ಬೆಂಗಳೂರು | ನೀರಿನ ಸಮಸ್ಯೆ ಬಗೆಹರಿಸಲು ವಾರ್ಡ್‌ವಾರು ನೋಡಲ್ ಅಧಿಕಾರಿ ನೇಮಕ

Date:

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ನೀರಿನ ಸಮಸ್ಯೆ ಉಲ್ಬಣವಾಗುತ್ತಿದೆ. ಟ್ಯಾಂಕರ್ ನೀರು ದುಬಾರಿಯಾಗಿದೆ. ಈ ಮದ್ಯೆ ನೀರಿನ ಬಿಕ್ಕಟ್ಟನ್ನು ನಿವಾರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಜಲಮಂಡಳಿ ವತಿಯಿಂದ ವಾರ್ಡ್‌ವಾರು ನೋಡಲ್ ಅಧಿಕಾರಿ ನೇಮಕ ಮಾಡಿ ಆದೇಶ ಹೊರಡಿಸಿದೆ.

- Advertisement -

ಬಿಬಿಎಂಪಿ ವ್ಯಾಪ್ತಿಯ ರಾಜರಾಜೇಶ್ವರಿ ನಗರ ವಲಯದಲ್ಲಿ ಪ್ರಸ್ತುತ ಕುಡಿಯುವ ನೀರಿನ ಅಭಾವ ಹೆಚ್ಚಾಗಿದ್ದು, ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿವೆ. ಸಾರ್ವಜನಿಕರಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಒದಗಿಸುವ ಹಿತದೃಷ್ಟಿಯಿಂದ ಬೆಂಗಳೂರು ಜಲಮಂಡಳಿ ಮತ್ತು ಬಿಬಿಎಂಪಿ ಈ ಎರಡು ಇಲಾಖೆಗಳ ಅಧಿಕಾರಿಗಳು ತುರ್ತು ಅಗತ್ಯ ಕ್ರಮ ಕೈಗೊಂಡು, ನೀರಿನ ಸಮಸ್ಯೆಯನ್ನು ಬಗೆಹರಿಸಲು ರಾಜರಾಜೇಶ್ವರಿ ವಲಯದ 14 ವಾರ್ಡ್‌ಗಳಿಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಮತ್ತೆ ಮೂವರು ಶಂಕಿತರನ್ನು ವಶಕ್ಕೆ ಪಡೆದ ಎನ್‌ಐಎ

ನಿಯೋಜನೆಗೊಂಡಿರುವ ನೋಡಲ್‌ ಅಧಿಕಾರಿಗಳು ತಮಗೆ ವಹಿಸಿರುವ ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ, ಸಂಘ/ಸಂಸ್ಥೆಗಳಿಂದ ದೂರುಗಳು ಬಂದ ತಕ್ಷಣ ಜಲಮಂಡಳಿಯ ಅಭಿಯಂತರರೊಂದಿಗೆ ಸಂಪರ್ಕ ಸಾಧಿಸಿ, ಸಮನ್ವಯದೊಂದಿಗೆ ಬೋರ್‌ವೆಲ್‌ಗಳಲ್ಲಿ ನೀರಿಲ್ಲದ ಕಡೆ ನೀರಿನ ಟ್ಯಾಂಕರ್‌ಗಳ ಮೂಲಕ ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದೆ.

ಸೈಜ್

ಕುಡಿಯುವ ನೀರಿನ ಸಮಸ್ಯೆಗೆ ನಿಯೋಜಿಸಿರುವ ನೋಡಲ್ ಅಧಿಕಾರಿಗಳ ಮೇಲುಸ್ತುವಾರಿಯನ್ನು ನೋಡಿಕೊಳ್ಳಲು ಮುಖ್ಯ ಅಭಿಯಂತರ ರಾಘವೇಂದ್ರ ಪ್ರಸಾದ್ ರವರಿಗೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...