ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸುತ್ತಿವೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ನಗರದ ಕುಂಬಾರಪೇಟೆಯ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಇದೀಗ, ಶೂ ಮತ್ತು ಬಟ್ಟೆ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇಡೀ ಮಳಿಗೆ ಹೊತ್ತಿ ಉರಿದಿದೆ.
ನ.27ರ ರಾತ್ರಿ ಚಿಕ್ಕಜಾಲ ಬಳಿ ರಾತ್ರಿ 10 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಮಳಿಗೆ ಹೊತ್ತಿ ಉರಿದಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಯಲ್ಲಿ ಸುಟ್ಟು ಹೋಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಬೆಂಕಿ ಹೊತ್ತಿ ಕೊಂಡ ಕೂಡಲೇ ಅಗ್ನಿಶಾಮಕ ದಳಕ್ಕೆ ಸ್ಥಳೀಯರು ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅಗ್ನಿ ಶಾಮಕದಳ ಸಿಬ್ಬಂದಿ ಮಳಿಗೆಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದ್ದಾರೆ.
ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಾಂಪ್ರದಾಯಿಕ ಗರಡಿ ಮನೆಗೆ ಹೂಡಿಕೆ ಮಾಡಿದ ಕ್ರಿಕೆಟಿಗ ಧೋನಿ
ನ.20 ರಂದು ಮಧ್ಯಾಹ್ನ ಬೆಂಗಳೂರಿನ ಕುಂಬಾರಪೇಟೆಯ ಪ್ಲಾಸ್ಟಿಕ್ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು.