ಬೆಂಗಳೂರಿಗೆ ಪ್ರಧಾನಿ ಮೋದಿ; ಸಂಚಾರ ಮಾರ್ಗ ಬದಲಾವಣೆ

Date:

Advertisements

ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದ್ದು, ರಾಜಕೀಯ ಪಕ್ಷಗಳ ಪ್ರಚಾರ ಭರಾಟೆ ಜೋರಾಗಿದೆ. ಏ.20ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಈ ಹಿನ್ನೆಲೆ, ನಗರದ ನಾನಾ ಭಾಗಗಳ ಸಂಚಾರ ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗಿದೆ.

ಏ.20ರಂದು ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ನಗರದ ಕೆಲವೆಡೆ ವಾಹನ ಸಂಚಾರ ನಿಷೇಧಿಸಲಾಗಿದೆ. ಕೆಲವೆಡೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಪ್ಯಾಲೇಸ್‌ ರಸ್ತೆ, ಜಯಮಹಲ್ ರಸ್ತೆ, ರಮಣಮಹರ್ಷಿರಸ್ತೆ, ಮೌಂಟ್ ಕಾರ್ಮೆಲ್ ಕಾಲೇಜ್ ರಸ್ತೆ, ಎಂ.ವಿ. ಜಯರಾಮ್‌ ರಸ್ತೆ, ಸಿ.ವಿ. ರಾಮನ್ ರಸ್ತೆ, ನಂದಿದುರ್ಗರಸ್ತೆ, ಮೇಕ್ರಿ ಸರ್ಕಲ್‌ನಿಂದ ಯಶವಂತಪುರ ರಸ್ತೆವರೆಗೆ, ವಸಂತನಗರರಸ್ತೆ, ಬಳ್ಳಾರಿ ರಸ್ತೆ, ತರಳಬಾಳು ರಸ್ತೆ ಈ ರಸ್ತೆಗಳ ಬದಲಿಗೆ ಪರ್ಯಾಯ ರಸ್ತೆ ಬಳಸಿ ಎಂದು ಸೂಚಿಸಿದೆ.

Advertisements

ಸಿಎಂಐಟಿ ಜಂಕ್ಷನ್, ನ್ಯೂ ಬಿಇಎಲ್ ಜಂಕ್ಷನ್, ಮೈಸೂರು ಬ್ಯಾಂಕ್ ಜಂಕ್ಷನ್, ಬಿಹೆಚ್ಇಎಲ್ ಜಂಕ್ಷನ್, ಹೆಬ್ಬಾಳ ಜಂಕ್ಷನ್, ಬಸವೇಶ್ವರ ಜಂಕ್ಷನ್ ಮೂಲಕ ಸಂಚರಿಸಲು ನಗರ ಸಂಚಾರ ಪೊಲೀಸರು ಸೂಚಿಸಿದ್ದಾರೆ.

ಭಾರೀ ಸರಕು ಸಾಗಾಣಿಕಾ ವಾಹನಗಳ ಸಂಚಾರವನ್ನು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ನಗರದೊಳಗೆ ಪ್ರವೇಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸಿ.ಎಂ.ಟಿ.ಐ. ಜಂಕ್ಷನ್, ನ್ಯೂ ಬಿ.ಇ.ಎಲ್. ಜಂಕ್ಷನ್, ಓಲ್ಡ್ ಉದಯ ಟಿವಿ ಜಂಕ್ಷನ್, ಮೈಸೂರು ಬ್ಯಾಂಕ್ ಜಂಕ್ಷನ್,  ಬಿ.ಹೆಚ್.ಇ.ಎಲ್. ಜಂಕ್ಷನ್, ಹಜ್ ಕ್ಯಾಂಪ್ ನಂದಿದುರ್ಗ ರಸ್ತೆ, ಹೆಬ್ಬಾಳ ಜಂಕ್ಷನ್, ಬಸವೇಶ್ವರ ಸರ್ಕಲ್, ಯಶವಂತಪುರ ಗೋವರ್ಧನ್ ಬಳಿ ಭಾರೀ ಸರಕು ಸಾಗಾಣಿಕಾ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದಿದೆ.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಮತದಾನ ಮಾಡಿದವರಿಗೆ ಜ್ಯೂಸ್, ತಿಂಡಿ ನೀಡಲು ಮುಂದಾದ ಹೋಟೆಲ್‌ಗಳು

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್​ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಬಿಗಿ ಪೊಲೀಸ್​ ಬಂದೂಬಸ್ತ್ ಮಾಡಲಾಗಿದೆ. ಭದ್ರತೆಗಾಗಿ ಬರೊಬ್ಬರಿ ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.

ಜತೆಗೆ, ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್, ರಮನ್ ಗುಪ್ತಾ ನೇತೃತ್ವದಲ್ಲಿ ಭದ್ರತೆ ಮಾಡಲಾಗಿದೆ. ನಾಲ್ವರು ಡಿಸಿಪಿ, ಎಸಿಪಿ, ಇನ್ಸ್ ಪೆಕ್ಟರ್, ಸಬ್ ಇನ್ಸ್ಪೆಕ್ಟರ್, ಹೆಡ್​ ಕಾನ್ಸ್​ಟೇಬಲ್​, ಪೊಲೀಸ್​ ಪೇದೆ, ಸಂಚಾರ ಪೊಲೀಸ್ ಸಿಬ್ಬಂದಿ ಸೇರಿ ಒಟ್ಟು ಎರಡು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತಗಾಗಿ ನಿಯೋಜಿಸಲಾಗಿದೆ. ಸಮಾವೇಶ ನಡೆಯುವ ಅರಮನೆ ಮೈದಾನ, ಹೆಲಿಪ್ಯಾಡ್ , ಮೇಕ್ರಿ ಸರ್ಕಲ್ ಹಾಗೂ ಬಳ್ಳಾರಿ ರಸ್ತೆಯಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X