ್ತು. ಈ ವೇಳೆ ಬಸ್‌ಗಳಿಗೆ ಬೆಂಕಿಯ ಕಿಡಿ ತಗುಲಿದೆ. ಒಂದರ ಹಿಂದೊಂದರಂತೆ ಅಕ್ಕಪಕ್ಕ ನಿಲ್ಲಿಸಿದ್ದ 10ಕ್ಕೂ ಹೆಚ್ಚು ಬಸ್‌ಗಳು ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಯಾವುದೇ ಪ್ರಾಣ ಹಾನಿ ನಡೆದಿರುವ ಬಗ್ಗೆ ವರದಿಯಾಗಿಲ್ಲ.
ತನಿಖೆ ಬಳಿಕ ಅಗ್ನಿ ಅವಘಡಕ್ಕೆ ನಿಖರ ಮಾಹಿತಿ ತಿಳಿದು ಬರಲಿದೆ. ಅಗ್ನಿ ಅವಘಡದಿಂದ ಅದೃಷ್ಟವಶಾತ್ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? ಭ್ರಷ್ಟ ಅಧಿಕಾರಿಗಳ ಮನೆ-ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ 18 ಜನ ಸಾವನ್ನಪ್ಪಿದ್ದರು. ಈ ದುರಂತ ಮಾಸುವ ಮುನ್ನವೇ, ಒಂದಾಂದ ಮೇಲೊಂದರಂತೆ ಅಗ್ನಿ ಅವಘಡಗಳು ಸಂಭವಿಸುತ್ತಿವೆ.