ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯ ಬಾತ್ ರೂಮ್ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಘಟನೆ ಬೆನ್ನಲ್ಲೇ, ಇದೀಗ ಮತ್ತೊಬ್ಬ ಯುವತಿಯ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.
ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಹೀಲಲಿಗೆ ಬಳಿಯಿರುವ ಬಿಸಿಇಟಿ ಎಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆಯಾಗಿದೆ.
ಹರ್ಷಿತಾ (18) ಮೃತ ಯುವತಿ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕರಡಿಹಳ್ಳಿ ಗ್ರಾಮದ ವಿದ್ಯಾರ್ಥಿನಿ. ಗುರುವಾರ ರಾತ್ರಿ ಹಾಸ್ಟೆಲ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.
ಬೆಂಗಳೂರು ಹೊರವಲಯ ಚಂದಾಪುರ ಸಮೀಪದ ಹೀಲಲಿಗೆಯಲ್ಲಿನ ಕಾಲೇಜ್ ಅಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಎಂಜಿನಿಯರಿಂಗ್ ಓದುತ್ತಿದ್ದಳು. ಹರ್ಷಿತಾ ಕಾಲೇಜಿನ ವಸತಿ ನಿಲಯದಲ್ಲಿದ್ದು, ವಿದ್ಯಾಭ್ಯಾಸ ಮಾಡುತ್ತಿದ್ದಳು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಾತ್ ರೂಮ್ನಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ
ಮರಣೋತ್ತರ ಪರೀಕ್ಷೆಯ ನಂತರ ಇದು ಆತ್ಮಹತ್ಯೆಯೋ? ಕೊಲೆಯೋ ಎನ್ನುವುದು ತಿಳಿದು ಬರಬೇಕಿದೆ.